ನವದೆಹಲಿ:18ನೇ ಲೋಕಸಭೆ ಅಧಿವೇಶನ ಆರಂಭವಾಗಿದೆ. ಅಧಿವೇಶನದಲ್ಲಿ ವಿಪಕ್ಷ ನಾಯಕ ರಾಹುಲ್​ಗಾಂಧಿ ಮೊದಲ ಬಾರಿಗೆ ಭಾಷಣ ಮಾಡಿದರು. ವಿರೋಧ ಪಕ್ಷದ ನಾಯಕರಾಗಿ ತಮ್ಮ ಅಭಿಪ್ರಾಯಗಳನ್ನು ಮಂಡಿಸಿದರು. ರಾಹುಲ್ ಗಾಂಧಿ ಭಾಷಣದ ವೇಳೆ ಬಿಜೆಪಿಯ ಉನ್ನತ ನಾಯಕರು ಕೂಡ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಭಾರೀ ವಿರೋಧ ವ್ಯಕ್ತವಾದ ಬಳಿಕ ರಾಹುಲ್​ ಗಾಂಧಿ ಅವರ ಭಾಷಣದ ಕೆಲವು ಭಾಗಗಳನ್ನು ಲೋಕಸಭೆಯ ಸ್ಪೀಕರ್ ತೆಗೆದುಹಾಕಿದ್ದಾರೆ.
ಇದನ್ನು ಓದಿ:ಕೇಂದ್ರವು ಅಗ್ನಿವೀರರನ್ನು ಯೂಸ್​ ಆ್ಯಂಡ್​ ಥ್ರೋ ಎಂಬಂತೆ ನಡೆಸಿಕೊಳ್ಳುತ್ತಿದೆ; ರಾಹುಲ್​ ಗಾಂಧಿ
ಲೋಕಸಭೆಯಲ್ಲಿ ಸ್ಪೀಕರ್ ತಮ್ಮ ಭಾಷಣದ ಪ್ರಮುಖ ಭಾಗಗಳನ್ನು ತೆಗೆದುಹಾಕಿದ ನಂತರ ಪ್ರಧಾನಿ ಮೋದಿ ವಿರುದ್ಧ ವಿರೋಧ ಪಕ್ಷದ ನಾಯಕ ರಾಹುಲ್​ ಗಾಂಧಿ ವಾಗ್ದಾಳಿ ನಡೆಸಿದರು. ಪ್ರಧಾನಿ ಮೋದಿ ಅವರ ಜಗತ್ತಿನಲ್ಲಿ ಸತ್ಯವನ್ನು ಅಳಿಸಬಹುದು, ಆದರೆ ವಾಸ್ತವದಲ್ಲಿ ಸತ್ಯವನ್ನು ತೆಗೆದುಹಾಕಲು ಸಾಧ್ಯವಿಲ್ಲ. ನಾನು ಏನು ಹೇಳಬೇಕು ಅದನ್ನು ಹೇಳಿದ್ದೇನೆ, ಇದು ಸತ್ಯ. ಅವರು ತೆಗೆದುಹಾಕಿದರು ಸತ್ಯವು ಮೇಲುಗೈ ಸಾಧಿಸುತ್ತದೆ ಎಂದು ಹೇಳಿದ್ದಾರೆ.
ಸದನದಲ್ಲಿ ರಾಹುಲ್​ಗಾಂಧಿ ಅವರು ನೀಟ್​, ಅಗ್ನಿವೀರ್​​ ಸೇರಿದಂತೆ ಹಲವು ವಿಷಯಗಳನ್ನು ತಮ್ಮ ಭಾಷಣದಲ್ಲಿ ಸೇರಿಸಿಕೊಂಡಿದ್ದರು. ಅದರಲ್ಲಿ ಹಿಂದುತ್ವದ ಬಗ್ಗೆ ನೀಡಿದ ಹೇಳಿಕೆಗೆ ಪ್ರಧಾನಿ ಮೋದಿ ಸೇರಿದಂತೆ ಆಡಳಿತ ಪಕ್ಷದ ಹಲವರು ಆಕ್ಷೇಪ ವ್ಯಕ್ತಪಡಿಸಿದರು. ಹಿಂದೂ ಎಂದು ಕರೆದುಕೊಳ್ಳುವವರು ಹಿಂಸಾಚಾರದಲ್ಲಿ ತೊಡಗುತ್ತಾರೆ ಎಂಬ ರಾಹುಲ್​ ಗಾಂಧಿ ಅವರು ಹೇಳುತ್ತಿದ್ದಾರೆ ಅವರ ಭಾಷಣವನ್ನು ಪ್ರಧಾನಿ ಮೋದಿ ಅಡ್ಡಿಪಡಿಸಿ ಇಡೀ ಹಿಂದೂ ಸಮುದಾಯವನ್ನು ಹಿಂಸಾಚಾರದೊಂದಿಗೆ ಜೋಡಿಸುವುದು ಸರಿಯಲ್ಲ. ಇದು ತುಂಬಾ ಗಂಭೀರವಾದ ವಿಚಾರ ಎಂದು ಹೇಳಿದರು.
ಹಿಂದೂಗಳು, ಅಗ್ನಿವೀರ, ಅಲ್ಪಸಂಖ್ಯಾತರು ಮತ್ತು ಹಿಂಸಾಚಾರಕ್ಕೆ ಸಂಬಂಧಿಸಿದಂತೆ ರಾಹುಲ್​ಗಾಂಧಿ ಅವರು ತಮ್ಮ ಭಾಷಣದಲ್ಲಿ ನೀಡಲಾದ ಹೇಳಿಕೆಗಳನ್ನು ತೆಗೆದುಹಾಕಲಾಗಿದೆ ಎನ್ನಲಾಗಿದೆ. (ಏಜೆನ್ಸೀಸ್​)
ಸದನದಲ್ಲಿ ‘ಹಿಂದೂ’ ಗದ್ದಲ; ರಾಹುಲ್​ಗಾಂಧಿ ಹೇಳಿಕೆಗೆ ಗಂಭೀರ ವಿಚಾರ ಎಂದು ‘ನಮೋ’ ಖಂಡನೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 4 =
Remember me
