ಜೈಪುರ:ರಾಜಸ್ಥಾನದ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದ ರಾಜೇಂದ್ರ ಸಿಂಗ್ ಗುಧಾ ಅವರು ಸರ್ಕಾರಿ ಕಾರ್ಯಕ್ರಮವೊಂದರಲ್ಲಿ ಹಿಂದೂ ದೇವತೆಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದು, ವಿವಾದಾತ್ಮಕ ಭಾಷಣದ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ಹೆಚ್ಚು ವೈರಲ್ ಆಗುತ್ತಿದೆ.ಇದನ್ನೂ ಓದಿ:ಜಗತ್ತಿನ ಟಾಪ್ 10 ಶ್ರೀಮಂತ ದೇಶಗಳ ಪಟ್ಟಿ ಇಲ್ಲಿದೆ…..ಮಾತೆ ಸೀತೆ ಮತ್ತು ಶ್ರೀರಾಮನ ಕುರಿತು ಗುಧಾ ನೀಡಿರುವ ಹೇಳಿಕೆಯ ವಿಡಿಯೋ ವೈರಲ್ ಆಗುತ್ತಿದ್ದು, ಈ ವಿಡಿಯೋಗೆ ಬಿಜೆಪಿ ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ. ವಿಡಿಯೋದಲ್ಲಿ ಹಿಂದೂಗಳ ಆರಾಧ್ಯದೈವದ ಬಗ್ಗೆ ಆಕ್ಷೇಪಾರ್ಹ ಕಾಮೆಂಟ್‌ಗಳನ್ನು ಮಾಡಲಾಗಿದ್ದು, ಪ್ರತಿಪಕ್ಷದ ಉಪನಾಯಕ ರಾಜೇಂದ್ರ ರಾಥೋಡ್ ಈ ಹೇಳಿಕೆಯನ್ನು ತೀವ್ರವಾಗಿ ಖಂಡಿಸಿದ್ದಾರೆ. ಜತೆಗೆ ಗುಧಾ ಸಾರ್ವಜನಿಕವಾಗಿ ಕ್ಷಮೆಯಾಚಿಸಬೇಕು ಎಂದಿದ್ದಾರೆ.ಜುಲೈ 10 ರಂದು ಸೈನಿಕ ಕಲ್ಯಾಣ ಸಚಿವ ರಾಜೇಂದ್ರ ಗುಧಾ, ಜುಂಜುನು ಜಿಲ್ಲೆಯ ಗುಧಗೌಡಜಿಯ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಈ ವೇಳೆ ಗುಧಾ, ಸೀತಾ ಮಾತೆ ಎಷ್ಟು ಸುಂದರವಾಗಿದ್ದಳೋ ಅದನ್ನು ಊಹಿಸಲೂ ಸಾಧ್ಯವಿಲ್ಲ. ಅವಳ ಸೌಂದರ್ಯದ ಹಿಂದೆ ಭಗವಾನ್ ಶ್ರೀರಾಮ ಮತ್ತು ರಾವಣನಂತಹ ಅದ್ಭುತ ಮಾನವರು ಹುಚ್ಚರಾಗಿ ಆಕೆಯ ಹಿಂದೆ ಬಿದ್ದಿದ್ದರು ಎಂದು ಹೇಳಿದ್ದಾರೆ.ಇದನ್ನೂ ಓದಿ:ಪ್ರಕೃತಿಗೆ ಟಿಶ್ಯೂ ದೊಡ್ಡ ಇಶ್ಯೂ: ನಿಯಂತ್ರಣಕ್ಕೆ ಕರವಸ್ತ್ರವೇ ಅಸ್ತ್ರ..ಹಿಂದೂ ದೇವತೆಗಳು ಮತ್ತು ಸನಾತನ ಸಂಸ್ಕೃತಿಯನ್ನು ಅವಮಾನಿಸುವುದು ಕಾಂಗ್ರೆಸ್ ನಾಯಕರ ಅಭ್ಯಾಸವಾಗಿದೆ ಎಂದು ರಾಜ್‌ಸಮಂದ್ ಲೋಕಸಭಾ ಸಂಸದೆ ದಿಯಾ ಕುಮಾರಿ ಹೇಳಿದ್ದು, ಮಾತೆ ಸೀತೆಯ ಬಗ್ಗೆ ಆಕ್ಷೇಪಾರ್ಹ ಹೇಳಿಕೆ ನೀಡಿ ಹಿಂದೂಗಳ ನಂಬಿಕೆಗೆ ಧಕ್ಕೆ ತಂದಿರುವ ಸಚಿವರು ಕ್ಷಮೆಯಾಚಿಸಬೇಕು ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × one =
Remember me
