ತಿರುಪತಿ:ಜನವರಿ 22 ರಂದು ಅಯೋಧ್ಯೆಯಲ್ಲಿ ರಾಮಮಂದಿರ ಉದ್ಘಾಟನಾ ಕಾರ್ಯಕ್ರಮ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಸಕಲ ಸಿದ್ಧತೆಗಳು ನಡೆಯುತ್ತಿದೆ. ಮತ್ತೊಂದೆಡೆ ದೇಶ ವಿದೇಶದಿಂದ ಅಯೋಧ್ಯೆಗೆ ರಾಮಭಕ್ತರು ತಮ್ಮ ಕೈಲಾದಷ್ಟು ಕೊಡುಗೆಗಳನ್ನು ನೀಡುತ್ತಿದ್ದಾರೆ. ಅದೇ ರೀತಿ ತಿರುಪತಿ ವೆಂಕಟೇಶ್ವರ ಸ್ವಾಮಿ ಸನ್ನಿಧಿಯಿಂದಲೂ ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡಲು ಟಿಟಿಡಿ ಸಿದ್ಧತೆ ಮಾಡಿಕೊಂಡಿದೆ.
ಇದನ್ನೂ ಓದಿ:ಮಾಲ್​ಗಳಲ್ಲೂ ರಾಮಮಂದಿರ ಲೋಕಾರ್ಪಣೆ ಸಂಭ್ರಮಕ್ಕೆ ಸಿದ್ಧತೆ
ಈ ಸಬಂಧ ತಿರುಪತಿ ತಿರುಮಲ ದೇವಸ್ಥಾನ ಸಮಿತಿ(ಟಿಟಿಡಿ) ಅಧಿಕೃತವಾಗಿ ತಿಳಿಸಿದೆ. ದೇಗುಲದ ವತಿಯಿಂದ ಅಯೋಧ್ಯೆಗೆ 1 ಲಕ್ಷ ಲಡ್ಡು ಪೂರೈಕೆ ಮಾಡಲಾಗುವುದು ಎಂದು ಹೇಳಿದೆ.
ಉದ್ಘಾಟನೆಯ ದಿನ ರಾಮಭಕ್ತರಿಗೆ ಈ ಲಡ್ಡು ವಿತರಿಸಲಾಗುವುದು. ಪ್ರತಿ ಲಡ್ಡುವಿನ ತೂಕ 25 ಗ್ರಾಂ ಇರುತ್ತದೆ ಎಂದು ಟಿಟಿಡಿಯ ಅಧಿಕಾರಿಗಳು ವಿವರಿಸಿದ್ದಾರೆ.
ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡುವ ಕುರಿತು ಟಿಟಿಡಿ ಒಪ್ಪಿಗೆ ನೀಡಿದೆ. ಹೀಗಾಗಿ ಶ್ರೀರಾಮ ಪ್ರಾಣ ಪತಿಷ್ಠಾಪನೆಯ ದಿನದಂದು ಭಕ್ತರಿಗೆ ವಿತರಣೆ ಮಾಡಲು ಅಯೋಧ್ಯೆಗೆ ಲಡ್ಡು ಪೂರೈಕೆ ಮಾಡುತ್ತೇವೆ ಎಂದು ಟಿಟಿಡಿ ಆಡಳಿತ ಕಾರ್ಯನಿರ್ವಾಹಕ ಎ.ವಿ. ಧರ್ಮ ರೆಡ್ಡಿ ತಿಳಿಸಿದ್ದಾರೆ.
ಆಕೆಯನ್ನು ದೂರವಿಟ್ಟು ತಪ್ಪು ಮಾಡಿದೆ ಎಂದಿದ್ದೇಕೆ ಇನ್ಫೋಸಿಸ್​ ನಾರಾಯಣಮೂರ್ತಿ?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − four =
Remember me
