ಪಣಜಿ:ಅತ್ಯಾಚಾರದ ಆರೋಪ ಹೊಂದಿದ್ದ ಕೈದಿಯೊಬ್ಬ ಸೆಂಟ್ರಲ್​ ಜೈಲ್​ನಿಂದಲೇ ಪರಾರಿಯಾಗಿರುವ ಅಪರೂಪದ ಪ್ರಸಂಗ ವರದಿಯಾಗಿದೆ. ವಿದೇಶಿ ಯುವತಿಯ ಮೇಲೆ ಅತ್ಯಾಚಾರ ನಡೆಸಿದ ಆರೋಪ ಇವನ ಮೇಲಿದೆ.
ತಮಿಳುನಾಡು ಮೂಲದ ರಾಮಚಂದ್ರನ್​ ಚೆನ್ನಂಡಾಯೆಲ್ಲಪ್ಪ ಎಂಬ ಈ ಆರೋಪಿ ಗೋವಾದ ಕೇಂದ್ರ ಕಾರಾಗೃಹದಿಂದ ಮಂಗಳವಾರ ಪರಾರಿಯಾಗಿದ್ದಾನೆ. ಈತ 2018ರ ಡಿಸೆಂಬರ್​ನಲ್ಲಿ ದಕ್ಷಿಣ ಗೋವಾ ಜಿಲ್ಲೆಯ ಕೆನಕೊನಾ ಎಂಬಲ್ಲಿ ಬ್ರಿಟಿಷ್​ ಯುವತಿ ಮೇಲೆ ಅತ್ಯಾಚಾರ ನಡೆಸಿದ್ದ ಬಗ್ಗೆ ಪ್ರಕರಣ ದಾಖಲಾಗಿದೆ. ಈತನ ಪತ್ತೆಗೆ ತೀವ್ರ ಶೋಧ ನಡೆಸಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಗಳು ತಿಳಿಸಿದ್ದಾರೆ.
ಅಂದಹಾಗೆ ಈ ಆರೋಪಿ ಜೈಲಿನಿಂದ ಪರಾರಿ ಆಗುತ್ತಿರುವುದು ಇದೇ ಮೊದಲೇನಲ್ಲ. 2019ರ ಜುಲೈನಲ್ಲೂ ಈತ ಜೈಲ್​ನಿಂದ ಪರಾರಿಯಾಗಿದ್ದು, ಬಳಿಕ ತಮಿಳುನಾಡು ಪೊಲೀಸರು ಈತನನ್ನು ಮತ್ತೆ ಬಂಧಿಸಿ ಸೆರೆಮನೆಗೆ ತಳ್ಳಿದ್ದರು ಎಂದು ಪೊಲೀಸ್​ ಮೂಲಗಳು ತಿಳಿಸಿವೆ. (ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 4 =
Remember me
