ಜೈಪುರ:ರಾಜಸ್ಥಾನದ ಪ್ರತಾಪ್‌ಗಢ ಜಿಲ್ಲೆ ಸಮೀಪದ ಹಳ್ಳಿಯೊಂದರಲ್ಲಿ ಬುಡಕಟ್ಟು ಮಹಿಳೆಯನ್ನು ಆಕೆಯ ಪತಿ ಬೆತ್ತಲೆಯಾಗಿ ಮೆರವಣಿಗೆ ಮಾಡಿದ್ದು, ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗುತ್ತಿದೆ. ಈ ಸಂಬಂಧ ತಕ್ಷಣ ಕ್ರಮ ಕೈಗೊಂಡ ಪೊಲೀಸರು ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ಆರೋಪಿಗಳನ್ನು ಬೆನ್ನಟ್ಟಲು ಆರಂಭಿಸಿದ ಕೂಡಲೇ ಓಡಲು ಆರಂಭಿಸಿದ್ದು, ಈ ವೇಳೆ ಗಾಯಗೊಂಡಿದ್ದಾರೆ. ಸದ್ಯ ಆರೋಪಿಗಳು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಬಲವಾಗಿ ಖಂಡಿಸಿದ ಎನ್‌ಸಿಡಬ್ಲ್ಯೂರಾಷ್ಟ್ರೀಯ ಮಹಿಳಾ ಆಯೋಗವು (ಎನ್‌ಸಿಡಬ್ಲ್ಯೂ) ತನ್ನ ಎಕ್ಸ್ ಪೋಸ್ಟ್‌ನಲ್ಲಿ ರಾಜಸ್ಥಾನದ ಪ್ರತಾಪ್‌ಗಢದಲ್ಲಿ ನಡೆದ ಘಟನೆಯನ್ನು ಬಲವಾಗಿ ಖಂಡಿಸುತ್ತದೆ ಎಂದು ಬರೆದುಕೊಂಡಿದೆ. ಮಹಿಳೆಗೆ ಕಿರುಕುಳ ನೀಡಿ ವಿವಸ್ತ್ರಗೊಳಿಸಿ ವಿಡಿಯೋ ರೆಕಾರ್ಡ್ ಮಾಡಲಾಗಿದೆ. ಎರಡು ದಿನಗಳ ಹಿಂದೆ ಈ ಘಟನೆ ನಡೆದಿದ್ದರೂ ಪೊಲೀಸರ ನಿರ್ಲಕ್ಷ್ಯವನ್ನು ಒಪ್ಪಲಾಗದು. ತಪ್ಪಿತಸ್ಥರನ್ನು ಕೂಡಲೇ ಬಂಧಿಸಿ, ಅಗತ್ಯ ಐಪಿಸಿ ಸೆಕ್ಷನ್‌ಗಳನ್ನು ಜಾರಿಗೊಳಿಸುವಂತೆ ರಾಜ್ಯ ಡಿಜಿಪಿಗೆ ಸೂಚಿಸಲಾಗಿದೆ. 5 ದಿನಗಳಲ್ಲಿ ಸಮಗ್ರ ವರದಿ ನೀಡುವಂತೆ ನಾವು ಒತ್ತಾಯಿಸುತ್ತೇವೆ ಎಂದು ಎನ್‌ಸಿಡಬ್ಲ್ಯೂ ತಿಳಿಸಿದೆ.
https://twitter.com/ANI/status/1697817337423167946
ಪತಿ ಸೇರಿದಂತೆ ಇಬ್ಬರು ಆರೋಪಿಗಳ ಬಂಧನಸುದ್ದಿ ಸಂಸ್ಥೆ ಪಿಟಿಐ ಪ್ರಕಾರ, ವಿಷಯ ಬೆಳಕಿಗೆ ಬಂದ ತಕ್ಷಣ ರಾಜಸ್ಥಾನ ಪೊಲೀಸರು ಸಕ್ರಿಯರಾಗಿದ್ದಾರೆ ಮತ್ತು ಆರೋಪಿಗಳನ್ನು ಬಂಧಿಸಲು 6 ಪೊಲೀಸ್ ತಂಡಗಳನ್ನು ರಚಿಸಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್ಪಿ) ಅಮಿತ್ ಕುಮಾರ್ ಅವರು ಇದನ್ನು ಖಚಿತಪಡಿಸಿದ್ದು, ಸಂತ್ರಸ್ತ ಮಹಿಳೆಯ ಪತಿಯೊಂದಿಗೆ ಇತರ ಇಬ್ಬರು ಆರೋಪಿಗಳನ್ನು ಸಹ ಬಂಧಿಸಲಾಗಿದೆ ಎಂದು ಹೇಳಿದರು. ಪೊಲೀಸರನ್ನು ಕಂಡ ಆರೋಪಿಗಳು ಓಡಿಹೋಗಲು ಯತ್ನಿಸಿದ್ದು, ಈ ವೇಳೆ ಗಾಯಗೊಂಡಿದ್ದಾರೆ. ಪ್ರತಾಪಗಢದ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಚಿಕಿತ್ಸೆ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು.ಪೊಲೀಸ್ ಮಹಾನಿರ್ದೇಶಕ (ಡಿಜಿಪಿ) ಉಮೇಶ್ ಮಿಶ್ರಾ ಅವರ ಪ್ರಕಾರ, ಪ್ರತಾಪಗಢ ಜಿಲ್ಲೆಯ ಧರಿಯಾವಾಡ್ ಪೊಲೀಸ್ ಠಾಣೆ ವ್ಯಾಪ್ತಿಯ ಪಹರಾ ಗ್ರಾಮ ಪಂಚಾಯತ್‌ನ ನಿಚಲ್ಕೋಟಾ ಗ್ರಾಮದಲ್ಲಿ ಗುರುವಾರ ಈ ಘಟನೆ ನಡೆದಿದೆ. ಸಂತ್ರಸ್ತೆಗೆ ವರ್ಷದ ಹಿಂದೆ ಮದುವೆಯಾಗಿದ್ದು, ಗ್ರಾಮದಲ್ಲಿಯೇ ಮತ್ತೊಬ್ಬನ ಜತೆ ವಾಸ ಆರಂಭಿಸಿದ್ದಳು ಎನ್ನಲಾಗಿದೆ.
प्रतापगढ़ जिले में पीहर और ससुराल पक्ष के आपसी पारिवारिक विवाद में ससुराल पक्ष के लोगों द्वारा एक महिला को निर्वस्त्र करने का एक वीडियो सामने आया है।
पुलिस महानिदेशक को एडीजी क्राइम को मौके पर भेजने एवं इस मामले में कड़ी से कड़ी कार्रवाई के निर्देश दिए हैं।
सभ्य समाज में इस…
— Ashok Gehlot (@ashokgehlot51)September 1, 2023

ಪೋಸ್ಟ್ ಮಾಡಿದ ಅಶೋಕ್ ಗೆಹ್ಲೋಟ್ಘಟನೆಯ ಮಾಹಿತಿ ಪಡೆದು ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ ಅವರು ಟ್ವಿಟ್ಟರ್‌ನಲ್ಲಿ ಪೋಸ್ಟ್ ಮಾಡಿದ್ದಾರೆ, “ಪ್ರತಾಪ್‌ಗಢ ಜಿಲ್ಲೆಯಲ್ಲಿ ಅತ್ತೆ ಹಾಗೂ ಸೊಸೆ ನಡುವಿನ ಕೌಟುಂಬಿಕ ಕಲಹದಲ್ಲಿ ಸೊಸೆಯನ್ನು ವಿವಸ್ತ್ರಗೊಳಿಸಿರುವ ವಿಡಿಯೋ ಹೊರಬಿದ್ದಿದೆ. ಈ ಸಂಬಂಧ ಕ್ರೈಂ ಎಡಿಜಿ ಅವರನ್ನು ನೇಮಿಸಲಾಗಿದೆ. ಅವರನ್ನು ಸ್ಥಳಕ್ಕೆ ಕಳುಹಿಸಿ ಈ ವಿಷಯದಲ್ಲಿ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಇಂತಹ ಅಪರಾಧಿಗಳಿಗೆ ಸುಸಂಸ್ಕೃತ ಸಮಾಜದಲ್ಲಿ ಜಾಗವಿಲ್ಲ. ಈ ಅಪರಾಧಿಗಳನ್ನು ಆದಷ್ಟು ಬೇಗ ಕಂಬಿ ಹಿಂದೆ ಹಾಕಲಾಗುವುದು. ತ್ವರಿತ ನ್ಯಾಯಾಲಯದಲ್ಲಿ ಮೊಕದ್ದಮೆ ಹೂಡಿ ಶಿಕ್ಷೆ ವಿಧಿಸಲಾಗುವುದು ಎಂದು ತಿಳಿಸಿದ್ದಾರೆ.
ವಿಡಿಯೋವನ್ನು ಶೇರ್ ಮಾಡಬೇಡಿಗರ್ಭಿಣಿ ಮಹಿಳೆಯನ್ನು ಜನರ ಮುಂದೆಯೇ ವಿವಸ್ತ್ರಗೊಳಿಸಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದ್ದರೂ ಆಡಳಿತ ಮಂಡಳಿಗೆ ಇದರ ಅರಿವಿಲ್ಲ ಎಂದು ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೇ ಕೂಡ ಆರೋಪಿಸಿದ್ದಾರೆ. ಈ ವಿಡಿಯೋವನ್ನು ಶೇರ್ ಮಾಡಬೇಡಿ ಎಂದು ಜನರಿಗೆ ಮನವಿ ಮಾಡಿದ ಅವರು, ಈ ಘಟನೆ ರಾಜಸ್ಥಾನಕ್ಕೆ ನಾಚಿಕೆಗೇಡಿನ ಸಂಗತಿಯಾಗಿದೆ ಎಂದು ಬೇಸರ ವ್ಯಕ್ತಪಡಿಸಿದ್ದಾರೆ.
ಅಕ್ರಮ ಹಣ ವರ್ಗಾವಣೆ ಆರೋಪ: ಜೆಟ್​ ಏರ್​ವೇಸ್ ಸಂಸ್ಥಾಪಕ ನರೇಶ್​ ಗೋಯಲ್​​ ಬಂಧನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two × 5 =
Remember me
