ನವದೆಹಲಿ: ರಾಮ ಮಂದಿರ ಟ್ರಸ್ಟ್​ ರಚನೆ ವಿಚಾರವನ್ನು ಪ್ರಧಾನಿ ನರೇಂದ್ರ ಮೋದಿ ಸಂಸತ್ತಿನಲ್ಲಿ ತಿಳಿಸಿದ ಬೆನ್ನಲ್ಲೇ ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್​ ನವದೆಹಲಿಯ ಗ್ರೇಟರ್​ ಕೈಲಾಶ್​ನಲ್ಲಿ ತನ್ನ ಕಚೇರಿಯನ್ನು ಹೊಂದಲಿದೆ ಎಂದು ಕೇಂದ್ರ ಗೃಹ ಸಚಿವಾಲಯ ಬುಧವಾರ ತಿಳಿಸಿದೆ.
ಈ ಟ್ರಸ್ಟ್​ ಅಯೋಧ್ಯೆಯಲ್ಲಿನ ರಾಮ ಮಂದಿರ ನಿರ್ಮಾಣ ಸಂಬಂಧ ವಿಚಾರಗಳನ್ನು ನಿರ್ವಹಣೆ ಮಾಡಲಿದೆ.
ಗೃಹ ಸಚಿವಾಲಯದ ಪ್ರಕಾರ ಟ್ರಸ್ಟ್​ ತನ್ನ ಕಚೇರಿಯ ವಿಳಾಸವನ್ನು ಶ್ರೀ ರಾಮ ಜನ್ಮಭೂಮಿ ತ್ರೀರ್ಥ ಕ್ಷೇತ್ರ, ಆರ್​-20, ಗ್ರೇಟರ್​ ಕೈಲಾಶ್​ ಪಾರ್ಟ್​-1, ನವದೆಹಲಿ, 110048 ಎಂದು ನೋಂದಾಯಿಸಿಕೊಂಡಿದೆ ಎಂದು ತಿಳಿದುಬಂದಿದೆ.
ಇದನ್ನೂ ಓದಿ:ಅಯೋಧ್ಯೆಯಲ್ಲಿ ಐದು ಎಕರೆ ಭೂಮಿ ಸುನ್ನಿ ವಕ್ಫ್​ ಬೋರ್ಡ್​ಗೆ ಹಂಚಿಕೆ ಮಾಡಿದ ಉತ್ತರ ಪ್ರದೇಶ ಸರ್ಕಾರ
ಇದೇ ವೇಳೆ ಉತ್ತರ ಪ್ರದೇಶ ಸರ್ಕಾರ ತನ್ನ ನೋಟಿಫಿಕೇಶನ್​ನಲ್ಲಿ ಸುನ್ನಿ ವಕ್ಫ್​ ಬೋರ್ಡ್​ಗೆ ಮಸೀದಿ ನಿರ್ಮಾಣ ಮಾಡಲು ಸುಪ್ರೀಂ ಕೋರ್ಟ್​ ಆದೇಶದಂತೆ 5 ಎಕರೆ ಭೂಮಿಯನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದೆ.
ಲಖನೌ ಹೆದ್ದಾರಿಯಲ್ಲಿ ಬರುವ ಜಿಲ್ಲಾ ಕೇಂದ್ರದಿಂದ ಸುಮಾರು 18 ಕಿ.ಮೀ ದೂರದಲ್ಲಿರುವ ಸೋಹ್ವಾಲ್ ತಾಲೂಕಿನ ಧನ್ನಿಪುರ ಗ್ರಾಮದಲ್ಲಿ ಜಮೀನು ಹಂಚಿಕೆ ಮಾಡಲಾಗಿದೆ ಎಂದು ಉತ್ತರ ಪ್ರದೇಶ ಸರ್ಕಾರದ ವಕ್ತಾರ ಶ್ರೀಕಾಂತ್ ಶರ್ಮಾ ಮಾಹಿತಿ ನೀಡಿದ್ದಾರೆ.(ಏಜೆನ್ಸೀಸ್​)
ಇದನ್ನೂ ಓದಿ:ರಾಮ ಮಂದಿರ ಟ್ರಸ್ಟ್​ನಲ್ಲಿ 15 ಟ್ರಸ್ಟಿಗಳು, ಅವರಲ್ಲೊಬ್ಬರು ದಲಿತರಾಗಿರುತ್ತಾರೆ: ಗೃಹ ಸಚಿವ ಅಮಿತ್ ಷಾ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × 3 =
Remember me
