ಜೈಪುರ:ವರ್ಷಾಂತ್ಯದಲ್ಲಿ ಚುನಾವಣೆ ನಡೆಯಲಿರುವ ರಾಜಸ್ಥಾನದಲ್ಲಿ ಕಾಂಗ್ರೆಸ್​ ಗೆದ್ದು ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಸರ್ಕಾರದ ವತಿಯಿಂದ ಮನೆ ಯಜಮಾನಿಗೆ ವಾರ್ಷಿಕ 10 ಸಾವಿರ ರೂಪಾಯಿ ನೀಡಲಾಗುವುದು ಎಂದು ಪ್ರಿಯಾಂಕ ಗಾಂಧಿ ಘೋಷಿಸಿದ್ದಾರೆ.
ರಾಜಸ್ಥಾನದ ಜುಂಜುನುವಿನಲ್ಲಿ ಸಾರ್ವಜನಿಕ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಪ್ರಿಯಾಂಕ ಗಾಂಧಿ ಕಾಂಗ್ರೆಸ್​ ಮತ್ತೊಮ್ಮೆ ಅಧಿಕಾರಕ್ಕೆ ಬಂದರೆ ಗ್ಯಾಸ್​ ಸಿಲಿಂಡರ್​ನ ಬೆಲೆ 500 ರೂಪಾಯಿಗೆ ಇಳಿಸಲಾಗುವುದು ಎಂದು ಆಶ್ವಾಸನೆ ನೀಡಿದ್ದಾರೆ.
ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮಹಿಳಾ ಮೀಸಲಾತಿ ಮಸೂದೆಯನ್ನು ಅಂಗೀಕರಿಸಲಾಗಿದೆ. ಆದರೆ, ಇದು ಜಾರಿಯಾಗಬೇಕೆಂದರೆ 10 ವರ್ಷಗಳ ಸಮಯ ಬೇಕಾಗಿದೆ. ಅದೇ ರೀತಿ ಪೂರ್ವ ರಾಜಸ್ಥಾನದ ಕಾಲುವೆ ಯೋಜನೆ ಪ್ರಕಟಿಸಿ 10 ವರ್ಷಗಳು ಕಳೆದಿವೆ. ಆದರೆ, ಈವರೆಗೂ ಕಾರ್ಯರೂಪಕ್ಕೆ ಬಂದಿಲ್ಲ. ಕೇಂದ್ರ ಸರ್ಕಾರದ ಯೋಜನೆಗಳು ಟೊಳ್ಳಾಗಿವೆ. ಆದರೆ, ಕಾಂಗ್ರೆಸ್​ ಸರ್ಕಾರದ ಯೋಜನೆಗಳು ಕಾರ್ಯರೂಪಕ್ಕೆ ಬರುವಂಥದ್ದು ಎಂದು ಹೇಳಿದ್ದಾರೆ.
आज झुंझनू, राजस्थान में विशाल जनसभा को संबोधित किया। कांग्रेस ने अपनी विभिन्न योजनाओं के माध्यम से कल्याणकारी सरकार का मॉडल पेश किया है। स्वास्थ्य का अधिकार, पुरानी पेंशन, 500 रुपये में गैस सिलेंडर, इंदिरा रसोई जैसी तमाम योजनाओं ने जनता का हाथ मजबूत किया है।राजस्थान का रिवाज…pic.twitter.com/ylypSrvS91
ಇದನ್ನೂ ಓದಿ:VIDEO| ಮಹಿಳೆಯ ಹಸ್ತಕ್ಷೇಪದಿಂದ ಇಕ್ಕಟ್ಟಿಗೆ ಸಿಲುಕಲಿದೆ ಸರ್ಕಾರ; ದೇವರಗುಡ್ಡ ಕಾರ್ಣಿಕ ನುಡಿ
ಚುನಾವಣೆ ಸಮಯದಲ್ಲಿ ಜಾತಿ ಮತತ್ಉ ಧರ್ಮದ ಬಗ್ಗೆ ಮಾತನಾಡಿದರೆ ಬಿಜೆಪಿ ಗೆಲ್ಲುತ್ತದೆ ಎಂದು ಭಾವಿಸಿದೆ. ಕೇಂದ್ರ ಸರ್ಕಾರ ಸದಾ ಅಧಿಕಾರದಲ್ಲಿ ಇರಲು ಮಾತ್ರ ಬಯಸುತ್ತಿದ್ದು, ಜನರನ್ನು ನಿಗ್ರಹಿಸಲು ಯತ್ನಿಸುತ್ತಿದೆ. ಬಿಜೆಪಿ ಸರ್ಕಾರವು ಕೆಲವು ಆಯ್ದ ಉದ್ಯಮಿಗಳಿಗಾಗಿ ಕೆಲಸ ಮಾಡುತ್ತಿದೆ. ಈ ಸರ್ಕಾರ ಸಾರ್ವಜನಿಕರ ಕಷ್ಟಗಳನ್ನು ಆಲಿಸುವುದಿಲ್ಲ ಎಂದು ಪ್ರಿಯಾಂಕ ಗಾಂಧಿ ವಾದ್ರಾ ಆರೋಪಿಸಿದ್ದಾರೆ.
ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ಗೆ ಸೆಮಿಫಿನಾಲೆ ಎಂದೇ ಹೇಳಲಾಗಿದೆ. 200 ಸದಸ್ಯಬಲದ ರಾಜಸ್ಥಾನ ವಿಧಾನಸಭೆಗೆ ನವೆಂಬರ್ 25ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + four =
Remember me
