ನವದೆಹಲಿ:ರಾಜಸ್ಥಾನದ ರಾಜಕೀಯ ಬಿಕ್ಕಟ್ಟಿನ ವಿವಾದವನ್ನು ಇಂದು ಕೈಗೆತ್ತಿಕೊಂಡಿದ್ದ ಸುಪ್ರೀಂಕೋರ್ಟ್‌ ಮಾಜಿ ಉಪಮುಖ್ಯಮಂತ್ರಿ ಸಚಿನ್‌ ಪೈಲಟ್‌ ತಾತ್ಕಾಲಿಕವಾಗಿ ನಿರಾಳರಾಗುವಂಥ ಆದೇಶವನ್ನು ಹೊರಡಿಸಿದೆ.
ರಾಜಸ್ಥಾನ ವಿಧಾನಸಭಾ ಸ್ಪೀಕರ್ ಸಿ.ಪಿ ಜೋಶಿ ಅವರು ಕಾಂಗ್ರೆಸ್ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ತಾನು ಅಂತೀಮ ತೀರ್ಪು ಹೊರಡಿಸುವವರೆಗೂ ಯಾವುದೇ ತೀರ್ಮಾನ ತೆಗೆದುಕೊಳ್ಳುವಂತಿಲ್ಲ ಎಂದು ಸುಪ್ರೀಂಕೋರ್ಟ್‌ ಹೇಳಿದೆ.
ಸಚಿನ್ ಪೈಲಟ್ ಬಣದ ಶಾಸಕರು ಅನರ್ಹತೆಯ ನೋಟಿಸ್ ಪ್ರಶ್ನಿಸಿ ಸಲ್ಲಿಸಿರುವ ಅರ್ಜಿ ಸಂಬಂಧ ಯಾವುದೇ ತೀರ್ಪು ನೀಡದಂತೆ ರಾಜಸ್ಥಾನ ಹೈಕೋರ್ಟ್​ಗೆ ಸೂಚಿಸಬೇಕು ಎಂದು ಸ್ಪೀಕರ್ ಸಿ.ಪಿ. ಜೋಶಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್​ ಈ ರೀತಿ ಆದೇಶ ಹೊರಡಿಸಿದೆ.
ಇದನ್ನೂ ಓದಿ:ಮಹಿಳೆ ಬೆಂಕಿಗಾಹುತಿ: ರಾಜಕೀಯ ವಿಷದ ಬೀಜಕ್ಕೆ ಬಲಿಯಾಯಿತೇ ಜೀವ?
ಪೈಲಟ್ ಮತ್ತು 18 ಶಾಸಕರ ಅರ್ಜಿ ಕುರಿತು ಕಳೆದ ಸೋಮವಾರ ಮತ್ತು ಮಂಗಳವಾರ ವಿಚಾರಣೆ ನಡೆಸಿದ್ದ ಹೈಕೋರ್ಟ್​ನ ವಿಭಾಗೀಯ ಪೀಠ, ಶುಕ್ರವಾರಕ್ಕೆ ತೀರ್ಪು ಕಾಯ್ದಿರಿಸಿತ್ತು. ಅಲ್ಲಿಯವರೆಗೆ ಯಾವುದೇ ಕ್ರಮ ಕೈಗೊಳ್ಳದಂತೆ ಸ್ಪೀಕರ್​ಗೆ ಸೂಚಿಸಿತ್ತು. ಇದರಿಂದ ಸಾಂವಿಧಾನಿಕ ಹುದ್ದೆಯ ಕರ್ತವ್ಯ ನಿರ್ವಹಣೆಗೆ ಅಡ್ಡಿಯಾಗಿದೆ ಎಂದು ಸ್ಪೀಕರ್ ಜೋಶಿ ಸುಪ್ರೀಂಕೋರ್ಟ್​ ಮೊರೆ ಹೋಗಿದ್ದು, ಅದರ ವಿಚಾರಣೆ ನಡೆಯುತ್ತಿದೆ.
ಹೈಕೋರ್ಟ್‌ನಲ್ಲಿ ನಡೆಯುತ್ತಿರುವ ವಿಚಾರಣೆಗೆ ತಡೆ ನೀಡದ ಸುಪ್ರೀಂಕೋರ್ಟ್‌, ‘ಸಚಿನ್‌ ಪೈಲಟ್‌ ಅವರು ಸಲ್ಲಿಸಿರುವ ಅರ್ಜಿಯ ಕುರಿತಂತೆ ಈಗಾಗಲೇ ರಾಜಸ್ಥಾನದ ಹೈಕೋರ್ಟ್‌ ವಿಚಾರಣೆ ನಡೆಸುತ್ತಿದೆ. ವಿಚಾರಣೆ ಅಲ್ಲಿ ಮುಂದುವರೆಯಲಿ. ಆದರೆ ಅಲ್ಲಿ ಏನೇ ತೀರ್ಪು ಬಂದರೂ ಅದು ಸುಪ್ರೀಂಕೋರ್ಟ್‌ ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ’ ಎಂದು ಹೇಳಿದೆ.
ಈ ಹಿನ್ನೆಲೆಯಲ್ಲಿ ಹೈಕೋರ್ಟ್‌ ಏನೇ ಆದೇಶ ಹೊರಡಿಸಿದರೂ ಸುಪ್ರೀಂಕೋರ್ಟ್‌ನಲ್ಲಿ ಈ ಪ್ರಕರಣ ಅಂತಿಮವಾಗಿ ತೀರ್ಮಾನಕ್ಕೆ ಬರುವವರೆಗೆ ಬಂಡಾಯ ಶಾಸಕರ ವಿರುದ್ಧ ಯಾವುದೇ ಕ್ರಮ ತೆಗೆದುಕೊಳ್ಳುವಂತಿಲ್ಲ.(ಏಜೆನ್ಸೀಸ್‌)
ಛೇ… ವಯಸ್ಸಾಗೋಯ್ತು ಅಂತ ಮರುಗುವವರಿಗೆ ವಿಜ್ಞಾನಿಗಳು ಕೊಟ್ಟಿದ್ದಾರೆ ಸಿಹಿಸುದ್ದಿ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:seventeen + fifteen =
Remember me
