ನವದೆಹಲಿ:ಕರೊನಾ ಸಮಸ್ಯೆ ಸದ್ಯಕ್ಕೆ ಬಗೆಹರಿಯುವಂತೆ ಕಾಣುತ್ತಿಲ್ಲ. ವೈರಸ್ ನಿಯಂತ್ರಣಕ್ಕಾಗಿ ಪ್ರಧಾನಿ ನರೇಂದ್ರ ಮೋದಿಯವರು ದೇಶದಲ್ಲಿ ಲಾಕ್​ಡೌನ್​ ಘೋಷಿಸಿದ್ದಾರೆ. ಆದರೆ ಈ ಲಾಕ್​ಡೌನ್​ ಕೂಡ ಅಷ್ಟು ಸುಲಭದ್ದಲ್ಲ ಎಂಬುದು ಕಳೆದ 36 ಗಂಟೆಯಲ್ಲೇ ಅರ್ಥವಾಗಿ ಹೋಗಿದೆ.
ಜನಸಾಮಾನ್ಯರ ಜೀವನ ಹೇಗೆ ಎಂಬ ಆತಂಕದಲ್ಲಿದ್ದವರಿಗೆ ಇಂದು ಕೇಂದ್ರ ಸರ್ಕಾರ ಸ್ವಲ್ಪ ಮಟ್ಟಿನ ನಿರಾಳತೆ ನೀಡಿದೆ. ಕರೊನಾ ಲಾಕ್​ಡೌನ್​ ಸಂದರ್ಭದಲ್ಲಿ ಬಡವರು, ವಲಸಿಗರು, ಮಹಿಳೆಯರು ಮತ್ತು ಇತರೆ ಶ್ರಮಿಕ ವರ್ಗದವರು, ಕರೊನಾ ವಿರುದ್ಧ ಹೋರಾಡುತ್ತಿರುವವರ ಜೀವನ ನಿರ್ವಹಣೆಗಾಗಿ ಕೇಂದ್ರ ಸರ್ಕಾರ 1.70 ಲಕ್ಷ ಕೋಟಿ ರೂಪಾಯಿಗಳ ಪ್ಯಾಕೇಜನ್ನು ಘೋಷಿಸಿದೆ.
ಇಂದು ಸುದ್ದಿಗೋಷ್ಠಿ ನಡೆಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್​ ಆರ್ಥಿಕ ಪ್ಯಾಕೇಜ್​ ಘೋಷಣೆ ಮಾಡಿದ್ದಾರೆ. ಲಾಕ್​ಡೌನ್​ ಸಂದರ್ಭದಲ್ಲಿ ಜೀವನ ನಿರ್ವಹಣೆ ಮಾಡಲು ಕೇಂದ್ರದಿಂದ ಏನೆಲ್ಲ ನೆರವು ಸಿಗಲಿದೆ ಎಂಬುದನ್ನು ವಿವರಿಸಿದ್ದಾರೆ.
ನಿರ್ಮಲಾ ಸುದ್ದಿಗೋಷ್ಠಿಯ ಬಳಿ ಕೆಲವೇ ಕ್ಷಣಗಳಲ್ಲಿ ರಾಹುಲ್​ ಗಾಂಧಿ ಟ್ವೀಟ್​ ಮಾಡಿದ್ದು, ಕೇಂದ್ರ ಸರ್ಕಾರದ ಕ್ರಮವನ್ನು ಸ್ವಾಗತಿಸಿದ್ದಾರೆ.
ಜನಸಾಮಾನ್ಯರ ಜೀವನಕ್ಕಾಗಿ ಸರ್ಕಾರ ಘೋಷಿಸಿದ ಆರ್ಥಿಕ ನೆರವಿನ ಪ್ಯಾಕೇಜ್ ಸ್ವಾಗತಾರ್ಹ. ಈ ಮೂಲಕ ಸರ್ಕಾರ ಸರಿಯಾದ ದಿಕ್ಕಿನಲ್ಲಿ ಮೊದಲ ಹೆಜ್ಜೆಯನ್ನು ಇಟ್ಟಿದೆ. ಲಾಕ್​ಡೌನ್​ನಿಂದ ತೊಂದರೆಗೆ ಒಳಗಾಗಿರುವ ರೈತರು, ದಿನಗೂಲಿ ಕೆಲಸಗಾರರು, ಕಾರ್ಮಿಕರು, ಮಹಿಳೆಯರು ಮತ್ತು ವೃದ್ಧರ ಹೊಣೆಯನ್ನು, ಅವರ ಸಾಲದ ಹೊರೆಯನ್ನು ಈಗ ಭಾರತ ಹೊತ್ತುಕೊಳ್ಳಬೇಕು ಎಂದು ರಾಹುಲ್​ ಗಾಂಧಿ ಹೊಗಳಿದ್ದಾರೆ.(ಏಜೆನ್ಸೀಸ್​)
1.70 ಲಕ್ಷ ಕೋಟಿ ರೂಪಾಯಿ ಪ್ಯಾಕೇಜ್​ ಘೋಷಿಸಿದ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್

300 ಕೋಟಿ ಜನರಿಗೆ ಮನೆಯಲ್ಲೇ ಇರಲು ಸೂಚನೆ: ಭಾರತದಲ್ಲಿ #COVID19 ಕೇಸ್​ಗಳು 649ಕ್ಕೆ ಏರಿಕೆ, ಸಾವಿನ ಸಂಖ್ಯೆ 13

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + fifteen =
Remember me
