ನವದೆಹಲಿ:ಕೆಲ ದಿನಗಳಿಂದ ಹರಿದಾಡುತ್ತಿದ್ದ ಊಹಾಪೋಹಗಳಿಗೆ ಅಂತಿಮವಾಗಿ ತೆರೆಬಿದ್ದಿದೆ. ಅಂದುಕೊಂಡಂತೆ ರಾಹುಲ್ ಗಾಂಧಿ ತಮ್ಮ ಕುಟುಂಬದ ಭದ್ರಕೋಟೆಯಾದ ರಾಯ್‌ಬರೇಲಿ ಲೋಕಸಭಾ ಕ್ಷೇತ್ರವನ್ನು ಉಳಿಸಿಕೊಳ್ಳಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ:ತೆಲುಗು ದೇಶಂ ಪಕ್ಷದ ಅಧ್ಯಕ್ಷರಾಗಿ ಶ್ರೀನಿವಾಸರಾವ್​ ಯಾದವ್ ನೇಮಕ!
ಕಷ್ಟ ಕಾಲದಲ್ಲಿ ಕೈ ಹಿಡಿದಿದ್ದ ಕೇರಳದ ವಯನಾಡು ಲೋಕಸಭಾ ಕ್ಷೇತ್ರವನ್ನು ತೊರೆಯಲಿದ್ದು, ರಾಹುಲ್ ಗಾಂಧಿ ಸಹೋದರಿ ಪ್ರಿಯಾಂಕಾ ಗಾಂಧಿ ಅವರು ಉಪ ಚುನಾವಣೆಯಲ್ಲಿ ವಯನಾಡಿನಿಂದ ಕಣಕ್ಕಿಳಿಯಲಿದ್ದಾರೆ.
VIDEO | "I have an emotional connection with both Raebareli and Wayanad. I was the Wayanad MP for the last five years and people of Wayanad gave me love, for which I thank them. Priyanka will contest from Wayanad, but I will continue to visit Wayanad and the promises we made to…pic.twitter.com/ClHviBFu1B
— Press Trust of India (@PTI_News)June 17, 2024

ಇಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ನಿವಾಸದಲ್ಲಿ ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಪ್ರಧಾನ ಕಾರ್ಯದರ್ಶಿಗಳಾದ ಕೆಸಿ ವೇಣುಗೋಪಾಲ್ ಮತ್ತು ಪ್ರಿಯಾಂಕಾ ಗಾಂಧಿ ಸೇರಿದಂತೆ ಪಕ್ಷದ ಉನ್ನತ ನಾಯಕರ ಮಹತ್ವದ ಸಭೆಯಲ್ಲಿ ಈ ತೀರ್ಮಾಣಕೈಗೊಳ್ಳಲಾಗಿದೆ.
ತಮ್ಮ ತಾಯಿ ಸೋನಿಯಾ ಗಾಂಧಿ ಈವರೆಗೆ ಪ್ರತಿನಿಧಿಸುತ್ತಿದ್ದ ರಾಯ್​ ಬರೇಲಿಯಲ್ಲಿ ಈ ಬಾರಿ ರಾಹುಲ್ ಗಾಂಧಿ 6,87,649 ಮತಗಳನ್ನು ಗಳಿಸಿ ಕೇವಲ 2,97,619 ಮತ ಗಳಿಸಿದ ಬಿಜೆಪಿಯ ದಿನೇಶ್​ ಪ್ರತಾಪ್ ಸಿಂಗ್ ಅವರನ್ನು 3,90,030 ಮತಗಳಿಂದ ಭರ್ಜರಿಯಾಗಿ ಸೋಲಿಸಿದ್ದಾರೆ.
ಕಾಂಚನಜುಂಗಾ ರೈಲು ಅಪಘಾತ: ಸಂತಾಪ ಸೂಚಿಸಿದ ಸಿಎಂ ಯೋಗಿ ಆದಿತ್ಯನಾಥ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:thirteen + 1 =
Remember me
