ನವದೆಹಲಿ:ಬಿಹಾರದ ವಿಧಾನಸಭಾ ಚುನಾವಣೆಯ ಕೊನೆಯ ಹಂತದ ಮತದಾನಕ್ಕೆ ಒಂದು ದಿನ ಮೊದಲೇ ಕಾಂಗ್ರೆಸ್​ ನಾಯಕ ರಾಹುಲ್ ಗಾಂಧಿ ಹೊಸ ಭರವಸೆಯೊಂದನ್ನು ನೀಡಿದ್ದಾರೆ. ಒಂದು ವೇಳೆ ತಮ್ಮ ಮೈತ್ರಿ ಪಕ್ಷಗಳು ರಾಜ್ಯದಲ್ಲಿ ಗೆಲುವು ಸಾಧಿಸಿದರೆ ಹೊಸ ಬಿಹಾರವನ್ನು ನಿರ್ಮಿಸುವುದಾಗಿ ಅವರು ಹೇಳಿದ್ದಾರೆ.
“ಈಗ ತಯಾರಾಗಿ. ನಮ್ಮ ಮಹಾ ಮೈತ್ರಿಯು ರಾಜ್ಯದ ಜನತೆಗೆ ಉದ್ಯೋಗ ಸೃಷ್ಟಿ ಮಾಡಲಿದೆ. ರೈತರ ಸಾಲ ಮನ್ನಾ ಮಾಡಲಿದೆ. ವಿದ್ಯುತ್​ ಶುಲ್ಕವನ್ನು ಅರ್ಧದಷ್ಟು ಕಡಿತಗೊಳಿಸಲಾಗುವುದು. ಹೆಣ್ಣು ಮಕ್ಕಳಿಗೆ ಉಚಿತ ಶಿಕ್ಷಣ ಮತ್ತು ನ್ಯಾಯ ಒದಗಿಸಲಾಗುವುದು. ಒಟ್ಟಾರೆಯಾಗಿ ಹೊಸ ಬಿಹಾರವನ್ನು ನಿರ್ಮಿಸಲಾಗುವುದು” ಎಂದು ರಾಹುಲ್​ ಗಾಂಧಿ ಟ್ವಿಟ್ಟರ್​ನಲ್ಲಿ ಬರೆದುಕೊಂಡಿದ್ದಾರೆ.ಅದರ ಜತೆ ಬಿಜೆಪಿ ಕಾಲೆಳೆದಿರುವ ಅವರು, “ಕೇಂದ್ರದಲ್ಲಿನ ಬಿಜೆಪಿ ಆಡಳಿತದಿಂದಾಗಿ ನಿರುದ್ಯೋಗ ಸಮಸ್ಯೆ ಹೆಚ್ಚಿದೆ. ಅದನ್ನು ಸರಿ ಪಡಿಸಲು ಸರ್ಕಾರ ಪ್ರಯತ್ನ ಮಾಡುತ್ತಿಲ್ಲ. ಸುಳ್ಳು ಭರವಸೆಗಳನ್ನು ನೀಡುವಲ್ಲಿ ಸರ್ಕಾರ ನಿರತವಾಗಿದೆ” ಎಂದು ದೂರಿದ್ದಾರೆ.
ಇದನ್ನೂ ಓದಿ:ಮಾದಕ ಫೋಟೋಗಳೇ ನಟಿಮಣಿಯರಿಗೆ ಕಂಟಕ..!
ಬಿಹಾರದಲ್ಲಿ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಈಗಾಗಲೇ ಎರಡು ಹಂತಗಳ ಮತದಾನ ಮುಗಿದಿದೆ. ಮೂರನೇ ಹಂತದ ಮತದಾನ ಶನಿವಾರ ನಡೆಯಲಿದೆ. (ಏಜೆನ್ಸೀಸ್​)
हो जाओ तैयार
अब महागठबंधन सरकारआप तक पहुँचाएगी रोज़गार
किसान का क़र्ज़ माफ़बिजली बिल हाफ़
बेटियों को मुफ़्त शिक्षा और इन्साफ़सब वर्गों की तरक्क़ी से बाधाएँ साफ़
उद्योग-व्यापार लगाएँगेनया बिहार बनाएँगे।#बोले_बिहार_महागठबंधन_सरकार
— Rahul Gandhi (@RahulGandhi)November 5, 2020

ಪಟಾಕಿ ಮಾರಿದರೆ ಪರಿಸ್ಥಿತಿ ನೆಟ್ಟಗಿರುವುದಿಲ್ಲ; ಮುಸ್ಲಿಂ ಪಟಾಕಿ ಅಂಗಡಿಗೆ ಹಿಂದೂ ಯುವಕರ ವಾರ್ನಿಂಗ್​!

ಗಾಜಿಯಾಬಾದ್​ನ 7ರ ಪೋರಿ ಈಗ ವಿಶ್ವದ ಅತ್ಯಂತ ಕಿರಿಯ ಲೇಖಕಿ; ಲಾಕ್​ಡೌನ್​ನಲ್ಲಿ ಅರಳಿದ ಪ್ರತಿಭೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 5 =
Remember me
