ನವದೆಹಲಿ:ಅಯೋಧ್ಯೆ ರಾಮಮಂದಿರ ಭೂಮಿ ಪೂಜೆ ಆಗಸ್ಟ್​ 5ರಂದು ನಡೆಯಲಿದೆ. ಅಂದು ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಶಿಲಾನ್ಯಾಸ ನೆರವೇರಿಸಲಿದ್ದಾರೆ.
ಹಾಗೇ, ಈ ಕಾರ್ಯಕ್ರಮದಲ್ಲಿ ಕೆಲವು ರಾಜ್ಯಗಳ ಮುಖ್ಯಮಂತ್ರಿಗಳು, ಕೇಂದ್ರ ಸಚಿವರು, ಸಾಧು-ಸಂತರು, ಆರ್​ಎಸ್​ಎಸ್​ ಮುಖ್ಯಸ್ಥ ಮೋಹನ್ ಭಾಗವತ್​ ಸೇರಿ ಹಲವರು ಪಾಲ್ಗೊಳ್ಳಲಿದ್ದಾರೆ.
ರಾಮಮಂದಿರ ಭೂಮಿ ಪೂಜೆಯ ಮೊದಲ ಆಮಂತ್ರಣ ಪತ್ರಿಕೆ, ಬಾಬ್ರಿ ಮಸೀದಿ ಪರ ಪ್ರಮುಖ ಅರ್ಜಿದಾರರಾದ ಇಕ್ಬಾಲ್​ ಅನ್ಸಾರಿ ಅವರಿಗೆ ಕೊಡಲಾಗಿದೆ ಎಂದು ಮೂಲಗಳು ತಿಳಿಸಿವೆ.ಇದನ್ನೂ ಓದಿ:ದಶಕಗಳಿಂದಲೂ ಪೊಲೀಸರು ಹುಡುಕುತ್ತಿದ್ದ ನಕ್ಸಲನನ್ನು ರಕ್ಷಾ ಬಂಧನದಂದೇ ಶರಣಾಗುವಂತೆ ಮಾಡಿದ್ದು ಆತನ ಸೋದರಿ…!
ಹಾಗೇ, ಈ ಆಮಂತ್ರಣ ಪತ್ರಿಕೆ ಹಳದಿ ಬಣ್ಣದಲ್ಲಿದೆ. ಅದರಲ್ಲಿ ಪ್ರಧಾನಿ ನರೇಂದ್ರ ಮೋದಿಯವರ ಹೆಸರನ್ನೂ ಹಾಕಲಾಗಿದೆ. ಒಟ್ಟು 200 ಜನರಿಗೆ ಆಮಂತ್ರಣ ಪತ್ರಿಕೆ ಕಳಿಸಲಾಗುತ್ತದೆ ಎಂದು ರಾಮಜನ್ಮಭೂಮಿ ಟ್ರಸ್ಟ್​ನ ಮೂಲಗಳು ತಿಳಿಸಿವೆ.ರಾಮಮಂದಿರ ಒಟ್ಟು 161 ಅಡಿ ಎತ್ತರ ಇರಲಿದ್ದು, ಮೂರರಿಂದ ಮೂರುವರೆ ವರ್ಷಗಳ ಅವಧಿಯಲ್ಲಿ ನಿರ್ಮಾಣ ಕಾರ್ಯ ಪೂರ್ಣಗೊಳ್ಳಲಿದೆ.
ಸದ್ಯ ಅಯೋಧ್ಯೆಯ ರಾಮಮಂದಿರ ನಿರ್ಮಾಣದ ಸ್ಥಳದಲ್ಲಿ ಭರ್ಜರಿ ಸಿದ್ಧತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿಯವರ ಪೋಸ್ಟರ್​ ಹಾಗೂ ಕೇಸರಿ ಧ್ವಜಗಳನ್ನು ಅಳವಡಿಸಲಾಗುತ್ತಿದೆ. (ಏಜೆನ್ಸೀಸ್​)

ಮೂರು ಭಾಷೆಗಳಲ್ಲಿ ತ್ರಿಕೋನ ಬಿಡುಗಡೆ; ವರಮಹಾಲಕ್ಷ್ಮೀ ಹಬ್ಬಕ್ಕೆ ಬಂತು ಮೋಷನ್​ ಪೋಸ್ಟರ್

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:12 − 9 =
Remember me
