ಜೈಪುರ(ರಾಜಾಸ್ಥಾನ):ಮಗಳು ಪರೀಕ್ಷೆಗೆ ಸರಿಯಾಗಿ ಓದಿಲ್ಲ ಎಂಬ ಕಾರಣಕ್ಕೆ ತಂದೆಯೇ ಥಳಿಸಿ ಹತ್ಯೆ ಮಾಡಿರುವ ಘಟನೆ ರಾಜಸ್ಥಾನದ ಸಿರೋಹಿ ಜಿಲ್ಲೆಯಲ್ಲಿ ನಡೆದಿದ್ದು, ಇದು ನಾಗರಿಕ ಸಮಾಜವನ್ನು ಬೆಚ್ಚಿಬೀಳಿಸಿದೆ.
ಇದನ್ನೂ ಓದಿ:ಒಪ್ಪಿಗೆ ಕೊಟ್ಟಿದ್ದಕ್ಕೆ ಹೀರೋಯಿನ್​ಗೆ ಟಾರ್ಚರ್! ಕಾರಣ ಇದೇ ನೋಡಿ..
ಪ್ರೇಮ್ ನಗರದ ನಿವಾಸಿ ಫತೇ ಮೊಹಮ್ಮದ್ (42) ತನ್ನ ಮಗಳನ್ನೇ ಹತ್ಯೆಗೈದಿರುವ ಆರೋಪಿಯಾಗಿದ್ದಾನೆ. ಘಟನೆಯ ನಂತರ ಶನಿವಾರ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
11ನೇ ತರಗತಿ ವಿದ್ಯಾರ್ಥಿನಿಯಾಗಿದ್ದ ತನ್ನ ಮಗಳು ಪರೀಕ್ಷೆಗೆ ಓದುತ್ತಿಲ್ಲ ಎಂಬ ಆಕ್ರೋಶದಿಂದ ಥಳಿಸಿ ಕೊಂದಿರುವುದಾಗಿ ಆರೋಪಿ ಫತೇ ಮೊಹಮ್ಮದ್ ಪೊಲೀಸರ ವಿಚಾರಣೆ ವೇಳೆ ತಪ್ಪೊಪ್ಪಿಕೊಂಡಿದ್ದಾನೆ.
17 ವರ್ಷ ವಯಸ್ಸಿನ ಮಗಳು ಪರೀಕ್ಷೆಗೆ ಸರಿಯಾಗಿ ತಯಾರಿ ನಡೆಸಿಲ್ಲ ಎಂಬ ಕಾರಣಕ್ಕೆ ಕೋಪಗೊಂಡಿದ್ದ ಮೊಹಮ್ಮದ್ ದೊಣ್ಣೆಯಿಂದ ಅಮಾನವೀಯವಾಗಿ ಥಳಿಸಿ ಹತ್ಯೆ ನಡೆಸಿರುವ ಬಗ್ಗೆ ಬಾಲಕಿಯ ಚಿಕ್ಕಪ್ಪ ಪೊಲೀಸರಿಗೆ ದೂರು ನೀಡಿದ್ದು, ಈ ದೂರಿನನ್ವಯ ಆರೋಪಿಯನ್ನು ಬಂಧಿಸಿರುವ ಪೊಲೀಸರು ಕೃತ್ಯಕ್ಕೆ ಬಳಸಿರುವ ಮಾರಕಾಸ್ತ್ರವನ್ನೂ ವಶಕ್ಕೆ ಪಡೆದುಕೊಂಡಿದ್ದಾರೆ.
ಮುಖಂಡರ ಬಂಧನಕ್ಕೆ ಬಂಗಾಳ ಸರ್ಕಾರ ಪ್ರತಿಕಾರ.. ಎನ್‌ಐಎ ಅಧಿಕಾರಿಗಳ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 3 =
Remember me
