ವಾರಣಾಸಿ:ಭಾರತ ಮಾಜಿ ಹಾಕಿ ಆಟಗಾರ ಮೃತದೇಹ ನಿಗೂಢ ರೀತಿಯಲ್ಲಿ ಪತ್ತೆಯಾಗಿರುವ ಘಟನೆ ಉತ್ತರ ಪ್ರದೇಶದ ವಾರಣಾಸಿಯಲ್ಲಿ ನಡೆದಿದೆ.ಇದನ್ನೂ ಓದಿ:ಬಿಜೆಪಿ ರಾಜ್ಯಾಧ್ಯಕ್ಷ ಸ್ಥಾನಕ್ಕೆ ನಳಿನ್ ಕುಮಾರ್ ಕಟೀಲ್ ರಾಜೀನಾಮೆಮಿಲ್ಟನ್ ಕೇನ್ಸ್‌ನಲ್ಲಿ ನಡೆದ 1997 ರ ಜೂನಿಯರ್ ಹಾಕಿ ವಿಶ್ವಕಪ್‌ನ ಪ್ರಮುಖ ಸ್ಟ್ರೈಕರ್ ಆಗಿದ್ದ ರಾಜೀವ್​​ ಮಿಶ್ರಾ(46) ವಾರಣಾಸಿಯಲ್ಲಿ ಏಕಾಂಗಿಯಾಗಿ ವಾಸಿಸುತ್ತಿದ್ದು, ಶುಕ್ರವಾರ ಮುಂಜಾನೆ ಸ್ವ ಗೃಹದಲ್ಲಿ ಮೃತದೇಹ ಪತ್ತೆಯಾಗಿದೆ.ರೈಲ್ವೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ಮಿಶ್ರಾ ಕೆಲವು ದಿನಗಳ ಹಿಂದೆ ಮೃತಪಟ್ಟಿಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಮನೆಯಿಂದ ದುರ್ವಾಸನೆ ಬಂದ ನಂತರ ನೆರೆಹೊರೆಯವರು ಪೊಲೀಸರಿಗೆ ಮಾಹಿತಿ ನೀಡಿದ ವೇಳೆ ಈ ಘಟನೆ ಬೆಳಕಿಗೆ ಬಂದಿದೆ.ಇದನ್ನೂ ಓದಿ:ಒಂಟಿ ಮಹಿಳೆಯರಿಗೆ ಮಾದಕ ವಸ್ತು ನೀಡಿ ದರೋಡೆ; ಮೋಸ್ಟ್ ವಾಂಟೆಡ್ ಯುವತಿ ಸುಳಿವು ನೀಡಿದ್ರೆ 10 ಸಾವಿರ ರೂ.!ಭಾರತದ ಮಾಜಿ ನಾಯಕ ಮತ್ತು ಹಾಕಿ ಇಂಡಿಯಾ ಅಧ್ಯಕ್ಷ ದಿಲೀಪ್ ಟರ್ಕಿ ಇವರ ನಿಧನಕ್ಕೆ ತೀವ್ರ ಸಂತಾಪವನ್ನು ವ್ಯಕ್ತಪಡಿಸಿದ್ದು, ಮಿಶ್ರಾರೊಂದಿಗೆ ಹಾಕಿಯನ್ನು ಆಡಿದ್ದಾರೆ. 1997ರಲ್ಲಿ ಇಂಗ್ಲೆಂಡ್‌ನ ಮಿಲ್ಟನ್​ನಲ್ಲಿ ನಡೆದ ಜೂನಿಯರ್ ಹಾಕಿ ವಿಶ್ವಕಪ್‌ನಲ್ಲಿ ಅಗ್ರ ಗೋಲ್ ಸ್ಕೋರರ್‌ಗಳಲ್ಲಿ ಒಬ್ಬರಾಗಿದ್ದ ಮಿಶ್ರಾ ಒಂಬತ್ತು ಗೋಲುಗಳನ್ನು ಹೊಡೆದಿದ್ದರು.ಅಲ್ಲದೇ, ಇದೇ ವಿಶ್ವಕಪ್​ನಲ್ಲಿ ಬೆಳ್ಳಿ ಪದಕ ವಿಜೇತರಾಗಿದ್ದ ಮಿಶ್ರಾರನ್ನು, ‘1998ರ ವರ್ಷದ ಸ್ಪೋರ್ಟ್‌ಸ್ಟಾರ್ ಯುವ ಪ್ರತಿಭೆ’ ಎಂದು ಆಯ್ಕೆ ಮಾಡಲಾಗಿತ್ತು.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × 2 =
Remember me
