ಜೈಪುರ:ಮದುವೆ ಮುಗಿಸಿ ಮನೆಗೆ ವಾಪಸ್​ ಬರುವಾಗ ಕಾರು ಹಾಗೂ ಲಾರಿ ನಡುವೆ ಸಂಭವಿಸಿದ ಭೀಕರ ರಸ್ತೆ ಅಫಘಾತದಲ್ಲಿ 9 ಮಂದಿ ಯುವಕರು ಮೃತಪಟ್ಟಿರುವ ಘಟನೆ ರಾಜಸ್ಥಾನದ ಜಲಾವರ್ ಜಿಲ್ಲೆಯ ಅಕ್ಲೇರಾ ಸಮೀಪದ ಪಂಚೋಲಾ ಗ್ರಾಮದಲ್ಲಿ ನಡೆದಿದೆ. ಘಟನೆಯಲ್ಲಿ ಓರ್ವ ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಆತನ ಸ್ಥಿತಿ ಚಿಂತಾಜನಕವಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಈ ಕುರಿತು ಪ್ರತಿಕ್ರಿಯಿಸಿರುವ ಹಿರಿಯ ಪೊಲೀಸ್​ ಅಧಿಕಾರಿಜಯೊಬ್ಬರು, ಮಧ್ಯಪ್ರದೇಶದಲ್ಲಿ ಮದುವೆ ಕಾರ್ಯಕ್ರಮ ಮುಗಿಸ ವಾಪಸ್​ ಆಗುತ್ತಿದ್ದ ವೇಳೆ ದುರ್ಘಟನೆ ಸಂಭವಿಸಿದ್ದು, 3 ಯುವಕರು ಸ್ಥಳದಲ್ಲೇ ಮೃತಪಟ್ಟಿದ್ದು, ಆರು ಮಂದಿ ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ. ಅತಿವೇಗ ಚಾಲನೆಯೇ ದುರ್ಘಟನೆಗೆ ಕಾರಣ ಎಂದು ತಿಳಿದು ಬಂದಿದೆ. ಲಾರಿ ಚಾಲಕ ಪರಾರಿಯಾಗಿದ್ದು, ಆತನಿಗಾಗಿ ಹುಡುಕಾಟ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಅಪಘಾತದ ಸುದ್ದಿ ತಿಳಿದ ತಕ್ಷಣ ಮದುವೆಯ ಸಂತೋಷವೂ ಶೋಕಕ್ಕೆ ತಿರುಗಿತ್ತು. ಅಪಘಾತದ ಸುದ್ದಿ ತಿಳಿದ ನಂತರ ವಧು-ವರರ ಮನೆಯಲ್ಲಿ ಗದ್ದಲ ಉಂಟಾಯಿತು. ಮದುವೆಗೆ ಬಂದವರೆಲ್ಲರೂ ತಮ್ಮ ಕೆಲಸ ಬಿಟ್ಟು ಘಟನಾ ಸ್ಥಳದ ಕಡೆಗೆ ಓಡಿದರು. ಈ ಅವಘಡದಿಂದ ಮದುವೆಯ ಎರಡೂ ಮನೆಗಳಲ್ಲಿ ಶೋಕ ಮಡುಗಟ್ಟಿದೆ.
#WATCH| Rajasthan: Nine people died in a road accident in Panchola near Aklera, of Jhalawar district. They were returning from a marriage procession in a van which collided with a truck: Jhalawar SP, Richa Tomarpic.twitter.com/tCxEG2ltqM
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:one × five =
Remember me
