ಅಯೋಧ್ಯೆ:ಬಹು ವರ್ಷಗಳ ನಂತರ ಅಯೋಧ್ಯೆಯಲ್ಲಿ ಆರಂಭವಾಗಿದ್ದ ರಾಮಮಂದಿರ ನಿರ್ಮಾಣ ಕಾರ್ಯವನ್ನು ಭಾರತ ಮತ್ತು ಚೀನಾ ನಡುವಿನ ಘರ್ಷಣೆಯ ಹಿನ್ನೆಲೆಯಲ್ಲಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಿರ್ಮಾಣ ಕಾರ್ಯ ಸ್ಥಗಿತದ ಕುರಿತಂತೆ ರಾಮಮಂದಿರ ಟ್ರಸ್ಟ್ ಮಾಹಿತಿ ನೀಡಿದೆ. ”ದೇಶದ ರಕ್ಷಣೆ ಬಹಳ ಮುಖ್ಯ. ಪರಿಸ್ಥಿತಿ ಬಹಳ ಗಂಭೀರವಾಗಿದೆ. ರಾಮ ಮಂದಿರ ನಿರ್ಮಾಣ ಯೋಜನೆ ಈಗ ಆರಂಭಿಸುವುದು ಸೂಕ್ತವಲ್ಲ, ಸದ್ಯಕ್ಕೆ ರಾಮಮಂದಿರ ನಿರ್ಮಾಣ ಯೋಜನೆ ಇಲ್ಲ” ಎಂದು ಟ್ರಸ್ಟ್​ ಸದಸ್ಯ ಅನಿಲ್ ಮಿಶ್ರಾ ಹೇಳಿದ್ದಾರೆ.
‘ರಾಮಮಂದಿರ ನಿರ್ಮಾಣ ಕಾರ್ಯ ಪ್ರಾರಂಭದ ಬಗ್ಗೆ ದೇಶದ ಪರಿಸ್ಥಿತಿ ಅನುಗುಣವಾಗಿ ತೆಗೆದುಕೊಳ್ಳಲಾಗುವುದು ಮತ್ತು ಅಧಿಕೃತವಾಗಿ ಘೋಷಣೆ ಮಾಡಲಾಗುವುದು’ ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ:ಈ ಕಳ್ಳರನ್ನು ನೀವೂ ಹೊಗಳುತ್ತೀರಿ- ಏಕೆಂದು ವಿಡಿಯೋ ನೋಡಿ!
ಗಾಲ್ವಾನ್ ಕಣಿವೆ ಪ್ರದೇಶದಲ್ಲಿ ಭಾರತ ಮತ್ತು ಚೀನಾ ಸೇನೆಯ ನಡುವೆ ಘರ್ಷಣೆ ಸಂಭವಿಸಿದ್ದು, ಈ ಘಟನೆಯಲ್ಲಿ 20 ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಇಂತಹ ಸಂದರ್ಭದಲ್ಲಿ ರಾಮಮಂದಿರ ಕಾರ್ಯ ಸೂಕ್ತವಲ್ಲ ಎಂದು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ ಮಿಶ್ರಾ ಹೇಳಿದ್ದಾರೆ.
ಜುಲೈ ಮೊದಲ ವಾರದಲ್ಲಿ ರಾಮಮಂದಿರ ನಿರ್ಮಾಣಕ್ಕೆ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಭೂಮಿ ಪೂಜೆ ನಡೆಸಲಿದ್ದಾರೆ ಎನ್ನಲಾಗಿತ್ತು. ಈ ಸಂಬಂಧ ಎಲ್ಲ ತಯಾರಿ ಸಹ ನಡೆಯುತ್ತಿತ್ತು. ಇದೀಗ ಉದ್ವಿಘ್ನ ಸ್ಥಿತಿ ನಿರ್ಮಾಣವಾಗಿರುವ ಕಾರಣ, ಸದ್ಯ ಸ್ಥಗಿತಗೊಳಿಸಲಾಗಿದ್ದು, ವಾತಾವರಣ ತಿಳಿಗೊಂಡ ನಂತರ ಕಾರ್ಯ ಮುಂದುವರೆಯಲಿದೆ.(ಏಜೆನ್ಸೀಸ್​)
ಹಿಜ್ಬುಲ್​ ಉಗ್ರನ ಸೆರೆ- ಮಸೀದಿಗೆ ಧಕ್ಕೆ ಮಾಡದೇ ಎಂಟು ಮಂದಿ ಹತ್ಯೆ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:three × 2 =
Remember me
