ನವದೆಹಲಿ:ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕೆ ಸಚಿವ ಪಿಯೂಷ್ ಗೋಯಲ್ ಅವರನ್ನು ರಾಜ್ಯಸಭಾ ನಾಯಕರನ್ನಾಗಿ ಮರು ನೇಮಕ ಮಾಡಲಾಗಿದೆ. ಈ ಸಂಬಂಧ ರಾಜ್ಯಸಭಾ ಸಭಾಪತಿ ಎಂ. ವೆಂಕಯ್ಯ ನಾಯ್ಡು ಅವರು ಮಾಹಿತಿ ನೀಡಿದರು.
2021ರಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಪಿಯೂಷ್​ ಗೋಯಲ್ ಅವರನ್ನು ರಾಜ್ಯಸಭೆಯ ನಾಯಕರನ್ನಾಗಿ ನೇಮಿಸಿದ್ದರು. ಬಳಿಕ ಗೋಯಲ್​​ ಅವರ ರಾಜ್ಯಸಭಾ ಸದಸ್ಯತ್ವದ ಅವಧಿ ಇದೇ ಏಪ್ರಿಲ್​ನಲ್ಲಿ ಕೊನೆಗೊಂಡಿತ್ತು. ಇದರಿಂದ ಸದನದ ನಾಯಕ ಸ್ಥಾನವೂ ಖಾಲಿಯಾಗಿತ್ತು.
ಕಳೆದ ಎರಡು ವರ್ಷಗಳಲ್ಲಿ ರಾಜ್ಯಸಭೆಯಲ್ಲಿ ಮಹತ್ವದ ಮಸೂದೆಗಳನ್ನು ಅಂಗೀಕರಿಸುವಾಗ ಕಾಂಗ್ರೆಸ್ ಜತೆ ಮೈತ್ರಿ ಮಾಡಿಕೊಳ್ಳದ ಬಿಜೆಡಿ, ಎಐಎಡಿಎಂಕೆಯಂತಹ ಪಕ್ಷಗಳ ಬೆಂಬಲ ಪಡೆದುಕೊಳ್ಳುವಲ್ಲಿ ಗೋಯಲ್ ಅವರು ಪ್ರಮುಖ ಪಾತ್ರ ವಹಿಸಿದ್ದರು.
ಜುಲೈ 8 ರಂದು ನಡೆದ ರಾಜ್ಯಸಭಾ ಚುನಾವಣೆಯಲ್ಲಿ ಪಿಯೂಷ್​ ಗೋಯಲ್​ ಅವರು ಮಹಾರಾಷ್ಟ್ರದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಪ್ರಮಾಣ ವಚನ ಸ್ವೀಕರಿಸಿದರು. ಹೀಗಾಗಿ ಅವರನ್ನು ಸದನದ ನಾಯಕರನ್ನಾಗಿ ಮರು ನೇಮಕಗೊಳಿಸಲಾಗಿದೆ.
ಮಾಜಿ ವಿಶ್ವ ಸುಂದರಿ ಜತೆ ಡೇಟಿಂಗ್; ಮುಂದೊಂದು ದಿನ ಮದುವೆ ಎಂದ ಲಲಿತ್ ಮೋದಿ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + three =
Remember me
