ಜೈಪುರ:ರಾಷ್ಟ್ರೀಯ ರಜಪೂತ ಕರ್ಣಿ ಸೇನಾ ಅಧ್ಯಕ್ಷ ಸುಖದೇವ್​ ಸಿಂಗ್ ಗೊಗಮೆಡಿ ಅವರನ್ನು ಹಾಡಹಗಲೇ ದುಷ್ಕರ್ಮಿಗಳು ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆಗೆ ಸಂಬಂಧಿಸಿದಂತೆ ಇದು ತನ್ನ ಕೃತ್ಯ ಎಂದು ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಹೇಳಿಕೊಂಡಿದೆ.
ರಾಷ್ಟ್ರೀಯ ರಜಪೂತ ಕರ್ಣಿ ಸೇನಾದ ಮುಖ್ಯಸ್ಥನಾಗಿದ್ದ ಸುಖದೇವ್ ಮೇಲೆ ಸ್ಕೂಟರ್‌ನಲ್ಲಿ ಬಂದಿದ್ದ ಇಬ್ಬರು ದುಷ್ಕರ್ಮಿಗಳು ಗುಂಡು ಹಾರಿಸಿ ಪರಾರಿಯಾಗಿದ್ದಾರೆ. ಸುಖದೇವ್ ಸಿಂಗ್ ಮತ್ತು ಆತನ ಇಬ್ಬರು ಸಹವರ್ತಿಗಳಿಗೆ ಗುಂಡೇಟಿನಿಂದ ಗಾಯಗಳಾಗಿದ್ದವು. ಮೂವರನ್ನೂ ಆಸ್ಪತ್ರೆಯೊಂದಕ್ಕೆ ದಾಖಲಿಸಲಾಗಿತ್ತು. ಆದರೆ ಸುಖದೇವ್ ಮೃತಪಟ್ಟಿದ್ದಾನೆ ಎಂದು ವೈದ್ಯರು ಘೋಷಿಸಿದರು. ಗಾಯಾಳುಗಳಲ್ಲಿ ಒಬ್ಬನ ಸ್ಥಿತಿ ಗಂಭೀರವಾಗಿದೆ.
बहुत ही दुखद खबर 😢💔 बुरी खबर…श्री राष्ट्रीय राजपूत करणी सेना के प्रदेश अध्यक्ष सुखदेव सिंह गोगामेड़ी ने अस्पताल में तोड़ा दम..हमेशा दूसरों की सहायता करने वाले इंसान की इस तरीके से हत्या कभी सोचा नहीं था! 😢@jaipur_policeजल्दी से जल्दी इनके गुनहगारों का एनकाउंटर करिए या…pic.twitter.com/MYz3e1cc8e
ಇದನ್ನೂ ಓದಿ:26/11 ದಾಳಿ ಸಂಚುಕೋರ ಸಾಜಿದ್​ ಮೀರ್​ಗೆ ಜೈಲಲ್ಲೇ ವಿಷಪ್ರಾಶನ; ಸ್ಥಿತಿ ಗಂಭೀರ
ಸುಖದೇವ್ ಸಿಂಗ್ ಗೊಗಾಮೇದಿ ಕೊಲೆಗೆ ತಾನೇ ಹೊಣೆ ಎಂದು ಜೈಲಿನಲ್ಲಿರುವ ಗ್ಯಾಂಗ್‌ಸ್ಟರ್ ಲಾರೆನ್ಸ್ ಬಿಷ್ಣೋಯಿ ಗ್ಯಾಂಗ್ ಜತೆ ನಂಟು ಹೊಂದಿರುವ ರೋಹಿತ್ ಗೊಡಾರಾ ಫೇಸ್‌ಬುಕ್ ಪೋಸ್ಟ್‌ನಲ್ಲಿ ಹೇಳಿಕೊಂಡಿದ್ದಾನೆ. ರಾಜಸ್ಥಾನದ ನಟೋರಿಯಸ್ ಗ್ಯಾಂಗ್‌ಸ್ಟರ್ ಆಗಿರುವ ರೋಹಿತ್, ಭಾರತದಿಂದ ತಲೆಮರೆಸಿಕೊಂಡಿದ್ದಾನೆ. ಆತನ ವಿರುದ್ಧ ಎನ್‌ಐಎ ಕೂಡ ಕ್ರಮ ಕೈಗೊಂಡಿತ್ತು.
ಸುಖದೇವ್ ಸಿಂಗ್ ಗೊಗಮೇಡಿ ಅವರು ರಾಷ್ಟ್ರೀಯ ಕರ್ಣಿ ಸೇನೆಯೊಂದಿಗೆ ಬಹಳ ಹಿಂದಿನಿಂದಲೂ ಸಂಬಂಧ ಹೊಂದಿದ್ದಾರೆ. ನಂತರ ಇವರೇ ಈ ಸಂಘಟನೆಯಿಂದ ದೂರವಾಗಿ ಪ್ರತ್ಯೇಕ ರಾಷ್ಟ್ರೀಯ ರಜಪೂತ ಕರ್ಣಿ ಸೇನೆಯನ್ನು ಕಟ್ಟಿದ್ದಾರೆ. ಪದ್ಮಾವತ್ ಸಿನಿಮಾ ಮತ್ತು ಗ್ಯಾಂಗ್‌ಸ್ಟರ್ ಆನಂದ್‌ಪಾಲ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಾಗ್ಗೆ ಇವರ ಹೆಸರು ಕೇಳಿ ಬರುತ್ತಿತ್ತು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × three =
Remember me
