ನವದೆಹಲಿ:ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಉತ್ತರಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರಿಗೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ ಹತ್ರಾಸ್​​ನಲ್ಲಿ ಕಾಲ್ತುಳಿತದಲ್ಲಿ ಮೃತಪಟ್ಟ ಸಂತ್ರಸ್ತರಿಗೆ ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಮನವಿ ಮಾಡಿದ್ದಾರೆ.
ಇದನ್ನು ಓದಿ:ಬಿಎಸ್‌ಪಿ ಪಕ್ಷದ ಕಚೇರಿ ಆವರಣದಲ್ಲಿ ಆರ್ಮ್‌ಸ್ಟ್ರಾಂಗ್ ಅಂತ್ಯಕ್ರಿಯೆಗೆ ಹೈಕೋರ್ಟ್​ ನಿರಾಕರಣೆ
ಉತ್ತರಪ್ರದೇಶ ಸರ್ಕಾರ ಘೋಷಿಸಿರುವ ಪರಿಹಾರ ತೀರಾ ಅಸಮರ್ಪಕವಾಗಿದೆ. ಪರಿಹಾರದ ಮೊತ್ತವನ್ನು ಹೆಚ್ಚಿಸಬೇಕು ಹಾಗೂ ಅದನ್ನು ಆದಷ್ಟು ಬೇಗ ಅವರಿಗೆ ತಲುಪುವಂತೆ ಮಾಡಬೇಕು. ಮತ್ತು ಗಾಯಾಳುಗಳಿಗೆ ತಕ್ಷಣ ಸೂಕ್ತ ಚಿಕಿತ್ಸೆ ಸಿಗುವಂತೆ ನೋಡಿಕೊಳ್ಳಬೇಕು ಎಂದು ಪತ್ರದಲ್ಲಿ ಗಾಂಧಿ ಉಲ್ಲೇಖಿಸಿದ್ದಾರೆ. ಭವಿಷ್ಯದಲ್ಲಿ ಇಂತಹ ಘಟನೆಗಳು ನಡೆಯದಂತೆ ನೋಡಿಕೊಳ್ಳಲು ಮತ್ತು ನ್ಯಾಯ ವ್ಯವಸ್ಥೆಯಲ್ಲಿ ಈ ಸಂತ್ರಸ್ತ ಕುಟುಂಬಗಳ ನಂಬಿಕೆಯನ್ನು ಉಳಿಸಿಕೊಳ್ಳಲು ಸರಿಯಾದ ತನಿಖೆ ಅಗತ್ಯ. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ನೀಡುವುದು ಸೂಕ್ತ ಎಂದು ವಿರೋಧ ಪಕ್ಷದ ನಾಯಕ ತಿಳಿಸಿದ್ದಾರೆ.

ಈ ಹಿಂದೆ ಉತ್ತರಪ್ರದೇಶ ಮುಖ್ಯಮಂತ್ರಿ ಮೃತರ ಕುಟುಂಬಕ್ಕೆ ತಲಾ 2 ಲಕ್ಷ ರೂ. ಮತ್ತು ಗಾಯಗೊಂಡವರಿಗೆ 50 ಸಾವಿರ ರೂ. ಪರಿಹಾರ ಘೋಷಿಸಿದ್ದರು.
ಸ್ವಯಂಘೋಷಿತ ದೇವಮಾನವ ಬಾಬಾ ಭೋಲೆ ಅವರ ಸತ್ಸಂಗದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ ಒಟ್ಟು 121 ಮಂದಿ ಮೃತಪಟ್ಟಿದ್ದರು ಮತ್ತು ಹಲವರಿಗೆ ಗಂಭೀರ ಗಾಯಗಳಾಗಿದ್ದವು. ಪ್ರಕರಣ ಪ್ರಮುಖ ಆರೋಪಿ ದೇವಪ್ರಕಾಶ್ ಮಧುಕರ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿ ಪ್ರಸ್ತುತ ನ್ಯಾಯಾಂಗ ಬಂಧನದಲ್ಲಿದ್ದಾನೆ. (ಏಜೆನ್ಸೀಸ್​​)
ಕುಲ್ಗಾಮ್ ಎನ್​ಕೌಂಟರ್​​; ಉಗ್ರಗಾಮಿ ವಿರೋಧಿ ಕಾರ್ಯಾಚರಣೆಯಲ್ಲಿ 6 ಭಯೋತ್ಪಾದಕರು ಹತ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:3 × four =
Remember me
