Weather update 21-09-2023: ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯ ಮುನ್ಸೂಚನೆಯನ್ನ ಹವಾಮಾನ ಇಲಾಖೆ ನೀಡಿದೆ. ಉತ್ತರ ಪ್ರದೇಶದ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದ್ದು, ಬಂದಾ, ಚಿತ್ರಕೂಟ, ಕೌಶಂಬಿ, ಪ್ರಯಾಗ್‌ರಾಜ್, ಫತೇಪುರ್, ಪ್ರತಾಪ್‌ಗಢ, ಸೋನ್‌ಭದ್ರ, ಮಿರ್ಜಾಪುರ ಮತ್ತು ಚಂದೌಲಿ ಜಿಲ್ಲೆಗಳಲ್ಲಿ ವರುಣನ ಅಬ್ಬರ ಹೆಚ್ಚಲಿದೆ.
ಜೊತೆಗೆ ವಾರಣಾಸಿ, ಭದೋಹಿ, ಜೌನ್‌ಪುರ್, ಗೋರಖ್‌ಪುರ, ಸಂತ ಕಬೀರ್ ನಗರ, ಬಸ್ತಿ, ಕುಶಿನಗರ, ಮಹಾರಾಜ್‌ಗಂಜ್, ಸಿದ್ಧಾರ್ಥ್ ನಗರಗಳಲ್ಲಿಯೂ ಯಲ್ಲೋ ಅಲರ್ಟ್​​ ಘೋಷಿಸಲಾಗಿದೆ.
ಹವಾಮಾನ ಇಲಾಖೆಯ ಪ್ರಕಾರ, ಸೆಪ್ಟೆಂಬರ್‌’ನಲ್ಲಿ ಮತ್ತೊಮ್ಮೆ ಮಾನ್ಸೂನ್ ಸಕ್ರಿಯಗೊಳ್ಳಲಿದೆ. ಇದರಿಂದಾಗಿ ಉತ್ತರ್ರದೇಶ ಸೇರಿದಂತೆ ದೇಶದ ನಾನಾ ಕಡೆ ಭಾರೀ ಮಳೆಯಾಗುತ್ತಿದೆ. ಉತ್ತರಪ್ರದೇಶದ ಗೊಂಡಾ, ಬಲರಾಂಪುರ ಶ್ರಾವಸ್ತಿ, ಬಹ್ರೈಚ್, ಲಖಿಂಪುರ, ಸೀತಾಪುರ್, ಹರ್ದೋಯ್, ಫರೂಕಾಬಾದ್, ಕನೌಜ್, ಕಾನ್ಪುರ್ ದೇಹತ್, ಕಾನ್ಪುರ್, ಉನ್ನಾವ್, ಲಕ್ನೋ, ಬಾರಾಬಂಕಿ, ರಾಯ್ ಬರೇಲಿ, ಅಮೇಥಿ, ಸುಲ್ತಾನ್‌ಪುರ, ಅಯೋಧ್ಯೆ, ಅಂಬೇಡ್ಕರ್ ನಗರ, ಮಥುರಾದಲ್ಲಿ ಭಾರೀ ಮಳೆಯ ಎಚ್ಚರಿಕೆ ವಹಿಸಲಾಗಿದೆ.
ಮುಂದಿನ ಮೂರು ದಿನಗಳ ಕಾಲ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.
ಕರ್ನಾಟಕದಲ್ಲಿ ಮಳೆ
ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಕಳೆದ ಕೆಲ ದಿನಗಳಿಂದ ಮಳೆಯಾಗುತ್ತಲೇ ಇದೆ. ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಅತ್ಯಧಿಕ ಮಳೆ ಎಚ್ಚರಿಕೆ ಕೊಡಲಾಗಿದೆ. ಮುಂದಿನ ಒಂದು ವಾರಗಳ ಕಾಲ ರಾಜ್ಯದ ವಿವಿಧೆಡೆ ಗುಡುಗು ಮಿಂಚು ಸಹಿತ ಮಳೆಯಾಗುವ ಮುನ್ಸೂಚನೆ ನೀಡಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 20 =
Remember me
