ಮುಂಬೈ:ಬಾಲಿವುಡ್​​ ನಟಿ ರಾಖಿ ಸಾವಂತ್‌ ಅವರು ಸಿನಿಮಾಗಿಂತ ಕಾಂಟ್ರವರ್ಸಿ ಮೂಲಕ ಹೆಚ್ಚು ಖ್ಯಾತಿ ಪಡೆದಿದ್ದಾರೆ. ರಾಖಿ ಸಾವಂತ್ ಇತ್ತೀಚೆಗೆ ದಿನಕ್ಕೊಂದು ಹೊಸ ಸುದ್ದಿ ಮೂಲಕ ಪ್ರಚಾರ ಪಡೆದುಕೊಳ್ಳುವ ಪ್ರಯತ್ನ ನಡೆಸುವುದು ಗೊತ್ತಿರುವ ವಿಚಾರವೇ. ಆದರೆ ಇದೀಗ ನಟ, ನಿರ್ದೇಶಕ ರಿಷಬ್​​ ಶೆಟ್ಟಿ ಅವರ ಕುರಿತಾಗಿ ಮಾತನಾಡುವ ಮೂಲಕವಾಗಿ ಸುದ್ದಿಯಾಗಿದ್ದಾರೆ.
ತಮ್ಮ ಜೀವನದ ಕಥೆಯನ್ನು ಆಧರಿಸಿ ತಯಾರಾಗುವ ಸಿನಿಮಾಗೆ ರಿಷಬ್​ ಶೆಟ್ಟಿ ನಿರ್ದೇಶನ ಮಾಡಬೇಕು ಎಂದು ಹೇಳಿದ್ದಾರೆ. ಅವರ ಈ ವಿಡಿಯೋ ಸಖತ್​ ವೈರಲ್​ ಆಗಿದೆ.
ಮೈಸೂರಿನಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ನಟಿ, ರಾಖಿ ಸಾವಂತ್​ ಅವರ ಜೀವನದ ಕಥೆ ಇಟ್ಟುಕೊಂಡು ಸಿನಿಮಾ ಮಾಡಲು ಪ್ಲ್ಯಾನ್​ ನಡೆಯುತ್ತಿದೆ. ಅದಕ್ಕೆ ನಿರ್ಮಾಪಕರು ಕೂಡ ಮುಂದೆ ಬಂದಿದ್ದಾರೆ. ತಮ್ಮ ಪಾತ್ರವನ್ನು ವಿದ್ಯಾ ಬಾಲನ್​ ಮಾಡಿದರೆ ಉತ್ತಮ. ‘ನಿಮ್ಮ ಪಾತ್ರವನ್ನು ನೀವೇ ಮಾಡಬಹುದಲ್ಲ’ ಎಂದು ನಿರ್ಮಾಪಕರು ಹೇಳಿದ್ದಾರೆ. ‘ಆ ಬಗ್ಗೆ ನಾನು ಯೋಚಿಸಿಲ್ಲ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ. ರಾಖಿ ಸಾವಂತ್ ಅವರ ಸಿನಿಮಾವನ್ನು ಯಾರು ನಿರ್ದೇಶನ ಮಾಡಬೇಕು ಎಂಬ ಚರ್ಚೆ ನಡೆಯುತ್ತಿದೆ.
ಯಾರು ನಿರ್ದೇಶನ ಮಾಡಬೇಕು ಎನ್ನುವ ಪ್ರಶ್ನೆಗೆ ಉತ್ತರಿಸಿದ ರಾಖಿ, ನನಗೆ ಕಾಂತಾರ ಚಿತ್ರದ ನಿರ್ದೇಶಕ ರಿಷಬ್​ ಶೆಟ್ಟಿ ಹೆಚ್ಚು ಇಷ್ಟ’ ಎಂದು ರಾಖಿ ಸಾವಂತ್​ ಹೇಳಿದ್ದಾರೆ ಎನ್ನಲಾಗಿದೆ. ಈ ವಿಡಿಯೋ ಸಖತ್ ವೈರಲ್ ಆಗಿದ್ದು, ಇದಕ್ಕೆ ರಿಷಬ್ ಶೆಟ್ಟಿ ಅವರು ಹೇಗೆ ಪ್ರತಿಕ್ರಿಯೆ ನೀಡಲಿದ್ದಾರೆ ಎಂದು ಕಾದು ನೋಡಬೇಕಾಗಿದೆ.
60 ವರ್ಷಗಳಿಂದ ಮಹಿಳಾ ಸಿಬ್ಬಂದಿಯ ಸಮವಸ್ತ್ರವಾಗಿದ್ದ ಸೀರೆಗೆ ಗುಡ್​​ ಬೈ ಹೇಳಲು ಮುಂದಾದ ಏರ್ ಇಂಡಿಯಾ

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:fifteen + thirteen =
Remember me
