ಜೈಪುರ:ತೆರಳಿ ಅತ್ಯಾಚಾರ ಪ್ರಕರಣದ ಆರೋಪಿಯಾಗಿರುವ ರಾಜಸ್ಥಾನದ ಸಚಿವ ಮಹೇಶ್​ ಜೋಶಿ ಅವರ ಪುತ್ರನನ್ನು ಬಂಧಿಸಲು ದೆಹಲಿ ಪೊಲೀಸರ ತಂಡ ಭಾನುವಾರ ಜೈಪುರಕ್ಕೆ ಬಂದಿಳಿದಿದೆ.
ಯುವತಿ ಮೇಲೆ ಅತ್ಯಾಚಾರವೆಸಗಿದ ಆರೋಪದ ಮೇಲೆ ಪ್ರಕರಣ ದಾಖಲಿಸಿಕೊಂಡಿದ್ದ ಪೊಲೀಸರು ಆರೋಪಿಯನ್ನು ಸೆರೆ ಹಿಡಿಯಲು ರಾಜಸ್ಥಾನಕ್ಕೆ ಪ್ರಯಾಣ ಬೆಳೆಸಿದ್ದರು. ಭಾನುವಾರ ಮುಂಜಾನೆ ಸಚಿವರ ನಿವಾಸಕ್ಕೆ ತೆರಳಿ ಹುಡುಕಾಟ ನಡೆಸಿದ್ದಾರೆ. ಅಲ್ಲಿಂದಲೂ ರೋಹಿತ್​ ಜೋಶಿ ಪರಾರಿಯಾಗಿದ್ದಾನೆ.
23 ವರ್ಷದ ಯುವತಿಯು ಸಚಿವರ ಪುತ್ರ ತನ್ನ ಮೇಲೆ ಹಲವು ಬಾರಿ ಅತ್ಯಾಚಾರವೆಸಗಿದ್ದಾನೆ. ಮದುವೆಯಾಗುವುದಾಗಿ ನಂಬಿಸಿ, ಕಳೆದ ವರ್ಷ ಜನವರಿ 8 ರಿಂದ ಈ ವರ್ಷದ ಏಪ್ರಿಲ್​ 17ರವರೆಗೆ ತನ್ನ ಮೇಲೆ ಅತ್ಯಾಚಾರವೆಸಗಿದ್ದಾನೆ. ಅವನ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಸದರ್​ಬಜಾರ್​ ಠಾಣೆಯಲ್ಲಿ ದೂರು ನೀಡಿದ್ದಳು.
ಫೇಸ್​ಬುಕ್​ನಿಂದ ನಮ್ಮಿಬ್ಬರ ಪರಿಚಯವಾಯಿತು. ನಂತರ ನಿರಂತರ ಸಂಪರ್ಕದಲ್ಲಿದ್ದೆವು, ನಮ್ಮ ಸ್ನೇಹ ಪ್ರೀತಿಗೆ ತಿರುಗಿತು, ಮದುವೆಯಾಗುವುದಾಗಿ ನಂಬಿಸಿ ನಿರಂತರ ಅತ್ಯಾಚಾರವೆಸಗಿದ್ದಾನೆ ಎಂದು ಕೂಡ ಯುವತಿ ಹೇಳಿದ್ದಾಳೆ.ಇನ್ನು ಅವರ ತಂದೆ ಕೂಡ ತನಗೆ ಬ್ಲಾಕ್​ಮೇಲ್​ ಮಾಡುತ್ತಿದ್ದಾರೆ ಎಂದು ಸಚಿವರ ವಿರುದ್ಧವೂ ಯುವತಿ ಆರೋಪಿಸಿದ್ದಾಳೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 − one =
Remember me
