ನವದೆಹಲಿ:2019ರ ಮಾನಹಾನಿ ಪ್ರಕರಣದಲ್ಲಿ ಕಾಂಗ್ರೆಸ್​ ನಾಯಕ ರಾಹಲ್​ ಗಾಂಧಿ ಅವರನ್ನು ದೋಷಿ ಎಂದು ಸೂರತ್​ ಹೆಚ್ಚುವರಿ ನ್ಯಾಯಾಲಯ ತೀರ್ಪು ನೀಡಿ 2 ವರ್ಷ ಶಿಕ್ಷೆ ಪ್ರಕಟಿಸಿದ ಬೆನ್ನಲ್ಲೇ ಲೋಕಸಭಾ ಸದಸ್ಯತ್ವದಿಂದ ರಾಹುಲ್​ ಗಾಂಧಿ ಅವರನ್ನು ಅನರ್ಹಗೊಳಿಸಲಾಗಿದೆ. ತಮ್ಮ ವಿರುದ್ಧ ಅಪರಾಧ ಮತ್ತು ಶಿಕ್ಷೆಯನ್ನು ರಾಹುಲ್​ ಗಾಂಧಿ ಅವರು ಸೂರತ್​ ನ್ಯಾಯಾಲಯದಲ್ಲಿ ನಾಳೆ ಪ್ರಶ್ನೆ ಮಾಡಲಿದ್ದಾರೆ ಎಂದು ಮೂಲಗಳು ತಿಳಿಸಿವೆ.
ತಮ್ಮ ಮನವಿಯಲ್ಲಿ ಮಾನನಷ್ಟ ಮೊಕದ್ದಮೆಯಲ್ಲಿ ತನಗೆ ಶಿಕ್ಷೆ ವಿಧಿಸಿದ ಮ್ಯಾಜಿಸ್ಟ್ರೇಟ್ ಆದೇಶವನ್ನು ರದ್ದುಗೊಳಿಸುವಂತೆ ಸೆಷನ್ಸ್ ನ್ಯಾಯಾಲಯವನ್ನು ಕೋರಿದ್ದಾರೆ ಮತ್ತು ಪ್ರಕರಣ ಇತ್ಯರ್ಥವಾಗುವವರೆಗೆ ಶಿಕ್ಷೆಗೆ ಮಧ್ಯಂತರ ತಡೆ ನೀಡುವಂತೆಯೂ ಅವರು ಕೋರಿದ್ದಾರೆ.
ಇದನ್ನೂ ಓದಿ:ವಿಷಕಾರಿ ಹುಲ್ಲು ತಿನ್ನುತ್ತಿದ್ದಂತೆ ಒಂದಾದ ಮೇಲೆ ಒಂದರಂತೆ 34 ಕುರಿಗಳು ದುರಂತ ಸಾವು!
ಈ ಪ್ರಕರಣದಲ್ಲಿ ಈಗಾಗಲೇ ರಾಹುಲ್ ಗಾಂಧಿ ಅವರಿಗೆ ಜಾಮೀನು ನೀಡಲಾಗಿದೆ ಮತ್ತು ಅವರ ಶಿಕ್ಷೆಯನ್ನು 30 ದಿನಗಳ ಕಾಲ ಅಮಾನತಿನಲ್ಲಿ ಇಡಲಾಗಿದೆ. ನ್ಯಾಯಾಲಯದ ತೀರ್ಪಿನ ವಿರುದ್ಧ ಮೇಲ್ಮನವಿ ಸಲ್ಲಿಸಲು ಅವಕಾಶ ಮಾಡಿಕೊಡಲಾಗಿದೆ. ಇದರ ಬೆನ್ನಲ್ಲೇ ಲೋಕಸಭೆಯ ಸಚಿವಾಲಯವು, ರಾಹುಲ್​ ಅವರ ಲೋಕಸಭಾ ಸದಸ್ಯತ್ವವನ್ನು ಅಮಾನತುಗೊಳಿಸಿದ್ದು, ಇದನ್ನು ಪ್ರತಿಪಕ್ಷಗಳು ಪ್ರಶ್ನಿಸಿವೆ.
ರಾಹುಲ್​ ಅವರ ಶಿಕ್ಷೆಯನ್ನು ಉಚ್ಚ ನ್ಯಾಯಾಲಯವು ತಡೆಹಿಡಿಯದೇ ಹೋದರೆ, ಚುನಾವಣಾ ಆಯೋಗವು ವಯನಾಡು ಲೋಕಸಭಾ ಸ್ಥಾನಕ್ಕೆ ವಿಶೇಷ ಚುನಾವಣೆಯನ್ನು ಘೋಷಿಸುತ್ತದೆ. ಅಲ್ಲದೆ, ಮುಂದಿನ ಎಂಟು ವರ್ಷಗಳ ಕಾಲ ಚುನಾವಣೆಗೆ ಸ್ಪರ್ಧಿಸಲು ರಾಹುಲ್​ ಅವರಿಗೆ ಅವಕಾಶ ನೀಡುವುದಿಲ್ಲ.
ಏನಿದು ಪ್ರಕರಣ?2019ರ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಕರ್ನಾಟಕದಲ್ಲಿ ಪ್ರಚಾರ ಮಾಡುವಾಗ ಮಾತನಾಡಿದ್ದ ರಾಹುಲ್​, ಮೋದಿ ಎಂಬ ಉಪನಾಮ ಹೊಂದಿರುವವರೆಲ್ಲರೂ ಕಳ್ಳರು ಎಂಬ ಹೇಳಿಕೆ ನೀಡಿದ್ದರು. ನೀರವ್ ಮೋದಿ, ಲಲಿತ್ ಮೋದಿ, ನರೇಂದ್ರ ಮೋದಿ ಈ ಹೆಸರು ಹೊಂದಿರುವವರನ್ನು ಉಲ್ಲೇಖಿಸಿದ್ದ ಅವರು, ಎಲ್ಲ ಮೋದಿಗಳೂ ಕಳ್ಳರು. ಮೋದಿ ಉಪನಾಮ ಹೊಂದಿರುವವರು ಕಳ್ಳರಾಗಲು ಹೇಗೆ ಸಾಧ್ಯ ಎಂದು ವ್ಯಂಗ್ಯವಾಡಿದ್ದರು.
ಇದನ್ನೂ ಓದಿ:ಬೋಲ್ಡ್​ ಆಗಿ ನಟಿಸಿದ ಮಾತ್ರಕ್ಕೆ… ಅಸಭ್ಯ ಪ್ರಶ್ನೆ ಕೇಳಿದ ಯೂಟ್ಯೂಬರ್​ಗೆ ನಟಿ ತನಿಶಾ ಕುಪ್ಪಂಡ ಕ್ಲಾಸ್​
ರಾಹುಲ್​ ಹೇಳಿಕೆಯಿಂದ ಸಿಟ್ಟಿಗೆದ್ದಿದ್ದ ಬಿಜೆಪಿ ಶಾಸಕ ಪೂರ್ಣೇಶ್​ ಮೋದಿ, ದೂರು ದಾಖಲು ಮಾಡಿದ್ದರು. 2019ರ ಏಪ್ರಿಲ್​​​ ತಿಂಗಳಲ್ಲಿ ರಾಹುಲ್ ಗಾಂಧಿ ವಿರುದ್ಧ ಐಪಿಸಿ ಸೆಕ್ಷನ್​​ 499 ಮತ್ತು 500ರ ಅಡಿ ಮಾನಹಾನಿ ಪ್ರಕರಣ ದಾಖಲಾಗಿತ್ತು. ಇದೀಗ ಈ ಪ್ರಕರಣದಲ್ಲಿ ರಾಹುಲ್​ ಗಾಂಧಿ ಅವರನ್ನು ಸೂರತ್​ ನ್ಯಾಯಾಲಯ ದೋಷಿ ಎಂದು ತೀರ್ಪು ನೀಡಿದ್ದು, ಇದರ ಅಡಿಯಲ್ಲಿ 2 ವರ್ಷ ಜೈಲು ಶಿಕ್ಷೆ ಅನುಭವಿಸಬೇಕಾಗುತ್ತದೆ. ಆದರೆ, ಮೇಲ್ಮನವಿ ಸಲ್ಲಿಸಲು ರಾಹುಲ್​ ಅವರಿಗೆ ನ್ಯಾಯಾಲಯ 30 ದಿನಗಳ ಕಾಲಾವಕಾಶ ನೀಡಿದೆ. ಆದರೆ, ಸಂಸತ್ತಿನ ಕಾರ್ಯದರ್ಶಿ ರಾಹುಲ್​ ಅವರನ್ನು ಲೋಕಸಭಾ ಸದಸ್ಯತ್ವದಿಂದ ವಜಾಗೊಳಿಸಿದ್ದಾರೆ.(ಏಜೆನ್ಸೀಸ್​)
ರಾಹುಲ್​ ಗಾಂಧಿ ಅನರ್ಹತೆ: ಬಿಜೆಪಿ ನಾಯಕಿ ಖುಷ್ಬೂ ಸುಂದರ್​ ಹಳೇ ಟ್ವೀಟ್ ವೈರಲ್​

ರಾಹುಲ್​ ಗಾಂಧಿ ಅನರ್ಹ ಪ್ರಕರಣದಲ್ಲಿ ಪ್ರಜಾಪ್ರಭುತ್ವ ತತ್ವಗಳು ಅನ್ವಯಿಸಬೇಕು: ಜರ್ಮನಿ ಅಭಿಪ್ರಾಯ

ಮೋದಿ ಉಪನಾಮ ವಿವಾದ; ರಾಹುಲ್​ ಗಾಂಧಿ ವಿರುದ್ದ ದೂರು ದಾಖಲಿಸುವೆ ಎಂದ ಲಲಿತ್​ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 + 4 =
Remember me
