ನವದೆಹಲಿ:ಇದುವರೆಗೂ ನಿಗೂಢವಾಗಿಯೇ ಉಳಿದಿದ್ದ ರಾಯ್​ಬರೇಲಿ ಮತ್ತು ಅಮೇಥಿ ಕ್ಷೇತ್ರಗಳಿಗೆ ಕೊನೆಗೂ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ. ಕೇರಳದ ವಯನಾಡು ಜತೆ ರಾಯ್​ಬರೇಲಿಯಿಂದಲೂ ರಾಹುಲ್ ಗಾಂಧಿ​ ಸ್ಪರ್ಧೆ ಮಾಡಲಿದ್ದಾರೆ. ಉಳಿದಂತೆ ಅಮೇಥಿಯಿಂದ ಕೆ.ಎಲ್​. ಶರ್ಮ ಅವರನ್ನು ಕಣಕ್ಕಿಳಿಸಲಾಗಿದೆ.
‘केंद्रीय चुनाव समिति’ की बैठक में लोकसभा चुनाव, 2024 के लिए श्री@RahulGandhiको उत्तर प्रदेश के रायबरेली से और श्री किशोरी लाल शर्मा को अमेठी से कांग्रेस उम्मीदवार घोषित किया गया है।pic.twitter.com/AyFIxI62XH
— Congress (@INCIndia)May 3, 2024

ರಾಹುಲ್​ ಗಾಂಧಿ ಅವರು ಅಮೇಥಿ ಕ್ಷೇತ್ರದಿಂದ ಸ್ಪರ್ಧಿಸಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಸ್ಪರ್ಧೆಯಿಂದ ಹಿಂದೆ ಸರಿದಿದ್ದು, ರಾಯ್​ಬರೇಲಿಯಿಂದ ಕಣಕ್ಕಿಳಿದಿದ್ದಾರೆ. ಸೋನಿಯಾ ಗಾಂಧಿ ಅವರು ಪ್ರತಿನಿಧಿಸುತ್ತಿದ್ದ ರಾಯ್​ಬರೇಲಿ ಕ್ಷೇತ್ರದಿಂದ ಪ್ರಿಯಾಂಕಾ ಗಾಂಧಿ ಚುನಾವಣಾ ಕಣಕ್ಕೆ ಇಳಿಯುತ್ತಾರೆ ಎಂಬ ಚರ್ಚೆಯಾಗಿತ್ತು. ಆದರೆ, ಪ್ರಿಯಾಂಕಾ ಅವರು ಈ ಬಾರಿಯೂ ಚುನಾವಣಾ ಕಣದಿಂದ ಹಿಂದೆ ಸರಿದಿದ್ದಾರೆ. ಪ್ರಿಯಾಂಕಾ ಸ್ಪರ್ಧೆಗೆ ಒತ್ತಾಯ ಮಾಡಿದ್ದ ಕಾರ್ಯಕರ್ತರಿಗೆ ಇದೀಗ ನಿರಾಸೆಯಾಗಿದೆ.
ತಡರಾತ್ರಿಯವರೆಗೂ ನಡೆದ ಸಭೆಯಲ್ಲಿ ಚರ್ಚಿಸಿ ಅಂತಿಮವಾಗಿ ಕಾಂಗ್ರೆಸ್​ ತನ್ನ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದೆ. ಮೇ 20ರಂದು ನಡೆಯುವ ಐದನೇ ಹಂತದ ಮತದಾನಕ್ಕೆ ನಾಮಪತ್ರ ಸಲ್ಲಿಸಲು ಇಂದು ಕೊನೆಯ ದಿನವಾದ ಹಿನ್ನೆಲೆಯಲ್ಲಿ ರಾಹುಲ್​ ಗಾಂಧಿ ಮತ್ತು ಕೆ.ಎಲ್​. ಶರ್ಮ ಇಂದು 12 ಗಂಟೆಗೆ ತಾವು ಪ್ರತಿನಿಧಿಸುವ ಕ್ಷೇತ್ರಗಳಲ್ಲಿ ನಾಮಪತ್ರ ಸಲ್ಲಿಸಲಿದ್ದಾರೆ.
2019ರ ಲೋಕಸಭಾ ಚುನಾವಣೆಯಲ್ಲಿ ಅಮೇಥಿ ಕ್ಷೇತ್ರದಲ್ಲಿ ರಾಹುಲ್​ ಗಾಂಧಿ ವಿರುದ್ಧ ಕೇಂದ್ರ ಸಚಿವೆ ಸ್ಮೃತಿ ಇರಾನಿ ಗೆಲುವು ಸಾಧಿಸಿದರು. ಈ ಬಾರಿಯೂ ಇದೇ ಫಲಿತಾಂಶ ಬರಬಹುದು ಎಂಬ ಲೆಕ್ಕಾಚಾರದಲ್ಲಿ ಅಮೇಥಿಯಿಂದ ತಾಯಿ ಸೋನಿಯಾ ಗಾಂಧಿ ಕ್ಷೇತ್ರ ರಾಯ್​ಬರೇಲಿಗೆ ರಾಹುಲ್​ ಗಾಂಧಿ ಸ್ಥಳಾಂತರಗೊಂಡಿದ್ದಾರೆ. (ಏಜೆನ್ಸೀಸ್​)
ಕಾಂಗ್ರೆಸ್​ನ ವೋಟ್ ಜಿಹಾದ್ ಬಹಿರಂಗ: ಇಂಡಿ ಮೈತ್ರಿಕೂಟದ ವಿರುದ್ಧ ಮೋದಿ ವಾಗ್ದಾಳಿ

ವಿಕಸಿತ ಭಾರತಕ್ಕೆ ಬಿಗಿ, ಅನುಭವಿ ನಾಯಕತ್ವದ ಅಗತ್ಯ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 − 8 =
Remember me
