ಬೆಂಗಳೂರು:ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ಹಿಂದಿನ ಬಿಜೆಪಿ ಸರ್ಕಾರದ ವಿರುದ್ಧ ಅಪಪ್ರಚಾರ ಮಾಡಿದ ಆರೋಪದ ಮೇರೆಗೆ ದಾಖಲಾಗಿದ್ದ ಪ್ರಕರಣ ಸಂಬಂಧಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ ಜಾಮೀನು ಮಂಜೂರು ಮಾಡಿದ 42 ನೇ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಖುದ್ದು ಹಾಜರಾಗಲು ಆದೇಶ ನೀಡಿದೆ.
ಇದನ್ನೂ ಓದಿ:ಎಕ್ಸಿಟ್ ಪೋಲ್ ಸಮೀಕ್ಷೆಗಳಲ್ಲಿ ಎನ್​ಡಿಎ ಮುನ್ನಡೆ; ಕೇಂದ್ರದಲ್ಲಿ ಮತ್ತೆ ಮೋದಿ ಸರ್ಕಾರ!..ವಿವರ ಇಲ್ಲಿದೆ
ಚುನಾವಣಾ ಪ್ರಚಾರದ ಸಂದರ್ಭದಲ್ಲಿ ಅಪಪ್ರಚಾರ ಮಾಡಿದ್ದಾರೆಂದು ಬಿಜೆಪಿ, ಕಾಂಗ್ರೆಸ್‌ ವಿರುದ್ಧ ನ್ಯಾಯಾಲಯದಲ್ಲಿ ಖಾಸಗಿ ದೂರು ದಾಖಲು ಮಾಡಿತ್ತು. ಆ ದೂರಿನ ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 42ನೇ ಎಸಿಎಂಎಂ ನ್ಯಾಯಾಲಯ ಜೂನ್ 7ರಂದು ಹಾಜರಾಗುವಂತೆ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರಿಗೆ ಬೆಂಗಳೂರು ನ್ಯಾಯಾಲಯ ಶನಿವಾರ ಆದೇಶ ನೀಡಿದೆ.
ಈ ಹಿಂದೆ ಸಿದ್ದರಾಮಯ್ಯ, ಶಿವಕುಮಾರ್ ಮತ್ತು ರಾಹುಲ್‌ ಗಾಂಧಿ ಅವರಿಗೆ ನ್ಯಾಯಾಲಯ ಸಮನ್ಸ್ ಜಾರಿ ಮಾಡಿತ್ತು. ಈ ಕಾರಣಕ್ಕೆ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್‌ ಕೋರ್ಟ್‌ ಹಾಜರಾಗಿದ್ದರೆ ರಾಹುಲ್‌ ಗಾಂಧಿ ಗೈರಾಗಿದ್ದರು.
ಶನಿವಾರ ನ್ಯಾಯಾಲಯ ಪ್ರಕರಣದ ವಿಚಾರಣೆ ಕೈಗೆತ್ತಿಕೊಂಡಿತು. ಆಗ ರಾಹುಲ್‌ ಗಾಂಧಿ ಪರ ವಕೀಲರು ಹಾಜರಾಗಿ, ನಮ್ಮ ಕಕ್ಷಿದಾರರು ಇಂಡಿಯಾ ಮೈತ್ರಿಕೂಟದ ಸಭೆಯಲ್ಲಿ ಇದ್ದಾರೆ ಹಾಗಾಗಿ, ಅವರ ಖುದ್ದು ಹಾಜರಿಗೆ ಸ್ವಲ್ಪ ಸಮಯಾವಕಾಶ ನೀಡಬೇಕು ಎಂದು ಕೋರಿದ್ದರು. ಆದರೆ ನ್ಯಾಯಾಲಯವು ಮನವಿಯನ್ನು ನಿರಾಕರಿಸಿತ್ತು. ಮಧ್ಯಾಹ್ನದ ವಿಚಾರಣೆಯನ್ನು ಮುಂದೂಡಿ ನಂತರ ಜೂನ್‌ 7 ರಂದು ಖುದ್ದು ಹಾಜರಾಗಬೇಕು ಎಂದು ಸೂಚಿಸಿ ವಿಚಾರಣೆಯನ್ನು ಮುಂದೂಡಿತು.
ಕಳೆದ ವಿಧಾನಸಭಾ ಚುನಾವಣಾ ಸಮಯದಲ್ಲಿಅಂದಿನ ಆಡಳಿತಾರೂಢ ಬಿಜೆಪಿ ವಿರುದ್ಧ ಕಾಂಗ್ರೆಸ್‌ ನಾಯಕರು, ಪೇಸಿಎಂ, 40 ಪರ್ಸೆಂಟ್‌ ಕಮಿಷನ್‌, ಭ್ರಷ್ಟಾಚಾರದ ರೇಟ್‌ ಕಾರ್ಡ್‌ ಬಿಡುಗಡೆ ಸೇರಿ ಹಲವು ಗಂಭೀರವಾದ ಆರೋಪಗಳನ್ನು ಮಾಡಿದ್ದರು. ಅಲ್ಲದೆ, ಭ್ರಷ್ಟಾಚಾರದ ಆರೋಪದ ಜಾಹೀರಾತು ನೀಡಿದ್ದರು. ಇದರಿಂದಾಗಿ ಬಿಜೆಪಿ ಪಕ್ಷದ ವರ್ಚಸ್ಸಿಗೆ ಹಾನಿಯಾಗಿದೆ. ಅವರ ಆರೋಪಗಳಲ್ಲಿಯಾವುದೇ ಹುರುಳಿಲ್ಲ ಎಂದು ದೂರು ನೀಡಿತ್ತು. ಆ ದೂರು ಆಧರಿಸಿ ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.
ಗೌತಮ್​ ಗಂಭೀರ್​ ಭಾರತದ ಹೆಡ್‌ ಕೋಚ್‌: ಸೌರವ್ ಗಂಗೂಲಿ ಶಾಕಿಂಗ್‌ ಹೇಳಿಕೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × one =
Remember me
