ಬೆಂಗಳೂರು:ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ 40% ಕಮಿಷನ್​ ಆರೋಪದ ಕುರಿತಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನ್ಯಾಯಾಲಯ ಸಮನ್ಸ್​ ಜಾರಿ ಮಾಡಿದೆ.
ಕಳೆದ ವರ್ಷ ಕರ್ನಾಟಕ ವಿಧಾನಸಭಾ ಚುನಾವಣೆಯ ಪೂರ್ವದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲು ಕಾಂಗ್ರೆಸ್ ಬಿಜೆಪಿ 40% ಕಮಿಷನ್‌ ಸರ್ಕಾರ ಎಂದು ಅಭಿಯಾನ ಮಾಡಿತ್ತು. ಮಾತ್ರವಲ್ಲದೇ, ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ವಿರುದ್ಧ ಪೇಸಿಎಂ ಪೋಸ್ಟರ್‌ಗಳನ್ನು ಸಹ ಹಾಕಿತು. ಸಾಮಾಜಿಕ ಜಾಲತಾಣಗಳಲ್ಲಿ ಭ್ರಷ್ಟಾಚಾರ ರೇಟ್ ಕಾರ್ಡ್ ಜಾಹೀರಾತು ನೀಡಿತ್ತು.
ಇದನ್ನೂ ಓದಿ:ಹೇ ಗೂಗಲ್ ನನ್ನ ವಯಸ್ಸು 31 ಅಲ್ಲಾ; ನಟಿ ದೀಪಿಕಾ ದಾಸ್​ ಹೀಗೆ ಹೇಳಿದ್ಯಾಕೆ
ವಿಧಾನಸಭೆ ಚುನಾವಣೆ ವೇಳೆ ಬಿಜೆಪಿ ವಿರುದ್ಧ ಅಪಪ್ರಚಾರ ಮಾಡಿದ್ದಾರೆ, ಜಾಹೀರಾತಿನಿಂದ ಬಿಜೆಪಿ ಪಕ್ಷಕ್ಕೆ ಹಾನಿಯಾಗಿದೆ ಎಂದು ವಕೀಲ ವಿನೋದ್​ ಕುಮಾರ್​ ಎಂಬುವವರು ದೂರು ದಾಖಲಿಸಿದ್ದರು. ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯದ ಜೆ.ಪ್ರೀತ್ ಅವರಿದ್ದ ಏಕಸದಸ್ಯ ಪೀಠವು ಮಾರ್ಚ್ 28ಕ್ಕೆ ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ, ಡಿಸಿಎಂ ಡಿಕೆ ಶಿವಕುಮಾರ್ ಖುದ್ದು ಹಾಜರಾಗುವಂತೆ ಸಮನ್ಸ್​ ಜಾರಿ ಮಾಡಿದೆ.
40% ಕಮಿಷನ್​ ವಿಚಾರ ಹಾಗೂ ಪೇಸಿಎಂ ಅಭಿಯಾನದ ವಿರುದ್ಧ ಬಿಜೆಪಿ ರಾಜ್ಯ ಕಾರ್ಯದರ್ಶಿ ಎಸ್‌. ಶಿವಪ್ರಸಾದ್‌, ಕೆಪಿಸಿಸಿ ಹಾಗೂ ಕಾಂಗ್ರೆಸ್‌ ನಾಯಕರು ಬಿಜೆಪಿ ವಿರುದ್ಧ ಸುಳ್ಳು ಆರೋಪಗಳನ್ನು ಮಾಡಿ ಜಾಹೀರಾತು ನೀಡಿ ಪಕ್ಷದ ಗೌರವಕ್ಕೆ ಧಕ್ಕೆ ತಂದಿದ್ದಾರೆ. ಪಕ್ಷಕ್ಕೆ ಹಾನಿಯಾಗಿದೆ. ಈ ನಿಟ್ಟಿನಲ್ಲಿ ಮಾನನಷ್ಟ ಮೊಕದ್ದಮೆ ದಾಖಲಿಸಿ ಕ್ರಮ ಕೈಗೊಳ್ಳಬೇಕು ಎಂದು ಕೋರಿ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
