‘ತಲೈವರ್​ 170’ ಸಿನಿಮಾದ ಪ್ರಥಮ ಲುಕ್​ ಬಹಿರಂಗವಾಗಿದೆ. ಬ್ಲಾಕ್​ ಆ್ಯಂಡ್​ ವೈಟ್​ ಥೀಮ್​ನಲ್ಲಿ ಈ ಪೋಸ್ಟರ್​ ವಿನ್ಯಾಸಗೊಂಡಿದೆ.ರಜನಿ ಅಭಿನಯದ 170ನೇ ಸಿನಿಮಾ ಇದಾಗಿದ್ದು, ಫಸ್ಟ್​ ಲುಕ್​ ಪೋಸ್ಟರ್​ ಅನ್ನು ಚಿತ್ರ ನಿರ್ಮಿಸುತ್ತಿರುವ ಲೈಕಾ ಪ್ರೊಡಕ್ಷನ್ಸ್​ ತನ್ನ ಅಧಿಕೃತ ಎಕ್ಸ್​(x) ಪೇಜ್​ನಲ್ಲಿ ಬಿಡುಗಡೆ ಮಾಡಲಾಗಿದೆ. ಇದನ್ನು ಕಂಡು ಅಭಿಮಾನಿಗಳು ಸಂತಸಪಟ್ಟಿದ್ದಾರೆ. ಇನ್ನೂ ಹೆಸರಿಡದ ಈ ಚಿತ್ರವನ್ನು ಸದ್ಯಕ್ಕೆ ‘ತಲೈವರ್​ 170’ (Thalaivar 170) ಎಂದು ಕರೆಯಲಾಗುತ್ತಿದೆ. ಅಮಿತಾಭ್​ ಬಚ್ಚನ್​ ಸಹ ಈ ಸಿನಿಮಾದಲ್ಲಿ ನಟಿಸುತ್ತಿದ್ದಾರೆ ಎಂಬುದು ವಿಶೇಷ.
ಇದನ್ನೂ ಓದಿ:ಬರಿಗಾಲಲ್ಲಿ ನಡೆದು ಬಂದು ದೇವರ ದರ್ಶನ ಪಡೆದ ರಾಮ್ ಚರಣ್; ಕಾರಣವೇನು ಗೊತ್ತಾ?
ಲೈಕಾ ಪ್ರೊಡಕ್ಷನ್ಸ್​ ಸಂಸ್ಥೆ ಮೂಲಕ ‘ತಲೈವರ್​ 170’ ಸಿನಿಮಾ ಮೂಡಿಬರುತ್ತಿದೆ. ‘ಜೈ ಭೀಮ್​’ ಸಿನಿಮಾ ಖ್ಯಾತಿಯ ಟಿಜೆ ಜ್ಞಾನವೇಲ್​ ನಿರ್ದೇಶನ ಮಾಡುತ್ತಿದ್ದಾರೆ. ಪಾತ್ರವರ್ಗದ ಕಾರಣದಿಂದ ಈ ಸಿನಿಮಾ ಗಮನ ಸೆಳೆಯುತ್ತಿದೆ. ರಜನಿಕಾಂತ್​ ಮತ್ತು ಅಮಿತಾಭ್​ ಬಚ್ಚನ್​ ಮಾತ್ರವಲ್ಲದೇ ರಾಣಾ ದಗ್ಗುಬಾಟಿ, ಫಹಾದ್ ಪಾಸಿಲ್​, ಮಂಜು ವಾರಿಯರ್​ ಮುಂತಾದವರು ನಟಿಸುತ್ತಿದ್ದಾರೆ. ಅದ್ದೂರಿ ಬಜೆಟ್​ನಲ್ಲಿ ಈ ಸಿನಿಮಾ ನಿರ್ಮಾಣ ಆಗಲಿದೆ. ಈಗ ಎಲ್ಲ ಕಲಾವಿದರ ಪೋಸ್ಟರ್​ಗಳು ಫಸ್ಟ್​ ಲುಕ್​ನಲ್ಲಿ ರಾರಾಜಿಸುತ್ತಿವೆ.
ಆನ್‌ಲೈನ್ ಬೆಟ್ಟಿಂಗ್ ಆ್ಯಪ್‌ ಪ್ರಕರಣ; ನಟ ರಣಬೀರ್ ಕಪೂರ್‌ಗೆ ಇಡಿ ಸಮನ್ಸ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:18 − two =
Remember me
