ನವದೆಹಲಿ:ನ್ಯಾಷನಲ್​​ ಹೆರಾಲ್ಡ್​ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರದ ಜಾರಿ ನಿರ್ದೇಶನಾಲಯ (ಇಡಿ) ಸಮನ್ಸ್​ ನೀಡಿರುವ ಹಿನ್ನೆಲೆಯಲ್ಲಿ​ ಕಾಂಗ್ರೆಸ್​ ನಾಯಕ ಹಾಗೂ ವಯನಾಡು ಕ್ಷೇತ್ರದ ಸಂಸದ ರಾಹುಲ್​ ಗಾಂಧಿ ಮೂರನೇ ದಿನದ ವಿಚಾರಣೆ ಎದುರಿಸಲು ಇಂದು ಬೆಳಗ್ಗೆ 11.50ರ ಸುಮಾರಿಗೆ ದೆಹಲಿಯಲ್ಲಿರುವ ಇ.ಡಿ. ಹೆಡ್ ಕ್ವಾರ್ಟರ್ಸ್​ಗೆ ಆಗಮಿಸಿದರು.
ಇಡಿ ಕಚೇರಿಗೆ ರಾಹುಲ್​ ಆಗಮಿಸುವ ಮುನ್ನ ದೆಹಲಿಯ ಕಾಂಗ್ರೆಸ್ ಕಚೇರಿಯ ಮುಂದೆ ಮಹಿಳಾ ಮುಖಂಡರು ಮತ್ತು ಕಾರ್ಯಕರ್ತರು ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಮತ್ತು ಪ್ರತಿಭಟನಾಕಾರರ ನಡುವೆ ಭಾರೀ ಹೈಡ್ರಾಮ ನಡೆಯಿತು. ಕೆಲವರನ್ನು ಪೊಲೀಸರು ತಮ್ಮ ವಶಕ್ಕೆ ಪಡೆದುಕೊಂಡರು. ಕಳೆದ ಎರಡು ದಿನಗಳಿಂದಲೂ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆಯಲ್ಲಿ ತೊಡಗಿದ್ದಾರೆ.
ರಾಹುಲ್​ ಗಾಂಧಿ ಈಗಾಗಲೇ ಎರಡು ದಿನಗಳ ಕಾಲ ಸುಮಾರು 20 ಗಂಟೆ ವಿಚಾರಣೆ ಎದುರಿಸಿದ್ದಾರೆ. ನಿನ್ನೆ ಬೆಳಗ್ಗೆ 11.05ಕ್ಕೆ ಸಹೋದರಿ ಪ್ರಿಯಾಂಕಾ ಗಾಂಧಿ ಜತೆ ಇಡಿ ಕಚೇರಿಗೆ ಆಗಮಿಸಿದ ರಾಹುಲ್​ ಗಾಂಧಿ, ರಾತ್ರಿ 9.30ರವರೆಗೂ ವಿಚಾರಣೆ ಎದುರಿಸಿದರು. ಎಲ್ಲ ಪ್ರಕ್ರಿಯೆಗಳನ್ನು ಮುಗಿಸಿ ಸುಮಾರು 11.30ರ ಸಮಯದಲ್ಲಿ ರಾಹುಲ್​ ಗಾಂಧಿ ಇಡಿ ಕಚೇರಿಯಿಂದ ಹೊರಬಂದರು. ಮೂಲಗಳ ಪ್ರಕಾರ ರಾಹುಲ್​ ಅವರಿಗೆ ಇಡಿ ಸುಮಾರು 20 ಪ್ರಶ್ನೆಗಳನ್ನು ಕೇಳಿದೆ ಎಂದು ಹೇಳಲಾಗಿದೆ.
ಇನ್ನೊಂದೆಡೆ ಇಡಿ ನಡೆಯನ್ನು ವಿರೋಧಿಸಿ ಕಾಂಗ್ರೆಸ್​ ನಾಯಕರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂದು ಕೂಡ ಪ್ರತಿಭಟನೆ ಮುಂದುವರಿಯಲಿದೆ. ಎಲ್ಲಿಯವರೆಗೆ ಇಡಿ ರಾಹುಲ್​ ಗಾಂಧಿ ಅವರನ್ನು ವಿಚಾರಣೆ ನಡೆಸುತ್ತದೆಯೋ ಅಲ್ಲಿಯವರೆಗೂ ಕಾಂಗ್ರೆಸ್​ ಪ್ರತಿಭಟನೆ ಮುಂದುವರಿಯುತ್ತದೆ ಎಂದು ಛತ್ತೀಸ್​ಗಢದ ಮುಖ್ಯಮಂತ್ರಿ ಭೂಪೇಶ್​ ಬಾಘೇಲ್​ ಹೇಳಿದ್ದಾರೆ.
ಜೂ.19ರಂದು ರಾಹುಲ್ ಗಾಂಧಿಯ 52ನೇ ಜನ್ಮದಿನಾಚರಣೆ ಇರಲಿದ್ದು, ಹುಟ್ಟಿದ ಹಬ್ಬದ ಸಂಭ್ರಮವನ್ನೂ ಇ.ಡಿ. ಮಸಕು ಮಾಡುವುದೇ ಎಂಬ ಆತಂಕ ಕಾಂಗ್ರೆಸ್ ಕಾರ್ಯಕರ್ತರನ್ನು ಕಾಡತೊಡಗಿದೆ. ಅಲ್ಲದೆ, ಕಾಂಗ್ರೆಸ್​ ಪ್ರತಿಭಟನೆಯು ಮುಂದುವರಿದಿದೆ.(ಏಜೆನ್ಸೀಸ್​)
#WATCH| Delhi: Congress leader Rahul Gandhi arrives at the Enforcement Directorate (ED) office to appear for the third consecutive day of questioning in the National Herald case.pic.twitter.com/xxG3vwjMil
— ANI (@ANI)June 15, 2022

ಇಡಿಯಿಂದ ರಾಹುಲ್​ ಗಾಂಧಿ ಬಂಧನವಾಗುತ್ತಾ? ಛತ್ತೀಸ್​ಗಢ ಮುಖ್ಯಮಂತ್ರಿ ಕೊಟ್ಟ ಸ್ಫೋಟಕ ಉತ್ತರ ಹೀಗಿದೆ…

ಬಾತ್​ರೂಮ್​ ಕಿಟಕಿಯಲ್ಲಿ ವ್ಯಕ್ತಿಯ ನೆರಳು ಕಂಡು ಮಹಿಳೆ ಶಾಕ್​: ರಾಜಕೀಯ ನಾಯಕನ ಮುಖವಾಡ ಬಯಲು

ಮತ್ತೊಂದು ದಾಖಲೆ ಬರೆದ ಚಿನ್ನದ ಹುಡುಗ ನೀರಜ್​ ಜೋಪ್ರಾ: ಫಿನ್‌ಲ್ಯಾಂಡ್‌ ಸ್ಪರ್ಧೆಯಲ್ಲಿ ಬೆಳ್ಳಿ ಪದಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × 2 =
Remember me
