ರಾಮಜನ್ಮಭೂಮಿ ತೀರ್ಥಕ್ಷೇತ್ರ ಟ್ರಸ್ಟ್​ ಮುಖ್ಯಸ್ಥ ಮಹಾಂತ ನೃತ್ಯ ಗೋಪಾಲದಾಸ್​ ಅವರಲ್ಲಿ ಕರೊನಾ ಸೋಂಕು ದೃಢಪಟ್ಟಿದೆ.ಆಗಸ್ಟ್​ 5ರಂದು ಅಯೋಧ್ಯೆಯಲ್ಲಿ ನಡೆದ ಭೂಮಿ ಪೂಜೆಯಲ್ಲಿ ಮಹಾಂತ ನೃತ್ಯ ಗೋಪಾಲದಾಸ್​ ಅವರೂ ಭಾಗವಹಿಸಿದ್ದರು.ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಟ್ರಸ್ಟ್​ ಅಧ್ಯಕ್ಷರ ಆರೋಗ್ಯದ ಬಗ್ಗೆ ಸಂಪೂರ್ಣ ಮಾಹಿತಿ ಪಡೆದಿದ್ದಾರೆ ಎಂದು ಸಿಎಂ ಕಚೇರಿ ತಿಳಿಸಿದೆ.ಇದನ್ನೂ ಓದಿ:ಮಂಚದೊಳಗೆ ಕಾಳಿಂಗ ಸರ್ಪ: ಮೈ ಝುಂ ಎನಿಸುವ ವಿಡಿಯೋ ನೋಡಿ…
ಹಾಗೇ ಮಹಾಂತ ಜೀ ಅವರಿಗೆ ಆಸ್ಪತ್ರೆಯಲ್ಲಿ ಕೂಡಲೇ ಚಿಕಿತ್ಸೆ ನೀಡಬೇಕು. ಅವರಿಗೆ ಅಗತ್ಯವಾದ ಎಲ್ಲ ವೈದ್ಯಕೀಯ ವ್ಯವಸ್ಥೆಗಳನ್ನೂ ಶೀಘ್ರವೇ ಮಾಡಬೇಕು ಎಂದು ಸಿಎಂ, ಜಿಲ್ಲಾಧಿಕಾರಿಗೆ ಸೂಚಿಸಿದ್ದಾರೆ.
ಮಹಾಂತ ನೃತ್ಯ ಗೋಪಾಲದಾಸ್​ ಜೀ ಅವರ ಆರೋಗ್ಯ ಸ್ಥಿತಿ ಸ್ಥಿರವಾಗಿದೆ. ಸದ್ಯ ಮೇದಾಂತ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿದೆ ಎಂದು ಮಥುರಾ ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಆಗಸ್ಟ್​ 5ರಂದು ಅಂದರೆ ಎಂಟು ದಿನಗಳ ಹಿಂದೆ ಮಹಾಂತ ನೃತ್ಯ ಗೋಪಾಲದಾಸ್​ ಅವರು ಅಯೋಧ್ಯೆ ಭೂಮಿ ಪೂಜೆ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಸಿಎಂ ಆದಿತ್ಯನಾಥ್ ಸೇರಿ ಪ್ರಮುಖರೊಂದಿಗೆ ವೇದಿಕೆ ಹಂಚಿಕೊಂಡಿದ್ದರು. ಪೂಜೆಯಲ್ಲೂ ಪಾಲ್ಗೊಂಡಿದ್ದರು. ಆದಷ್ಟು ಶೀಘ್ರವೇ ರಾಮಮಂದಿರ ನಿರ್ಮಾಣವಾಗಬೇಕು ಎಂದು ಅಂದು ಮಾತನಾಡಿದ್ದರು. (ಏಜೆನ್ಸೀಸ್​)
ತೆರಿಗೆ ವ್ಯವಸ್ಥೆಯು ತಡೆರಹಿತ, ನೋವುರಹಿತ, ಮುಖರಹಿತವನ್ನಾಗಿಸಲು ಪ್ರಯತ್ನ: ಪ್ರಧಾನಿ ಮೋದಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 + 12 =
Remember me
