ಬೆಂಗಳೂರು:ಸೂಪರ್ ಸ್ಟಾರ್ ರಜನಿಕಾಂತ್ ಪುತ್ರಿ ಐಶ್ವರ್ಯ ರಜನಿಕಾಂತ್ ನಿರ್ದೇಶನದಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ಸಿನಿಮಾ ‘ಲಾಲ್ ಸಲಾಂ’. ಈ ಚಿತ್ರದಲ್ಲಿ ರಜನಿಕಾಂತ್ ಪ್ರಮುಖ ಪಾತ್ರವೊಂದರಲ್ಲಿ ನಟಿಸುತ್ತಿದ್ದಾರೆ. ಅವರ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆ ಆಗಿದ್ದು, ರಜನಿಯ ಹೊಸ ಅವತಾರ ನೋಡಿ ಫ್ಯಾನ್ಸ್​ ಫಿದಾ ಆಗಿದ್ದಾರೆ.
ಇದನ್ನೂ ಓದಿ:ಬಿ.ಎಲ್. ಸಂತೋಷ್ ವಿರುದ್ಧ ಸುಳ್ಳು ಸುದ್ದಿ ಸೃಷ್ಟಿಸಿದ್ದ ಯುವಕನ ಬಂಧನ
ಪುತ್ರಿ ಐಶ್ವರ್ಯ ನಿರ್ದೇಶನದ ‘ಲಾಲ್ ಸಲಾಂ’ ಚಿತ್ರದಲ್ಲಿ ಮೊಯಿದೀನ್ ಭಾಯ್ ಎಂಬ ಪಾತ್ರದಲ್ಲಿ ರಜನಿಕಾಂತ್ ಅಭಿನಯಿಸುತ್ತಿದ್ದಾರೆ. ಶೇರ್ವಾನಿ ಧರಿಸಿ ಸನ್‌ಗ್ಲಾಸ್ ತೊಟ್ಟು, ತಲೆಗೆ ಟೋಪಿ ಹಾಕಿಕೊಂಡಿರುವ ಸೂಪರ್ ಸ್ಟಾರ್ ಗೆಟಪ್ ಅಭಿಮಾನಿಗಳ ಮತ್ತು ಸಿನಿಪ್ರಿಯರ ಗಮನಸೆಳೆಯುತ್ತಿದೆ.
ಇದನ್ನೂ ಓದಿ:ಬೆರಳ ತುದಿಯಲ್ಲೇ ಇದೆ ಬದಲಿಸುವ ಶಕ್ತಿ; ಚುನಾವಣೆ ಸುಧಾರಣೆಗೆ ಆಗಲಿ ಬದಲಾವಣೆ..
ವಿಷ್ಣು ವಿಶಾಲ್ ಮತ್ತು ವಿಕ್ರಾಂತ್ ಈ ಚಿತ್ರದ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿದ್ದು, ಜೀವಿತಾ ರಾಜಶೇಖರ್ ನಾಯಕಿಯಾಗಿ ಅಭಿನಯಿಸುತ್ತಿದ್ದಾರೆ. ಎ.ಆರ್.ರೆಹಮಾನ್ ಸಂಗೀತ, ವಿಷ್ಣು ರಂಗಸ್ವಾಮಿ ಛಾಯಾಗ್ರಹಣ ಈ ಚಿತ್ರಕ್ಕಿದೆ. ‘ಲಾಲ್ ಸಲಾಂ’ ಸ್ಪೋರ್ಟ್ಸ್ ಡ್ರಾಮಾ ಸಿನಿಮಾ ಆಗಿದ್ದು ಕ್ರಿಕೆಟ್ ಹಿನ್ನೆಲೆಯಲ್ಲಿ ಕಥೆ ಸಾಗಲಿದೆ.
ಇದನ್ನೂ ಓದಿ:ಸ್ಲೀಪ್ ಡೈವೋರ್ಸ್: ಇದು ಗಂಡ-ಹೆಂಡಿರ ಹೊಸ ಟ್ರೆಂಡ್!
ಇಂಡಿಯನ್, ಕೈದಿ ನಂಬರ್-150, 2.0, ದರ್ಬಾರ್, ಪೊನ್ನಿಯಿನ್ ಸೆಲ್ವನ್ ಸರಣಿ ಸಿನಿಮಾ ನಿರ್ಮಿಸಿರುವ ಖ್ಯಾತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ ಹೌಸ್ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದೆ. ಸದ್ಯ ಮುಂಬೈನಲ್ಲಿ ಶೂಟಿಂಗ್ ಭರದಿಂದ ಸಾಗುತ್ತಿದೆ.

ಎಲೆಕ್ಟ್ರಿಕ್ ದ್ವಿಚಕ್ರವಾಹನಗಳ ಬೆಲೆಯಲ್ಲಿ ಭಾರಿ ಇಳಿಕೆ; ಕಾರಣ ಇದು..
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:one × 5 =
Remember me
