ರತ್ಲಾಮ್ (ಮಧ್ಯಪ್ರದೇಶ):ಜಾತಿ ಆಧಾರಿತ ಮೀಸಲಾತಿಗೆ ಸುಪ್ರೀಂ ಕೋರ್ಟ್ ಸೂಚಿಸಿರುವ ಶೇಕಡಾ 50 ರಷ್ಟು ಮಿತಿಯನ್ನು ಕಾಂಗ್ರೆಸ್ ತೆಗೆದುಹಾಕುತ್ತದೆ. ದಲಿತ, ಹಿಂದುಳಿದ ಮತ್ತು ಬುಡಕಟ್ಟು ಸಮುದಾಯಗಳ ಜನರಿಗೆ ಮೀಸಲಾತಿ ಕೋಟಾ ಪ್ರಯೋಜನಗಳನ್ನು ಹೆಚ್ಚಿಸಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಸೋಮವಾರ ಮಧ್ಯಪ್ರದೇಶದ ರತ್ಲಾಮ್‌ನಲ್ಲಿ ಚುನಾವಣಾ ರ್ಯಾಲಿ ಉದ್ದೇಶಿಸಿ ಮಾತನಾಡಿದ ರಾಹುಲ್​, ಸಂವಿಧಾನವನ್ನು ಉಳಿಸಲು ಈ ಚುನಾವಣೆಯಲ್ಲಿ ಹೋರಾಡ ಮಾಡಲಾಗುತ್ತಿದೆ ಎಂದು ಹೇಳಿದರು. “ಬಿಜೆಪಿ ಮತ್ತು ಆರೆಸ್ಸೆಸ್ ಸಂವಿಧಾನ ಮುಗಿಸಲು ಬಯಸುತ್ತವೆ. ಇದನ್ನು ಬದಲಾಯಿಸಲು ಬಯಸುತ್ತದೆ. ಕಾಂಗ್ರೆಸ್ ಮತ್ತು ಇಂಡಿಯಾ ಬಣವು ಇದನ್ನು ಉಳಿಸಲು ಪ್ರಯತ್ನಿಸುತ್ತಿದೆ. ಈ ಸಂವಿಧಾನವು ನಿಮಗೆ ಜಲ (ನೀರು), ಜಂಗಲ್ (ಅರಣ್ಯ), ಜಮೀನು (ಭೂಮಿ) ಮೇಲೆ ಹಕ್ಕುಗಳನ್ನು ನೀಡಿದೆ. ನರೇಂದ್ರ ಮೋದಿ ಇವೆಲ್ಲವನ್ನು ತೆಗೆದುಹಾಕಲು ಬಯಸುತ್ತಾರೆ. ಅವರಿಗೆ ಸಂಪೂರ್ಣ ಅಧಿಕಾರ ಬೇಕು” ಎಂದು ರಾಹುಲ್​ ಅವರು ಸಂವಿಧಾನದ ಪ್ರತಿಯನ್ನು ಹಿಡಿದುಕೊಂಡ ಹೇಳಿದರು.
ಗೆದ್ದರೆ ಸಂವಿಧಾನ ಬದಲಿಸುತ್ತೇವೆ ಎಂದು ಬಿಜೆಪಿ ನಾಯಕರು ಘೋಷಿಸಿದ್ದಾರೆ. ಇದಕ್ಕಾಗಿಯೇ ಅವರು ‘400 ಸೀಟು’ ಘೋಷಣೆ ಮಾಡಿದರು. ಆದರೆ 400 ಅನ್ನು ಮರೆತುಬಿಡಿ, ಅವರಿಗೆ 150 ಸೀಟುಗಳು ಕೂಡ ಸಿಗುವುದಿಲ್ಲ. ಮೀಸಲಾತಿಯನ್ನು ತೆಗೆದುಹಾಕುತ್ತೇವೆ ಎಂದು ಅವರು ಹೇಳುತ್ತಾರೆ, ನಾನು ಈ ಹಂತದಿಂದಲೇ ನಿಮಗೆ ಹೇಳಲು ಬಯಸುತ್ತೇನೆ, ನಾವು ಶೇ 50 ಮಿತಿಯನ್ನು ಮೀರಿ ಮೀಸಲಾತಿಯನ್ನು ಹೆಚ್ಚಿಸುತ್ತೇವೆ. ಬಡವರು, ಹಿಂದುಳಿದವರು, ದಲಿತರು, ಆದಿವಾಸಿಗಳಿಗೆ ಅಗತ್ಯವಿರುವಷ್ಟು ಮೀಸಲಾತಿ ನೀಡುತ್ತೇವೆ ಎಂದರು.
ಮುಸ್ಲಿಮರಿಗೆ ಅನುಕೂಲವಾಗುವಂತೆ ಹಿಂದುಳಿದ ವರ್ಗಗಳಿಗೆ ಮೀಸಲಾತಿಯನ್ನು ಕಾಂಗ್ರೆಸ್ ಯೋಜಿಸುತ್ತಿದೆ ಎಂದು ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ಆರೋಪಿಸಿದೆ. ಈ ಆರೋಪವನ್ನು ಕಾಂಗ್ರೆಸ್ ನಿರಾಕರಿಸಿದೆ. ಗುಜರಾತ್ ಬನಸ್ಕಾಂತದಲ್ಲಿ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ, ಧರ್ಮದ ಹೆಸರಿನಲ್ಲಿ ಮೀಸಲಾತಿಯನ್ನು ಎಂದಿಗೂ ದುರುಪಯೋಗಪಡಿಸಿಕೊಳ್ಳುವುದಿಲ್ಲ ಮತ್ತು ಸಂವಿಧಾನದೊಂದಿಗೆ ಆಟವಾಡುವುದಿಲ್ಲ ಎಂದು ಘೋಷಿಸುವಂತೆ ನಾನು ಕಾಂಗ್ರೆಸ್ ಮತ್ತು ಅವರ ಪಕ್ಷ ಮತ್ತು ಅದರ ಬೆಂಬಲಿಗರ ‘ಶೆಹಜಾದಾ’ಗೆ ಸವಾಲು ಹಾಕುತ್ತೇನೆ ಎಂದಿದ್ದಾರೆ.


ರಾಹುಲ್​ ಗಾಂಧಿ ಸೋಲಿಸಿದ್ದ ಕೇಂದ್ರ ಸಚಿವೆ ಸ್ಮೃತಿ ಇರಾನಿ: ಯಾವ ಯಾವ ಮ್ಯೂಚುವಲ್​ ಫಂಡ್​ಗಳಲ್ಲಿ ಹೂಡಿಕೆ ಮಾಡಿದ್ದಾರೆ ಗೊತ್ತೆ?
ಈ ಬ್ಯಾಂಕುಗಳ ಎನ್​ಪಿಎ ಕಡಿತ: ಷೇರು ಬೆಲೆ ದುಪ್ಪಟ್ಟಾಗಲಿದೆ ಎನ್ನುತ್ತಾರೆ ತಜ್ಞರು
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:fifteen + ten =
Remember me
