ನವದೆಹಲಿ:ದೆಹಲಿಯಲ್ಲಿ ನಡೆಯುತ್ತಿರುವ ಯೂತ್​ ಕಾಂಗ್ರೆಸ್​ ಕಾರ್ಯಕಾರಿಣಿ ಸಭೆಯಲ್ಲಿ ರಾಹುಲ್ ಗಾಂಧಿ ಆಡಿರುವ ಮಾತುಗಳು ಭಾರೀ ಚರ್ಚೆಯಲ್ಲಿವೆ. ಕಳೆದ ವರ್ಷ ಕಾಂಗ್ರೆಸ್​ಅನ್ನು ತ್ಯಜಿಸಿ ಬಿಜೆಪಿ ಸೇರಿ, ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಸರ್ಕಾರದ ಪತನಕ್ಕೆ ಕಾರಣವಾದ ಜ್ಯೋತಿರಾದಿತ್ಯ ಸಿಂದಿಯಾ ಅವರು ಬಿಜೆಪಿಯಲ್ಲಿ “ಬ್ಯಾಕ್​ಬೆಂಚರ್” ಆಗಿದ್ದಾರೆಂದು ಗಾಂಧಿ ಹೇಳಿದ್ದಾರೆ ಎನ್ನಲಾಗಿದೆ.
ವರದಿಗಳ ಪ್ರಕಾರ, ಸೋಮವಾರ ಕಾಂಗ್ರೆಸ್ ಯುವ ಕಾರ್ಯಕರ್ತರನ್ನುದ್ದೇಶಿಸಿ ಮಾತನಾಡುತ್ತಿದ್ದ ರಾಹುಲ್ ಗಾಂಧಿ, “ಕಾಂಗ್ರೆಸ್​ ಕಾರ್ಯಕರ್ತರೊಂದಿಗೆ ಕೆಲಸ ಮಾಡಿ ಪಕ್ಷವನ್ನು ಬಲಪಡಿಸುವ ಅವಕಾಶ ಸಿಂದಿಯಾಗೆ ಇತ್ತು. ನಾನು ಅವರಿಗೆ ಹೇಳಿದ್ದೆ – ಒಂದು ದಿನ ನೀವು ಮುಖ್ಯಮಂತ್ರಿ ಆಗ್ತೀರಾ ಅಂತ. ಆದರೆ ಅವರು ಬೇರೆ ಮಾರ್ಗ ಆಯ್ದುಕೊಂಡರು. ಬರೆದಿಟ್ಟುಕೊಳ್ಳಿ… ಅವರು ಅಲ್ಲಿ (ಬಿಜೆಪಿ) ಯಾವತ್ತೂ ಸಿಎಂ ಆಗೋದಿಲ್ಲ. ಅದಕ್ಕಾಗಿ ಅವರು ಇಲ್ಲಿಗೆ ವಾಪಸ್ ಬರಬೇಕಾಗುತ್ತದೆ” ಎಂದು ಹೇಳಿದ್ದನ್ನು ಮಾಧ್ಯಮಗಳು ವರದಿ ಮಾಡಿದ್ದವು.
ಇದನ್ನೂ ಓದಿ:ರಾಹುಲ್ ಗಾಂಧಿಯನ್ನು ಕಾಂಗ್ರೆಸ್​ ಅಧ್ಯಕ್ಷರಾಗಿಸಿ : ಯೂತ್ ಕಾಂಗ್ರೆಸ್ ಆಗ್ರಹ
ರಾಹುಲ್​ ಗಾಂಧಿಯವರ ಮಾತಿಗೆ ಇದೀಗ ಬಿಜೆಪಿಯ ರಾಜ್ಯಸಭಾ ಸದಸ್ಯರಾಗಿರುವ ಸಿಂದಿಯಾ ಪ್ರತ್ಯುತ್ತರ ನೀಡಿದ್ದಾರೆ. “ನಾನು ಕಾಂಗ್ರೆಸ್​ನಲ್ಲಿದ್ದಾಗ, ಈವಾಗ ಕಾಳಜಿ ತೋರಿಸುತ್ತಿರುವ ರೀತಿಯಲ್ಲಿ ಕಾಳಜಿ ತೋರಿಸಿದ್ದಿದ್ದರೆ, ಸನ್ನಿವೇಶ ಬೇರೆ ರೀತಿ ಇರುತ್ತಿತ್ತು” ಎಂದು ಸಿಂದಿಯಾ ಚುಟುಕಾಗಿ ತಿರುಗೇಟು ನೀಡಿದ್ದಾರೆ.
ಒಂದು ವರ್ಷದ ಹಿಂದೆ ಸಿಂದಿಯಾ ಕಾಂಗ್ರೆಸ್​​ನೊಂದಿಗಿನ ತಮ್ಮ 19 ವರ್ಷಗಳ ಸಂಪರ್ಕವನ್ನು ಕಡಿದುಕೊಂಡಿದ್ದರು. ರಾಜ್ಯ ಕಾಂಗ್ರೆಸ್​ನಲ್ಲಿ ತಮಗೆ ಸೂಕ್ತ ಮಹತ್ವ ನೀಡದಿರುವ ಬಗ್ಗೆ ಸಿಂದಿಯಾ ಅಸಮಾಧಾನಗೊಂಡಿದ್ದರು ಎನ್ನಲಾಗಿದೆ.(ಏಜೆನ್ಸೀಸ್)
ಕ್ಷಣಕ್ಷಣದ ಮಾಹಿತಿಗಾಗಿ ವಿಜಯವಾಣಿ ಫೇಸ್​ಬುಕ್​ ಪೇಜ್​ ಲೈಕ್​ ಮಾಡಿ

“ರಾಹುಲ್ ಭೈಯಾ… ನೀವಾಗ ರಜೆಯ ಮೇಲಿದ್ದಿರಿ… ಅದಕ್ಕೆ ನಿಮಗೆ ಗೊತ್ತಿಲ್ಲ”
ಹೆಚ್ಚಿದ ಕರೊನಾ : ಮದುವೆ ಸಮಾರಂಭಗಳಿಗೆ ಪೊಲೀಸರಾಗಲಿದ್ದಾರೆ ವಿಶೇಷ ಅತಿಥಿಗಳು !
ಗೀರ್ ಅರಣ್ಯ ಪ್ರದೇಶದಲ್ಲಿ ‘ಲಯನ್​ ಶೋ’ : ಏಳು ಜನರಿಗೆ ಜೈಲು ಶಿಕ್ಷೆ


ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − 1 =
Remember me
