ನವದೆಹಲಿ:ಪಂಜಾಬ್​ನಲ್ಲಿ ಕ್ಯಾಪ್ಟನ್​ ಅಮರಿಂದರ್​ ಸಿಂಗ್​ರನ್ನು ಮುಖ್ಯಮಂತ್ರಿ ಹುದ್ದೆಯಿಂದ ಕೆಳಗಿಳಿಸಿದ ಬೆನ್ನಲ್ಲೇ ರಾಜಸ್ಥಾನದಲ್ಲಿ ಹಿರಿಯ ನಾಯಕ, ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಕುಚಿರ್ ಅಲುಗಾಡಿಸುವ ಕೆಲಸ ಮತ್ತೆ ಶುರುವಾಗಿದೆ. ಕೆಲ ದಿನಗಳ ಹಿಂದಷ್ಟೇ ದೆಹಲಿಯಲ್ಲಿ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಮತ್ತು ಸೋದರಿ ಪ್ರಿಯಾಂಕಾ ವಾದ್ರಾರನ್ನು ಭೇಟಿ ಮಾಡಿದ್ದ ರಾಜಸ್ಥಾನ ಕಾಂಗ್ರೆಸ್​ ಮುಖಂಡ ಸಚಿನ್​ ಪೈಲಟ್​, ಶುಕ್ರವಾರದಂದು ಮತ್ತೊಮ್ಮೆ ಇಬ್ಬರನ್ನೂ ಭೇಟಿ ಮಾಡಿ, 45 ನಿಮಿಷಗಳ ಕಾಲ ಮಾತುಕತ ನಡೆಸಿದ್ದಾರೆ.
ರಾಜ್ಯದಲ್ಲಿ ಹೊಸ ನಾಯಕತ್ವಕ್ಕೆ ಅವಕಾಶ ನೀಡಬೇಕು ಎಂಬ ಒತ್ತಡ ಮೊದಲಿನಿಂದ ಇದ್ದರೂ, ಈ ಬಾರಿ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ರಾಹುಲ್​&ಪ್ರಿಯಾಂಕಾರನ್ನು ಪೈಲಟ್​ ಒತ್ತಾಯಿಸಿದ್ದಾರೆ ಎಂದು ಹೇಳಲಾಗಿದೆ. ಸಂಪುಟ ವಿಸ್ತರಣೆ ವೇಳೆ ತಮ್ಮ ಬೆಂಬಲಿಗ ಶಾಸಕರಿಗೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಪೈಲಟ್​ ಹೈಕಮಾಂಡ್​ ಮೇಲೆ ಒತ್ತಡ ಹೇರುತ್ತಿರುವುದರಿಂದಲೇ ಸಿಎಂ ಅಶೋಕ್​ ಗೆಹ್ಲೋಟ್​ ವಿಸ್ತರಣೆ ಪ್ರಕ್ರಿಯೆಯನ್ನು ಮುಂದೂಡುತ್ತಲೇ ಇದ್ದಾರೆ.
ಏತನ್ಮಧ್ಯೆ, ಮುಂದಿನ ವರ್ಷ ಗುಜರಾತ್​ ಚುನಾವಣೆ ನಡೆಯಲಿದ್ದು ರಾಜ್ಯ ಕಾಂಗ್ರೆಸ್​ ಉಸ್ತುವಾರಿಯನ್ನಾಗಿ ಸಚಿನರನ್ನು ಗುಜರಾತ್​ಗೆ ಕಳುಹಿಸಲು ರಾಹುಲ್​ ಉತ್ಸುಕರಾಗಿದ್ದಾರೆ. ಆದರೆ, ಸಂಪುಟ ವಿಸ್ತರಣೆಯಲ್ಲಿ ಬೆಂಬಲಿಗರಿಗೆ ಮಹತ್ವ ಸಿಕ್ಕರೆ ಮಾತ್ರ ಜವಾಬ್ದಾರಿ ವಹಿಸಿಕೊಳ್ಳುವೆ ಎಂದು ಪೈಲಟ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 5 =
Remember me
