ನವದೆಹಲಿ:ಆಮ್ ಆದ್ಮಿ ಪಕ್ಷವು ಹಿರಿಯ ನಾಯಕ ಮತ್ತು ರಾಜ್ಯಸಭಾ ಸದಸ್ಯ ಸಂಜಯ್ ಸಿಂಗ್ ಅವರನ್ನು ಎಎಪಿ ಸಂಸದೀಯ ಪಕ್ಷದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಲ್ಲದೆ ರಾಜ್ಯಸಭೆಯಲ್ಲಿ ಪಕ್ಷದ ನಾಯಕರನ್ನಾಗಿ ಅವರನ್ನೇ ಆಯ್ಕೆ ಮಾಡಲಾಗಿದೆ.
ಇದನ್ನೂ ಓದಿ:ಕೆ. ಕವಿತಾ ನ್ಯಾಯಾಂಗ ಬಂಧನ ಅವಧಿ ಜುಲೈ 18ರವರೆಗೆ ವಿಸ್ತರಣೆ
ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಎಎಪಿ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಜೈಲಿನಲ್ಲಿರುವುದರಿಂದ ಸಂಜಯ್ ಸಿಂಗ್ ಅವರಿಗೆ ಪಕ್ಷದ ಜವಾಬ್ದಾರಿ ನೀಡಲಾಗಿದೆ ಎನ್ನಲಾಗಿದೆ.
” ರಸ್ತೆಯಿಂದ ಹಿಡಿದು ಸಂಸತ್ತಿನವರೆಗೆ ಧ್ವನಿ ಎತ್ತಲು ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್ ಅವರು ನನಗೆ ಯಾವಾಗಲೂ ಅವಕಾಶವನ್ನು ನೀಡಿದ್ದಾರೆ. ಸಂಸದೀಯ ಪಕ್ಷದ ಮುಖ್ಯಸ್ಥನಾಗಿ ಸಮರ್ಪಣಾ ಭಾವದಿಂದ ನನ್ನ ಜವಾಬ್ದಾರಿಯನ್ನು ನಿರ್ವಹಿಸುತ್ತೇನೆ. ಅರವಿಂದ್ ಕೇಜ್ರಿವಾಲ್ ಮತ್ತು ಆಮ್ ಆದ್ಮಿ ಪಕ್ಷಕ್ಕೆ ನಾನು ತುಂಬಾ ಕೃತಜ್ಞನಾಗಿದ್ದೇನೆ ಎಂದು ಸಂಸದ ಸಂಜಯ್ ಅವರು ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ರಾಜ್ಯಸಭೆಯಲ್ಲಿ 10 ಸಂಸದರನ್ನು ಹೊಂದಿರುವ ಎಎಪಿ ನಾಲ್ಕನೇ ಅತಿದೊಡ್ಡ ಪಕ್ಷವಾಗಿದೆ. ಲೋಕಸಭೆಯಲ್ಲಿ ಮೂವರು ಸಂಸದರನ್ನು ಹೊಂದಿದೆ ಎಂದು ಪಕ್ಷ ಹೇಳಿದೆ.
ರಾಜ್ಯ ಬಿಜೆಪಿಗೆ ಉಸ್ತುವಾರಿ, ಸಹ ಉಸ್ತುವಾರಿ ನೇಮಕ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − one =
Remember me
