ಜೈಪುರ:ಭಾರಿ ಹಗ್ಗಜಗ್ಗಾಟದ ಬಳಿಕ ರಾಜಸ್ಥಾನ ರಾಜ್ಯಪಾಲ ಕಲ್ರಾಜ್​ ಮಿಶ್ರಾ ರಾಜಸ್ಥಾನ ವಿಧಾನಸಭೆ ಅಧಿವೇಶನ ನಡೆಸಲು ಸಿಎಂ ಅಶೋಕ್​ ಗೆಹ್ಲೋಟ್​ಗೆ ಅನುಮತಿ ನೀಡಿದ್ದಾರೆ.
ಬುಧವಾರವೂ (ಜುಲೈ 29) ಸಿಎಂ ಅಶೋಕ್​ ಗೆಹ್ಲೋಟ್​ ಕಲಾಪ ನಡೆಸುವ ಪ್ರಸ್ತಾವನೆಗೆ ಸಂಬಂಧಿಸಿದಂತೆ ರಾಜ್ಯಪಾಲರನ್ನು ಭೇಟಿಯಾಗಿದ್ದರು. ಅಂತಿಮವಾಗಿ ಆಗಸ್ಟ್​ 14ರಿಂದ ಅಧಿವೇಶನ ನಡೆಸಲು ಹಸಿರು ನಿಶಾನೆ ತೋರಿದ್ದಾರೆ.
ಎರಡು ದಿನಗಳ ಹಿಂದಷ್ಟೇ ಕಲಾಪಕ್ಕೆ ಸಮ್ಮತಿ ಸೂಚಿಸಿದ್ದ ರಾಜ್ಯಪಾಲರು ಮೂರು ಷರತ್ತುಗಳನ್ನು ವಿಧಿಸಿದ್ದರು. ಅಧಿವೇಶನಕ್ಕೆ 21 ಮುನ್ನ ಶಾಸಕರಿಗೆ ನೋಟಿಸ್​ ನೀಡಿ. ಕಲಾಪದ ವೇಳೆ ವ್ಯಕ್ತಿಗತ ಅಂತರ ಕಾಯ್ದುಕೊಳ್ಳಿ, ವಿಶ್ವಾಸ ಮತ ಯಾಚಿಸುವುದಾರೆ ಕಲಾಪದ ನೇರ ಪ್ರಸಾರ ನಡೆಸಿ ಎಂದು ಸೂಚಿಸಿದ್ದರು.
ಇದನ್ನೂ ಓದಿ;ತಮಿಳುನಾಡಿನ ರಾಜಕೀಯದಲ್ಲಿ ಸಂಚಲನ ಸೃಷ್ಟಿಸಿದ ಅಣ್ಣಾಮಲೈ ಸಂದರ್ಶನ
ಸಿಎಂ ಸಲ್ಲಿಸಿದ್ದ ಪರಿಷ್ಕೃತ ಪ್ರಸ್ತಾವನೆಯಲ್ಲಿ ವಿಶ್ವಾಸ ಮತ ಯಾಚನೆಯ ಪ್ರಸ್ತಾವನೆ ಇಲ್ಲದಿರುವುದಕ್ಕೆ ಸ್ಪಷ್ಟನೆ ನೀಡುವಂತೆ ಸಿಎಂಗೆ ಮತ್ತೊಮ್ಮೆ ರಾಜ್ಯಪಾಲರು ಸೂಚಿಸಿದ್ದರು. ಹೀಗಾಗಿ ಆಗಸ್ಟ್​ 14ರಿಂದ ಕಲಾಪ ನಡೆಸಲು ಅನುಮತಿ ನೀಡುವಂತೆ ಕೋರಿ ಸಿಎಂ ಮೂರನೇ ಬಾರಿಗೆ ಪ್ರಸ್ತಾವನೆ ಕಳುಹಿಸಿದ್ದರು.
ಈ ನಡುವೆ, ಸಚಿನ್​ ಪೈಲಟ್​ ಹಾಗೂ ಅವರ ಬೆಂಬಲಿಗರ ಶಾಸಕರ ವಿಚಾರದಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿರುವ ಹೈಕೋರ್ಟ್​ ಆದೇಶವನ್ನು ಪ್ರಶ್ನಿಸಿ ಸ್ಪೀಕರ್​ ಸುಪ್ರೀಂ ಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದಾರೆ.
ಮತ್ತೊಂದು ಆಘಾತಕಾರಿ ಹಂತ ತಲುಪಿದ ಕರೊನಾ; ಭಾರತದ ಮೊದಲ ಪ್ರಕರಣ ವರದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + nineteen =
Remember me
