ಚೆನ್ನೈ(ತಮಿಳುನಾಡು):ತಮಿಳುನಾಡಿನಲ್ಲಿ ಭಾರಿ ಮಳೆಯಾಗುವ ಮುನ್ಸೂಚನೆಯನಗನು ಕೇಂದ್ರ ಹವಾಮಾನ ಇಲಾಖೆ ನೀಡಿದೆ. ಈ ಹಿನ್ನೆಲೆಯಲ್ಲಿ ಭಾನುವಾರದಿಂದ ಮಂಗಳವಾರದವರೆಗೆ ರಾಜ್ಯಕ್ಕೆ ‘ರೆಡ್ ಅಲರ್ಟ್’ಘೋಷಿಸಲಾಗಿದೆ.
ಇದನ್ನೂ ಓದಿ:ನಾಳೆಯಿಂದ ಉದ್ಯಾನನಗರಿಯಲ್ಲಿ ಯೆಲ್ಲೋ ಅಲರ್ಟ್​​​​
ಈ ತಿಂಗಳ 22 ರ ವೇಳೆಗೆ ನೈಋತ್ಯ ಬಂಗಾಳ ಕೊಲ್ಲಿಯಲ್ಲಿ ಕಡಿಮೆ ಒತ್ತಡವು ರೂಪುಗೊಳ್ಳುವ ಸಾಧ್ಯತೆಯಿದೆ ಎಂದು ಅದು ಹೇಳಿದೆ. ಇದರ ಪರಿಣಾಮ ನ.24ರಂದು ಕೇಂದ್ರ ಬಂಗಾಳಕೊಲ್ಲಿಯಲ್ಲಿ ಕಡಿಮೆ ಒತ್ತಡ ಉಂಟಾಗಲಿದೆ ಎಂದು ಐಎಂಡಿ ತಿಳಿಸಿದೆ.
ಇದೇ ವೇಳೆ ತಮಿಳುನಾಡಿನ ಹಲವು ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಕನ್ಯಾಕುಮಾರಿ, ಥೇಣಿ, ತೆನ್ ಕಾಶಿ, ಕೊಯಮತ್ತೂರು, ಪುದುಕೊಟ್ಟೈ, ತಂಜಾವೂರು, ತಿರುನಲ್ವೇಲಿ ಮತ್ತು ತೂತುಕುಡಿ ಜಿಲ್ಲೆಗಳಲ್ಲಿ ನಾಲ್ಕು ದಿನಗಳಿಂದ ಮಳೆಯಾಗುತ್ತಿದೆ. ಭಾನುವಾರ ಮತ್ತು ಸೋಮವಾರ (ಎರಡು ದಿನ) ಸೇಲಂ, ಧರ್ಮಪುರಿ, ಕೃಷ್ಣಗಿರಿ, ತಿರುಪುರ್, ವಿರುಧುನಗರ ಮತ್ತು ನೀಲಗಿರಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ತಮಿಳುನಾಡಿನಲ್ಲಿ ಸುರಿಯುತ್ತಿರುವ ಮಳೆಯಿಂದಾಗಿ ಜಲಪಾತಗಳು ಉಕ್ಕಿ ಹರಿಯುತ್ತಿವೆ. ಶುಕ್ರವಾರ ಕುರ್ತಾಲಂ ಜಲಪಾತಕ್ಕೆ ನೀರು ನುಗ್ಗಿತ್ತು. ನೀಲಗಿರಿ ಪರ್ವತ ಶ್ರೇಣಿಗಳಲ್ಲಿ ಎಡಬಿಡದೆ ಮಳೆ ಸುರಿಯಿತು. ಜನಪ್ರಿಯ ಪ್ರವಾಸಿ ಕೇಂದ್ರವಾದ ಊಟಿಯಲ್ಲೂ ಧಾರಾಕಾರ ಮಳೆಯಾಗಿದೆ. ಪ್ರವಾಸಿಗರು ಊಟಿ ಪ್ರವಾಸವನ್ನು ಮುಂದೂಡುವಂತೆ ಹವಾಮಾನ ಇಲಾಖೆ ಸೂಚಿಸಿದೆ.
ಕರ್ನಾಟಕದಲ್ಲೂ ಭಾರಿ ಮಳೆ: ದಕ್ಷಿಣ ಕನ್ನಡ, ಬೆಳಗಾವಿ, ಧಾರವಾಡ, ಗದಗ, ಹಾವೇರಿ, ವಿಜಯಪುರ, ಬಳ್ಳಾರಿ, ಚಿತ್ರದುರ್ಗ, ದಾವಣಗೆರೆ ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಹಾಸನ, ವಿಜಯನಗರ, ತುಮಕೂರು, ಶಿವಮೊಗ್ಗ, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಕೊಡಗು ಜಿಲ್ಲೆಗಳಲ್ಲಿ ಕೂಡಾ ಭಾರೀ ಮಳೆಯಾಗುವ ಸಂಭವ ಇದೆ.
ಕರ್ನಾಟಕದಲ್ಲೂ ಭಾರಿ ಮಳೆ:ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿತದ ಪರಿಣಾಮ ರಾಜಧಾನಿ ಬೆಂಗಳೂರು ಸೇರಿದಂತೆ ಇಡೀ ರಾಜ್ಯದ ಮೇಲೆ ಬೀರಿದ್ದು, ಭಾನುವಾರ(ಮೇ 19)ದಕ್ಷಿಣ ಒಳನಾಡಿನ ಜಿಲ್ಲೆಗಳಾದ ಬಳ್ಳಾರಿ, ಬೆಂಗಳೂರು, ಕೋಲಾರ, ಚಿಕ್ಕಬಳ್ಳಾಪುರ ಚಾಮರಾಜನಗರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ ಕೊಡಗು, ಮಂಡ್ಯ, ಮೈಸೂರು, ರಾಮನಗರ ತುಮಕೂರು ಮೋಡ ಮುಸುಕಿದ ವಾತಾವರಣವಿದೆ. ಬೆಳಗ್ಗೆ 10ಗಂಟೆಯಿಂದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ ಜಿಲ್ಲೆಗಳಲ್ಲಿ ಮಳೆ ಸುರಿಯುತ್ತಿದ್ದು, ಜನಜೀವನ ಅಸ್ತವ್ಯಸ್ತಗೊಂಡಿದೆ.
ಇನ್ನು ಏಪ್ರಿಲ್ 20 ರಂದು ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ ಬೀದರ್, ಗದಗ, ಕಲಬುರ್ಗಿ, ರಾಯಚೂರು, ವಿಜಯಪುರ, ಬಳ್ಳಾರಿ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಾಮರಾಜನಗರ, ಚಿಕ್ಕಬಳ್ಳಾಪುರ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ತುಮಕೂರು, ಶಿವಮೊಗ್ಗ, ಮೈಸೂರು, ಮಂಡ್ಯ, ಕೋಲಾರ ಹಾಸನದಲ್ಲಿ ಭಾರಿ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ವಿಮಾನದಿಂದ ಇಳಿದ ವ್ಯಕ್ತಿಗೆ ಕಾದಿತ್ತು ಬಿಗ್​ ಶಾಕ್..ಜೀವ ಉಳಿದಿದ್ದೇ ಪವಾಡ..!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 7 =
Remember me
