ನವದೆಹಲಿ:ಒಲಿಂಪಿಕ್​ ಚಿನ್ನದ ಪದಕ ವಿಜೇತ ವಿಜೇಂದರ್​ ಸಿಂಗ್​ ರಾಜಕೀಯ ತೊರೆಯುವುದಾಗಿ ಘೋಷಿಸಿದ್ದಾರೆ. 2019ರಲ್ಲಿ ವಿಜೇಂದರ್​ ಸಿಂಗ್​ ಕಾಂಗ್ರೆಸ್​ ಸೇರಿದ ಅವರ ಈ ದಿಢೀರ್​ ನಿರ್ಧಾರ ಹಲವರಲ್ಲಿ ಅಚ್ಚರಿ ಮೂಡಿಸಿದೆ.
ಇತ್ತೀಚಿಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಕಾಂಗ್ರೆಸ್​ ಸೋಲಿನ ಬೆನ್ನಲ್ಲೇ ಅವರು ರಾಜಕೀಯ ತೊರೆಯುತ್ತಿರುವುದಾಗಿ ಘೋಷಿಸಿರುವುದು ಬಿಸಿ ತುಪ್ಪವಾಗಿ ಪರಿಣಮಿಸಿದೆ. ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್​ನಲ್ಲಿ ಬರೆದುಕೊಂಡಿರುವ ವಿಜೇಂದರ್​ ರಾಜನೀತಿ ಕೋ ರಾಮ್ ರಾಮ್ ಭಾಯಿ ಎಂದು ಹೇಳುವ ಮೂಲಕ ರಾಜಕೀಯ ತೊರೆಯುತ್ತಿರುವುದಾಗಿ ತಿಳಿಸಿದ್ದಾರೆ.
ಕಳೆದ ಕೆಲ ತಿಂಗಳುಗಳಿಂದ ರಾಜಕೀಯದಿಂದ ದೂರ ಉಳಿದಿದ್ದ ವಿಜೇಂದರ್​ ಸಿಂಗ್​ ಕೊನೆಯದಾಗಿ ರಾಹುಲ್​ ಗಾಂಧಿ ನೇತೃತ್ವದಲ್ಲಿ ನಡೆದ ಭಾರತ್​ ಜೋಡೋ ಯಾತ್ರೆಯಲ್ಲಿ ಕಾಣಿಸಿಕೊಂಡಿದ್ದರು. ನವದೆಹಲಿಯಲ್ಲಿ ನಡೆದ ಕುಸ್ತಿಪಟುಗಳ ಪ್ರತಿಭಟನೆಯಲ್ಲಿ ವಿಜೇಂದರ್​ ಭಾಗಿಯಾಗಿ ಬಿಜೆಪಿ ಸಂಸದ ಬ್ರಿಜ್​​ ಭೂಷಣ್​ ವಿರುದ್ಧ ಹರಿಹಾಯ್ದಿದ್ದರು.
ಇದನ್ನೂ ಓದಿ:ಜೀಪ್​-ಲಾರಿ ನಡುವೆ ಭೀಕರ ಅಪಘಾತ; ನಾಲ್ವರು ಮೃತ್ಯು
ನನ್ನ 20 ವರ್ಷಗಳ ಬಾಕ್ಸಿಂಗ್​ ಕೆರಿಯರ್​ನಲ್ಲಿ ನಾನು ನನ್ನ ದೇಶವನ್ನು ಹೆಮ್ಮೆಪಡುವಂತ ಕೆಲಸ ಮಾಡಿದ್ದೇನೆ. ಈಗ ನನ್ನ ದೇಶವಾಸಿಗಳಿಗಾಗಿ ಏನನ್ನಾದರೂ ಮಾಡಲು ಮತ್ತು ಅವರ ಸೇವೆ ಮಾಡುವ ಸಮಯ ಬಂದಿದೆ. ನಾನು ಈ ಅವಕಾಶವನ್ನು ಸ್ವೀಕರಿಸಲು ಬಯಸುತ್ತೇನೆ ಎಂದು 2019ರಲ್ಲಿ ಕಾಂಗ್ರೆಸ್​ ಸೇರುವ ವೇಳೆ ಹೇಳಿದ್ದರು.
2019 ರ ಲೋಕಸಭೆ ಚುನಾವಣೆಯಲ್ಲಿ ದಕ್ಷಿಣ ದೆಹಲಿ ಲೋಕಸಭೆ ಕ್ಷೇತ್ರದಿಂದ ಕಾಂಗ್ರೆಸ್ ವಿಜೇಂದರ್ ಸಿಂಗ್ ಅವರನ್ನು ಕಣಕ್ಕಿಳಿಸಿತ್ತು. ಆದರೆ, ಬಾಕ್ಸರ್ ಚುನಾವಣೆಯಲ್ಲಿ ಬಿಜೆಪಿ ಅಭ್ಯರ್ಥಿ ಎದುರು ಸೋಲುಂಡಿದ್ದರು. ಲೋಕಸಭೆ ಚುನಾವಣೆಯ ಹೊಸ್ತಿಲಲ್ಲಿ ಅವರು ರಾಜಕೀಯಕ್ಕೆ ಗುಡ್​ಬೈ ಹೇಳಿರುವುದು ಕಾಂಗ್ರೆಸ್​ ಪಕ್ಷಕ್ಕೆ ದೊಡ್ಡ ತಲೆನೋವಾಗಿ ಪರಿಣಮಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
