ನವದೆಹಲಿ:ರಾಜಸ್ಥಾನ ರಾಜಕೀಯ ಬಿಕ್ಕಟ್ಟಿಗೆ ಸಂಬಂಧಿಸಿದಂತೆ ಹೈಕೋರ್ಟ್‌ ಆದೇಶದ ವಿರುದ್ಧ ಸುಪ್ರೀಂಕೋರ್ಟ್‌ ಮೊರೆ ಹೋಗಿದ್ದ ಸ್ಪೀಕರ್‌ ಸಿ.ಪಿ. ಜೋಶಿ ಅವರು ತಾವು ಸಲ್ಲಿಸಿರುವ ಈ ಅರ್ಜಿಯನ್ನು ಹಿಂದಕ್ಕೆ ಪಡೆದಿದ್ದಾರೆ.
ರಾಜಸ್ಥಾನದ ಸದ್ಯದ ರಾಜಕೀಯ ಪರಿಸ್ಥಿತಿ ಹೇಗಿದೆಯೋ ಹಾಗೆಯೇ ಯಥಾಸ್ಥಿತಿ ಮುಂದುವರೆಯಲಿ ಎಂದು ಹೈಕೋರ್ಟ್‌ ಆದೇಶ ನೀಡಿರುವ ಹಿನ್ನೆಲೆಯಲ್ಲಿ, ತಾವು ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯನ್ನು ಹಿಂದಕ್ಕೆ ಪಡೆಯುವುದಾಗಿ ಜೋಶೀ ಹೇಳಿದ್ದಾರೆ.
ಹೈಕೋರ್ಟ್‌ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಏನೇ ಆದೇಶ ಹೊರಡಿಸಿದರೂ, ಅದು ತಾನು ನೀಡುವ ಅಂತಿಮ ತೀರ್ಪಿಗೆ ಬದ್ಧವಾಗಿರುತ್ತದೆ ಎಂದು ಈ ಹಿಂದೆ ಸುಪ್ರೀಂಕೋರ್ಟ್‌ ಹೇಳಿತ್ತು. ಆದರೆ ಇದೀಗ ಈ ಅರ್ಜಿಯನ್ನು ಹಿಂದಕ್ಕೆ ತೆಗೆದುಕೊಳ್ಳಲು ಸುಪ್ರೀಂಕೋರ್ಟ್‌ ಅನುಮತಿ ನೀಡಿದೆ.
ಇದನ್ನೂ ಓದಿ:ಇನ್ಮುಂದೆ ಲಾಕ್​ಡೌನ್​ ಬಗ್ಗೆ ಚರ್ಚಿಸುವುದೇ ಇಲ್ಲ: ಸಿಎಂ ಬಿ.ಎಸ್​.ಯಡಿಯೂರಪ್ಪ
ಸ್ಪೀಕರ್‌ ಪರವಾಗಿ ವಾದ ಮಂಡಿಸಿದ ವಕೀಲ ಕಪೀಲ್‌ ಸಿಬಲ್ ಅವರು, ‘ಅನರ್ಹತೆ ವಿಚಾರಣೆಯನ್ನು ಸ್ಪೀಕರ್‌ ಶುಕ್ರವಾರದವರೆಗೆ (ಜುಲೈ24) ಮುಂದೂಡಬೇಕು ಎಂದು ಕಳೆದ ಮಂಗಳವಾರ (ಜುಲೈ 21) ರಾಜಸ್ಥಾನ ಹೈಕೋರ್ಟ್ ಆದೇಶ ನೀಡಿತ್ತು.
ಹೈಕೋರ್ಟ್‌ ಈ ವಿಚಾರದಲ್ಲಿ ಯಾವುದೇ ಆದೇಶ ನೀಡಬಾರದು ಎಂದು ಕೋರಿದ್ದ ಸ್ಪೀಕರ್‌ ಅರ್ಜಿಯನ್ನು ಸುಪ್ರೀಂಕೋರ್ಟ್‌ ಮಾನ್ಯ ಮಾಡಲಿಲ್ಲ. ಆದರೆ ಇದಾಗಲೇ ಹೈಕೋರ್ಟ್‌ ಯಥಾಸ್ಥಿತಿಗೆ ಆದೇಶ ಹೊರಡಿಸಿರುವ ಹಿನ್ನೆಲೆಯಲ್ಲಿ, ಸುಪ್ರೀಂ ಕೋರ್ಟ್‌ನಲ್ಲಿರುವ ಈ ಮೇಲ್ಮನವಿಯನ್ನು ಹಿಂದಕ್ಕೆ ಪಡೆಯುವುದಾಗಿ ಹೇಳಿದರು. ಕೋರ್ಟ್‌ ಅದಕ್ಕೆ ಅನುಮತಿ ನೀಡಿತು.(ಏಜೆನ್ಸೀಸ್‌)
ಮತ್ತೆ ಬ್ಯಾನ್‌ ಆಯ್ತು 47 ಆ್ಯಪ್‌: ಸುಸ್ತಾದ ಚೀನಾ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:3 × two =
Remember me
