ಮುಂಬೈ:ಸದಾ ಒಂದಿಲ್ಲೊಂದು ಗೊಂದಲದ ವಿಚಾರವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಸಖತ್​ ಸೌಂಡ್​ ಮಾಡುವ ಬಾಲಿವುಡ್​ನ ಡ್ರಾಮಾ ಕ್ವೀನ್​ ರಾಖಿ ಸಾವಂತ್​ ತೀವ್ರ ಅನಾರೋಗ್ಯದಿಂದ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಖಿ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಮಾಜಿ ಪ್ರಿಯಕರ ಆದಿಲ್, ಆಕೆ ಡ್ರಾಮಾ ಮಾಡುತ್ತಿದ್ದಾಳೆ. ಇದಕ್ಕೆಲ್ಲಾ ತಲೆಕೆಡಿಸಿಕೊಳ್ಳಬೇಡಿ ಎಂದು ಹೇಳಿದ್ದಾರೆ
ಈ ಕುರಿತು ಮಾತನಾಡಿದ ಆದಿಲ್, ಬಂಧನದ ಭೀತಿಯಿಂದ ಆಕೆ ಈ ರೀತಿ ನಾಟಕ ಮಾಡುತ್ತಿದ್ದಾಳೆ. ಜೈಲಿಗೆ ಹೋಗುವುದನ್ನು ತಪ್ಪಿಸಲು ಆಸ್ಪತ್ರೆಯಲ್ಲಿ ಮಲಗಿದ್ದಾಳೆ. ಆಕೆ ಗಾಢ ನಿದ್ರೆ ಮಾಡುತ್ತಿರುವುದು ಸ್ಪಷ್ಟವಾಗಿ ಕಾಣುತ್ತದೆ ಎಂದು ಆರೋಪಿಸಿದ್ದಾರೆ.
ತೀವ್ರ ಎದೆ ನೋವು ಕಾಣಿಸಿಕೊಂಡ ಪರಿಣಾಮ ಕೆಲ ದಿನಗಳ ಹೊಂದೆ ರಾಖಿ ಸಾವಂತ್​ ಆಸ್ಪತ್ರೆಗೆ ದಾಖಲಾಗಿದ್ದರು. ಆಕೆ ಆಸ್ಪತ್ರೆಯ ಬೆಡ್ ಮೇಲೆ ಪ್ರಜ್ಞಾಹೀನ ಸ್ಥಿತಿಯಲ್ಲಿ ಮಲಗಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಆದರೆ, ಆಕೆಯ ಆರೋಗ್ಯದ ಕುರಿತು ವೈದ್ಯರು ಅಥವಾ ಕುಟುಂಬ ಸದಸ್ಯರು ಯಾವುದೇ ಮಾಹಿತಿ ನೀಡಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 4 =
Remember me
