ಮುಂಬೈ:ಬಾಲಿವುಡ್ ನಟ ರಣಬೀರ್ ಕಪೂರ್ ಕ್ರಿಸ್‌ಮಸ್ ಆಚರಿಸುತ್ತಿರುವ ವಿಡಿಯೋ ವೈರಲ್ ಆಗಿದ್ದು, ಅವರು ಮತ್ತು ಅವರ ಕುಟುಂಬದವರು “ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ” ಎಂದು ಆರೋಪಿಸಿ ವ್ಯಕ್ತಿಯೊಬ್ಬರು ಮುಂಬೈನಲ್ಲಿ ದೂರು ನೀಡಿದ್ದಾರೆ.
ಹಿಂದೂಗಳ ಭಾವನೆಗಳಿಗೆ ಧಕ್ಕೆ ತಂದ ಆರೋಪದ ಮೇಲೆ ಬಾಲಿವುಡ್ ಜನಪ್ರಿಯ ನಟ ರಣಬೀರ್ ಕಪೂರ್ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಕ್ರಿಸ್‌ಮಸ್ ಆಚರಣೆ ವೇಳೆ ಬಾಲಿವುಡ್ ನಟ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಕೇಕ್ ಮೇಲೆ ಮದ್ಯ ಸುರಿದು ಬೆಂಕಿ ಹಚ್ಚಿದ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ.
A post shared by Pooja Desai (@poojadesai)
ಹಿಂದೂ ಧರ್ಮದಲ್ಲಿ ಇತರ ದೇವತೆಗಳನ್ನು ಆಹ್ವಾನಿಸುವ ಮೊದಲು ಅಗ್ನಿ ದೇವರನ್ನು ಪೂಜಿಸಲಾಗುತ್ತದೆ.  ಆದರೆ ರಣಬೀರ್ ಕಪೂರ್ ಮತ್ತು ಅವರ ಕುಟುಂಬ ಸದಸ್ಯರು ಕ್ರಿಶ್ಚಿಯನ್ ಹಬ್ಬವನ್ನು ಆಚರಿಸುವಾಗ ಉದ್ದೇಶಪೂರ್ವಕವಾಗಿ ಮದ್ಯ ಸೇವಿಸಿ ಜೈ ಮಾತಾ ದಿ ಎಂದು ಘೋಷಣೆ ಕೂಗಿದ್ದಾರೆ ಎಂದು ಮುಂಬೈ ಮೂಲದ ಸಂಜಯ್ ತಿವಾರಿ ದೂರಿನಲ್ಲಿ ತಿಳಿಸಿದ್ದಾರೆ. ಸಂಜಯ್ ತಿವಾರಿ ಅವರು ತಮ್ಮ ವಕೀಲರಾದ ಆಶಿಶ್ ರಾಯ್ ಮತ್ತು ಪಂಕಜ್ ಮಿಶ್ರಾ ಮೂಲಕ ಮುಂಬೈನ ಘಾಟ್‌ಕೋಪರ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ವೈರಲ್ ವಿಡಿಯೋವೊಂದರಲ್ಲಿ ಹಿಂದೂ ಭಾವನೆಗಳಿಗೆ ಧಕ್ಕೆ ತಂದಿರುವ ಆರೋಪದ ಮೇಲೆ ರಣಬೀರ್ ಕಪೂರ್ ವಿರುದ್ಧ ಮುಂಬೈ ಪೊಲೀಸರಿಗೆ ದೂರು ನೀಡಲಾಗಿದ್ದರೂ, ಪ್ರಕರಣಕ್ಕೆ ಸಂಬಂಧಿಸಿದಂತೆ ಇನ್ನೂ ಪ್ರಥಮ ಮಾಹಿತಿ ವರದಿ (ಎಫ್‌ಐಆರ್) ದಾಖಲಾಗಿಲ್ಲ. ರಣಬೀರ್ ಕಪೂರ್ ತಮ್ಮ ಧಾರ್ಮಿಕ ಭಾವನೆಗಳಿಗೆ ಧಕ್ಕೆ ತಂದಿದ್ದಾರೆ ಎಂದು ಸಂಜಯ್ ತಿವಾರಿ ಪೊಲೀಸರಿಗೆ ದೂರು ನೀಡಿದ್ದಾರೆ.
ನಮಸ್ಕಾರ ದೇವರು Coming soon ಎಂದ್ರು ಡಾ.ಬ್ರೋ; ‘ನನ್ನ ದೇವ್ರು ಇಷ್ಟು ದಿನ ಎಲ್ಲಿದ್ರಿ’ ಎಂದ ಫ್ಯಾನ್ಸ್​

ನಟಿಗೆ ರತ್ನ ಖಚಿತ ಟಾಯ್ಲೆಟ್‌ ಸೀಟ್ ಗಿಫ್ಟ್ ನೀಡಿದ ಪತಿ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × five =
Remember me
