ಉದಯಪುರ:ನಡುರಸ್ತೆಯಲ್ಲೇ ಭೀಕರವಾಗಿ ಹತ್ಯೆಯಾದ ಟೈಲರ್​ ಕನ್ಹಯ್ಯ ಲಾಲ್​​ ಅವರ ಮನೆಗೆ ತೆರಳಿದ ಮುಖ್ಯಮಂತ್ರಿ ಅಶೋಕ್​ ಗೆಹ್ಲೋಟ್​ ಕುಟುಂಬಸ್ಥರನ್ನು ಭೇಟಿ ಮಾಡಿ ಸಾಂತ್ವನ ಹೇಳಿದ್ದಾರೆ. ಅಲ್ಲದೇ ನ್ಯಾಯ ಕೊಡಿಸುವ ಭರವಸೆ ನೀಡಿದ್ದಾರೆ.
ಉದಯಪುರದಲ್ಲಿರುವ ಕನ್ಹಯ್ಯಲಾಲ್​ ಮನೆಗೆ ಗುರುವಾರ ಭೇಟಿ ನೀಡಿದ ಸಿಎಂ ಗೆಹ್ಲೋಟ್​, ಕುಟುಂಬಸ್ಥರಿಗೆ 51 ಲಕ್ಷ ರೂ.ಚೆಕ್​ ನೀಡಿದರು.
#WATCH| Rajasthan CM Ashok Gehlot meets the family members of#KanhaiyaLal, who was killed by two men on June 28 in Udaipurpic.twitter.com/rQzra6Wqpd— ANI MP/CG/Rajasthan (@ANI_MP_CG_RJ)June 30, 2022
#WATCH| Rajasthan CM Ashok Gehlot meets the family members of#KanhaiyaLal, who was killed by two men on June 28 in Udaipurpic.twitter.com/rQzra6Wqpd
ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಗೆಹ್ಲೋಟ್​, ಈ ಪ್ರಕರಣವನ್ನು ಎನ್​ಐಎ ತನಿಖೆಗೊಳಪಡಿಸಬೇಕೆಂದು ಕೇಂದ್ರ ಗೃಹ ಸಚಿವರಲ್ಲಿ ಮನವಿ ಮಾಡಲಾಗುವುದು, ಹಂತಕರಿಗೆ ಕಠಿಣ ಶಿಕ್ಷೆಯಾಗುವುದು ಖಚಿತ. ಈ ಘಟನೆ ಇಡೀ ದೇಶವನ್ನೇ ಬೆಚ್ಚಿ ಬೀಳಿಸಿದೆ ಎಂದು ಹೇಳಿದರು.
ಮುಖ್ಯಮಂತ್ರಿ ಗೆಹ್ಲೋಟ್ ಮಾತ್ರವಲ್ಲದೇ ಸ್ಥಳೀಯ ಶಾಸಕರು, ರಾಜಕೀಯ ಮುಖಂಡರು ಕನ್ಹಯ್ಯ ಲಾಲ್​ ಮನೆಗೆ ಭೇಟಿ ನೀಡಿ ಕುಟುಂಬಸ್ಥರಿಗೆ ಸಾಂತ್ವನ ಹೇಳಿತ್ತಿದ್ದು, ಕೆಲವು ಸಂಘ-ಸಂಸ್ಥೆಗಳಿಂದಲೂ ಪರಿಹಾರ ಧನ ನೀಡಲಾಗಿದೆ.(ಏಜೆನ್ಸೀಸ್​)
ಟೈಲರ್​ ಕನ್ಹಯ್ಯಲಾಲ್​ ಹತ್ಯೆ ಖಂಡಿಸಿ ಬೃಹತ್​ ಪ್ರತಿಭಟನಾ ಮೆರವಣಿಗೆ: ಸಾವಿರಾರು ಜನರು ಭಾಗಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 2 =
Remember me
