ನವದೆಹಲಿ:ಸಂಸತ್​ ಸದಸ್ಯತ್ವದಿಂದ ಅನರ್ಹಗೊಂಡ ಬಳಿಕ ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿಗೆ ನೀಡಲಾಗಿದ್ದ ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಸೋಮವಾರ ನೋಟಿಸ್​​ ನೀಡಲಾಗಿತ್ತು.
ಇನ್ನು ತಮಗೆ ನೋಟಿಸ್​ ನೀಡಿರುವ ಕುರಿತು ಪ್ರತಿಕ್ರಿಯಿಸಿರುವ ರಾಹುಲ್​ ಸರ್ಕಾರಿ ಬಂಗಲೆಯನ್ನ ಖಾಲಿ ಮಾಡುವುದಾಗಿ ತಿಳಿಸಿದ್ದಾರೆ.
ಈ ಕುರಿತು ಲೋಸಕಭೆ ಕಾರ್ಯದರ್ಶಿ ಮೋಹಿತ್​ ರಾಜನ್​ಗೆ ಪತ್ರ ಬರೆದಿರುವ ರಾಹುಲ್​ ಕಳೆದ ನಾಲ್ಕು ಅವಧಿಗಳಲ್ಲಿ ಲೋಕಸಭೆಯ ಚುನಾಯಿತ ಸದಸ್ಯನಾಗಿ ನಾನು ಇಲ್ಲಿ ಕಳೆದ ಸಂತೋಷದ ಸಮಯ ಜನರ ಆದೇಶವಾಗಿತ್ತು. ನನ್ನ ಹಕ್ಕುಗಳಿಗೆ ಧಕ್ಕೆಯಾಗದಂತೆ ನಿಮ್ಮ ಪತ್ರದಲ್ಲಿ ತಿಳಿಸಿರುವ ವಿಚಾರಕ್ಕೆ ಬದ್ಧನಾಗಿರುತ್ತೇನೆ ಎಂದು ತಮ್ಮ ಪತ್ರದಲ್ಲಿ ವಿವರಿಸಿದ್ದಾರೆ.
ಇದನ್ನೂ ಓದಿ:ಸಂಸತ್​ ಸ್ಥಾನದಿಂದ ರಾಹುಲ್​ ಗಾಂಧಿ ಅನರ್ಹ; ಅಧಿಕೃತ ಸರ್ಕಾರಿ ಬಂಗಲೆ ಖಾಲಿ ಮಾಡುವಂತೆ ನೋಟಿಸ್​
ರಾಹುಲ್​ ಗಾಂಧಿ ಹಾಲಿ ಲುಟೆನ್ಸ್​ ಪ್ರದೇಶದ ತುಘಲಕ್​ ಲೇನ್​​ನಲ್ಲಿರುವ ನಂ 12 ಬಂಗಲೆಯಲ್ಲಿ ವಾಸವಿದ್ದಾರೆ. 2019ರ ಲೋಕಸಭೆ ಚುನಾವಣೆ ಪ್ರಚಾರದ ವೇಳೆ ಮೋದಿ ಉಪನಾಮದ ಬಗ್ಗೆ ವ್ಯಂಗ್ಯವಾಡಿದ್ದ ಆರೋಪದ ಮೇಲೆ ಮಾನನಷ್ಟ ಮೊಕದ್ದಮೆ ಪ್ರಕರಣದಲ್ಲಿ ಕಳೆದ ವಾರ ಸೂರತ್​ ನ್ಯಾಯಾಲಯವು ದೋಷಿ ಎಂದು ತೀರ್ಪು ನೀಡಿತ್ತು.
ನ್ಯಾಯಾಲಯದ ತೀರ್ಪಿನ ಬೆನ್ನಲ್ಲೇ ರಾಹುಲ್​ ಗಾಂಧಿ ಅವರನ್ನು ಸಂಸತ್​ ಸದಸ್ಯತ್ವದಿಂದ ಅನರ್ಹಗೊಳಿ ಲೋಕಸಭಾ ಕಾರ್ಯಾಲಯ ಆದೇಶ ಹೊರಡಿಸಿತ್ತು. ಲೋಕಸಭೆ ಸದಸ್ಯತ್ವದಿಂದ ಅನರ್ಹಗೊಂಡ ತಿಂಗಳೊಳಗೆ ಅಧಿಕೃತ ಸರ್ಕಾರಿ ಬಂಗಲೆಯನ್ನ ಖಾಲಿ ಮಾಡಬೇಕು ಎಂದು ಸೋಮವಾರ ನೋಟಿಸ್​​ ಜಾರಿ ಮಾಡಲಾಗಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 + 2 =
Remember me
