ನವದೆಹಲಿ:ಅಮಾನತುಗೊಂಡ ಬಿಜೆಪಿ ಶಾಸಕ ರಾಜಾ ಸಿಂಗ್, “ಭಾರತೀಯ ಜನತಾ ಪಕ್ಷ ನನ್ನ ನರ-ನಾಡಿಗಳಲ್ಲಿ ಹರಿದಾಡುತ್ತಿದೆ. ನನ್ನ ಜೀವ ಇರುವವರೆಗೂ ಬಿಜೆಪಿ ಬಿಟ್ಟು ಬೇರೆ ಪಕ್ಷವನ್ನು ಸೇರುವುದಿಲ್ಲ” ಎಂದು ಹೇಳಿಕೆ ನೀಡಿದ್ದಾರೆ.
ಇದನ್ನೂ ಓದಿ:ಯುವತಿ ಮೇಲೆ ಸಾಮೂಹಿಕ ದೌರ್ಜನ್ಯ, ಆ್ಯಸಿಡ್​ ಎರಚಿ ಹತ್ಯೆ
ತೆಲಂಗಾಣ ಆರೋಗ್ಯ ಸಚಿವ ಹರೀಶ್ ರಾವ್ ಅವರನ್ನು ಭೇಟಿಯಾದ ಬೆನ್ನಲ್ಲೇ ರಾಜಾ ಸಿಂಗ್ ಭಾರತೀಯ ರಾಷ್ಟ್ರ ಸಮಿತಿಗೆ (BRS) ಸೇರ್ಪಡೆಯಾಗುತ್ತಾರೆ ಎಂಬ ವದಂತಿಗಳು ಹರಿದಾಡಿತು. ಈ ಊಹಾಪೋಹಗಳ ವಿರುದ್ಧ ಸಿಡಿದೆದ್ದ ಸಿಂಗ್, “ನನ್ನನ್ನು ಪಕ್ಷ ಅಮಾನತುಗೊಳಿಸಿದೆ. ಶೀಘ್ರವೇ ಇದನ್ನು ಹಿಂತೆಗೆದುಕೊಳ್ಳದಿದ್ದರೆ ಬಹುಶಃ ನಾನು ರಾಜಕೀಯದಿಂದ ವಿರಾಮ ತೆಗೆದುಕೊಳ್ಳುತ್ತೇನೆ ಹೊರತು ಬಿಜೆಪಿಯನ್ನು ತ್ಯಜಿಸುವುದಿಲ್ಲ” ಎಂದು ಹೇಳಿದರು.
“ನಾನು ಮಾಧ್ಯಮಗಳಿಗೆ ಒಂದು ವಿಷಯ ಹೇಳಲು ಬಯಸುತ್ತೇನೆ. ಬಿಜೆಪಿ ನನ್ನ ನರ-ನಾಡಿಗಳಲ್ಲಿ ಹರಿದಾಡುತ್ತಿದೆ. ನನ್ನ ಕೊನೆಯುಸಿರಿನ ತನಕ ನಾನು ಪಕ್ಷವನ್ನು ಬಿಟ್ಟು ಹೋಗುವುದಿಲ್ಲ. ಹಿಂದೂ ರಾಷ್ಟ್ರದ ಕಲ್ಯಾಣಕ್ಕಾಗಿ ಕೆಲಸ ಮಾಡುತ್ತೇನೆ” ಎಂದು ವದಂತಿಗಳಿಗೆ ಸ್ಪಷ್ಟನೆ ನೀಡಿದರು,(ಏಜೆನ್ಸೀಸ್).
ಯಂಗ್​ ಆಗಿಯೇ ಇರಲು ಕೋಟ್ಯಂತರ ರೂ. ಖರ್ಚು ಮಾಡಿದ, ಮಗನ ರಕ್ತ ತನ್ನ ದೇಹಕ್ಕೆ ಸೇರಿಸಿಕೊಂಡ: ಕೊನೆಗೆ ಆಗಿದ್ದೇನು?

ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
Sign in to your account
Please enter an answer in digits:5 × three =
Remember me
