ನವೆಂಬರ್ 12ರವರೆಗೂ ಅತಿಹೆಚ್ಚು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ದಕ್ಷಿಣ ಕನ್ನಡ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ಹಾಸನ ಮತ್ತು ಕೊಡಗಿನಲ್ಲಿ ಮಳೆಯಾಗುವ ಸಾಧ್ಯತೆಯಿದೆ. ಕೋಲಾರದಲ್ಲಿ ಭಾರೀ ಮಳೆಯಾಗಲಿದ್ದು, ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ​
ಇಂದು ಮತ್ತು ನಾಳೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ. ಕರ್ನಾಟಕ ಕರಾವಳಿ ಹಾಗೂ ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ.
ಅದೇ ರೀತಿ ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ ಹಾಗೂ ಮಂಡ್ಯ, ಮೈಸೂರು, ರಾಮನಗರ, ಶಿವಮೊಗ್ಗ, ತುಮಕೂರು ಮತ್ತು ವಿಜಯನಗರದಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ತಿಳಿದುಬಂದಿದೆ. ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಗದಗ, ಹಾವೇರಿ ಮತ್ತು ಕೊಪ್ಪಳದಲ್ಲಿ ಮಳೆಯಾಗಲಿದೆ.
ಮುಂದಿನ ಮೂರು ದಿನಗಳ ಕಾಲ ಮಳೆಯಾಗಲಿದೆ ಎಂದು ರಾಜ್ಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ರಾಜ್ಯದಾದ್ಯಂತ ಹಲವು ಕಡೆ ಹಗುರದಿಂದ ಸಾಧಾರಣ ಮಳೆಯಾಗಲಿದ್ದು ಇನ್ನೂ ಕೆಲವು ಕಡೆ ಗುಡುಗು ಸಹಿತ ಭಾರೀ ಮಳೆಯಾಗಲಿದೆ.
ಬೆಂಗಳೂರು ಸುತ್ತಮುತ್ತ ಮೋಡ ಕವಿದ ವಾತಾವರಣವಿದ್ದು, ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದೆ. ಇಂದು ಮತ್ತು ನಾಳೆ ಸಂಜೆ ಅಥವಾ ರಾತ್ರಿ ವೇಳೆಗೆ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 3 =
Remember me
