ನವದೆಹಲಿ:ರಕ್ಷಣಾ ಸಚಿವ ರಾಜನಾಥ್​ ಸಿಂಗ್ ಅವರು ಗುರುವಾರ ಕರೊನಾ ಪರೀಕ್ಷೆಗೆ ಒಳಪಟ್ಟಿದ್ದು ಫಲಿತಾಂಶ ಪಾಸಿಟಿವ್​ ಬಂದಿದೆ. ಈ ಹಿನ್ನೆಲೆಯಲ್ಲಿ ದೇಶದ ರಕ್ಷಣಾ ಸಚಿವರು ಪ್ರಸ್ತುತ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.
ವೈದ್ಯರ ತಂಡ ಅವರನ್ನು ಪರೀಕ್ಷಿಸಿ ಕೆಲವು ದಿನಗಳ ಕಾಲ ವಿಶ್ರಾಂತಿಗೆ ಶಿಫಾರಸು ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ ಸಚಿವರು ಪ್ರಸ್ತುತ ಆತಂಕಕಾರಿ ಅಲ್ಲದ ರೋಗ ಲಕ್ಷಣಗಳೊಂದಿಗೆ ಹೋಮ್ ಕ್ವಾರಂಟೈನ್‌ನಲ್ಲಿದ್ದಾರೆ.
ರಾಜನಾಥ್​ ಸಿಂಗ್ ಇಂದು ರಾಷ್ಟ್ರ ರಾಜಧಾನಿಯಲ್ಲಿ ಭಾರತೀಯ ವಾಯುಪಡೆಯ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಬೇಕಿತ್ತು. ಆದರೆ ಕೋವಿಡ್​ ಪಾಸಿಟಿವ್​ ವರದಿ ಬಂದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮದಲ್ಲಿ ಅವರ ಭಾಗವಹಿಸುವಿಕೆ ರದ್ದಾಗಿದೆ.
ಬುಧವಾರ ಅವರು ಸೇನಾ ಕಮಾಂಡರ್‌ಗಳ ಸಮ್ಮೇಳನದಲ್ಲಿ ಭಾಗವಹಿಸಿದ್ದರು, ಈ ಸಂದರ್ಭದಲ್ಲಿ ಅವರು ಸೇನಾ ಮುಖ್ಯಸ್ಥ ಜನರಲ್ ಮನೋಜ್ ಪಾಂಡೆ ಮತ್ತು ಇತರ ಹಿರಿಯ ಸೇನಾ ಅಧಿಕಾರಿಗಳೊಂದಿಗೆ ಇದ್ದರು. ಅವರು ಸಣ್ಣ ಶಸ್ತ್ರಾಸ್ತ್ರ ಫೈರಿಂಗ್ ಸಿಮ್ಯುಲೇಟರ್‌ನಲ್ಲಿ ಗುಂಡು ಹಾರಿಸುವುದನ್ನು ಅಭ್ಯಾಸ ಮಾಡಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty + ten =
Remember me
