ರಾಜಸ್ಥಾನ:ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆ ಮತ್ತು ಕಣ್ಣುಗಳನ್ನು ಕಿತ್ತುಕೊಳ್ಳಲಾಗುವುದು ಎಂದು ಕೇಂದ್ರ ಸಚಿವ ಗಜೇಂದ್ರ ಸಿಂಗ್ ಶೇಖಾವತ್ ನೇರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:ಮಜಾವಾದಿ ಸಿದ್ದರಾಮಯ್ಯ; ಬಿ.ಕೆ.ಹರಿಪ್ರಸಾದ್ ನಿಜವನ್ನೇ ಹೇಳಿದ್ದಾರೆ ಎಂದ ಬಿಜೆಪಿ ಎಂಎಲ್ಸಿ ಎನ್.ರವಿಕುಮಾರ್
ರಾಜಸ್ಥಾನದ ಬಾರ್ಮರ್‌ನಲ್ಲಿ ಬಿಜೆಪಿಯ ಪರಿವರ್ತನ ಸಂಕಲ್ಪ ಚುನಾವಣಾ ರ‍್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಜಲ ಶಕ್ತಿ ಸಚಿವ ಗಜೇಂದ್ರ ಸಿಂಗ್, “ನಮ್ಮ ಪೂರ್ವಜರು ತಮ್ಮ ಪ್ರಾಣದ ಹಂಗು ತೊರೆದು ಸಂರಕ್ಷಿಸಿದ ಸನಾತನ ಧರ್ಮವನ್ನು ಕೊನೆಗೊಳಿಸಲು ಕೆಲವರು ಪ್ರಯತ್ನಿಸುತ್ತಿದ್ದಾರೆ. ನಾವು ಇನ್ನು ಮುಂದೆ ಅವರನ್ನು ಸಹಿಸುವುದಿಲ್ಲ” ಎಂದು ಹೇಳಿದರು.
“ಹಾಗೆ ಮಾಡಿದರೆ ಸನಾತನ ಧರ್ಮದ ವಿರುದ್ಧ ಮಾತನಾಡುವವರ ನಾಲಿಗೆಯನ್ನು ಕಿತ್ತುಕೊಳ್ಳುತ್ತೇವೆ ಎಂದು ಹೇಳಲು ಬಯಸುತ್ತೇನೆ. ಸನಾತನ ಧರ್ಮದ ವಿರುದ್ಧ ಯಾರೇ ಮಾತನಾಡಲಿ ಅವರು ದೇಶದಲ್ಲಿ ತಮ್ಮ ರಾಜಕೀಯ ಶಕ್ತಿ ಮತ್ತು ಅಂತಸ್ತು ಸ್ಥಾಪಿಸಲು ಸಾಧ್ಯವಿಲ್ಲ” ಎಂದು ನೇರ ವಾಗ್ದಾಳಿ ನಡೆಸಿದರು.
ಇದನ್ನೂ ಓದಿ:ಗ್ರಾ.ಪಂ.ಗಳಿಗೆ ಪ್ರಶಸ್ತಿ ಪ್ರಧಾನ
ಸನಾತನ ಧರ್ಮ ವಿವಾದಕ್ಕೆ ಕಾರಣವೇನು?:ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರ ಪುತ್ರ ಉದಯನಿಧಿ ಸ್ಟಾಲಿನ್, ಸನಾತನ ಧರ್ಮವು ಸಮಾನತೆ ಮತ್ತು ಸಾಮಾಜಿಕ ನ್ಯಾಯಕ್ಕೆ ವಿರುದ್ಧವಾಗಿದೆ. ಕೊರೊನಾ, ಮಲೇರಿಯಾ ವೈರಸ್​ಗಳನ್ನು ನಿರ್ಮೂಲನೆ ಮಾಡಿದಂತೆ ಇದನ್ನು ಕೂಡ ನಿರ್ಮೂಲನೆ ಮಾಡಬೇಕು ಎಂದು ಹೇಳಿದ್ದರು. ಈ ಹೇಳಿಕೆಗೆ ದೇಶವ್ಯಾಪಿ ಭಾರೀ ವಿರೋಧ ಮತ್ತು ಆಕ್ರೋಶ ವ್ಯಕ್ತವಾಯಿತು,(ಏಜೆನ್ಸೀಸ್)
‘ಪುಷ್ಪ 2’ VS ‘ಸಿಂಗಂ ಅಗೈನ್’​; ಒಂದೇ ದಿನ ರಿಲೀಸ್​ ಆಗಲಿದೆ ಇಬ್ಬರು ಸ್ಟಾರ್​ ನಟರ ಸಿನಿಮಾ!

ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
Sign in to your account
Please enter an answer in digits:3 + 1 =
Remember me
