ಲಖನೌ:ಅತ್ಯಾಚಾರದ ಆರೋಪದ ಮೇಲೆ ಜೈಲು ಸೇರಿದ್ದ ಯುವಕನೊಬ್ಬ ಕೋರ್ಟ್‌ನಿಂದ ಜಾಮೀನು ಪಡೆದು ಹೊರಕ್ಕೆ ಬಂದು ಅತ್ಯಾಚಾರ ಸಂತ್ರಸ್ತೆ ಹಾಗೂ ಆಕೆಯ ತಾಯಿಯನ್ನು ಟ್ರ್ಯಾಕ್ಟರ್‌ ಹರಿಸಿ ಅಮಾನುಷವಾಗಿ ಕೊಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಅಮಪುರದಲ್ಲಿ ನಡೆದಿದೆ.
ಪೊಲೀಸರು ಆರೋಪಿ ಯಶ್ವೀರ್‌ನನ್ನು ಬಂಧಿಸಿ ಕೊಲೆ ಪ್ರಕರಣ ದಾಖಲು ಮಾಡಿಕೊಂಡಿದ್ದಾರೆ.
ಯಶ್ವೀರ್‌ನ ತಂದೆ ಮಹಾವೀರ್‌ ರಜಪೂತ್‌ ಹಾಗೂ ಸಂತ್ರಸ್ತೆ ಬಾಲಕಿಯ ತಂದೆಯ ನಡುವೆ ಹಣಕಾಸಿನ ವ್ಯವಹಾರದಲ್ಲಿ ವಿವಾದ ಉಂಟಾಗಿತ್ತು. ಈ ನಡುವೆ ಯಶ್ವೀರ್‌ನ ತಂದೆ ಮಹಾವೀರ್‌ ಅವರ ಕೊಲೆಯಾಗಿತ್ತು. ಈ ಕೊಲೆಯನ್ನು ಸಂತ್ರಸ್ತೆಯ ತಂದೆಯೇ ಮಾಡಿರುವುದಾಗಿ ಆರೋಪಿಸಿದ್ದ ಯಶ್ವೀರ್‌, ಅವರ ಮಗಳ ಮೇಲೆ ಅತ್ಯಾಚಾರ ಎಸಗಿರುವ ಆರೋಪ ಎದುರಿಸುತ್ತಿದ್ದಾನೆ.
ಇದನ್ನೂ ಓದಿ:ಮಸೀದಿಗಳಲ್ಲಿ ಹೀಗೆ ಮಾಡಿದರೆ ಕರೊನಾ ಹೋಗುತ್ತೆ- ಸಂಸದನ ಸಲಹೆ ಕೇಳಿ…
ಇದಕ್ಕೆ ಸಂಬಂಧಿಸಿದಂತೆ ಸಂತ್ರಸ್ತೆ ಮತ್ತು ತಾಯಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡಿದ್ದರು. ಇದರಿಂದ ಯಶ್ವೀರ್ ಜೈಲಿನಲ್ಲಿ ಇದ್ದ. ಕಳೆದ ವಾರ ಆತನಿಗೆ ಕೋರ್ಟ್‌ ಜಾಮೀನು ನೀಡಿತ್ತು. ತನ್ನ ತಂದೆಯ ಕೊಲೆಯ ಸಿಟ್ಟು ಇನ್ನೂ ಮಾಸಿರದ ಯಶ್ವೀರ್‌ ಸಂತ್ರಸ್ತೆ ಹಾಗೂ ಆಕೆಯ ತಾಯಿಯ ಮೇಲೆ ಟ್ರ್ಯಾಕ್ಟರ್‌ ಹರಿಸಿ ಸಾಯಿಸಿದ್ದಾನೆ.
ತಾಯಿ-ಮಗಳು ಮಾರುಕಟ್ಟೆಗೆ ಹೋಗಿ ಬರುವ ಸಂದರ್ಭದಲ್ಲಿ ಈ ಘಟನೆ ನಡೆದಿದೆ. ಘಟನೆ ನಡೆದ ತಜ್ಷಣ ಗ್ರಾಮಸ್ಥರು ಪ್ರತಿಭಟನೆ ನಡೆಸಿ ಆರೋಪಿಯನ್ನು ಬಂಧಿಸುವಂತೆ ಆಗ್ರಹಿಸಿದ್ದರು. ಪೊಲೀಸರು ಆತನನ್ನು ವಶಕ್ಕೆ ಪಡೆದು ತನಿಖೆ ನಡೆಸುತ್ತಿದ್ದಾರೆ.
ಡ್ರೋನ್‌ ಪ್ರತಾಪ್‌ ಎಲ್ಲಿದ್ದಾನೆಂದು ಕೊನೆಗೂ ಕಂಡುಹಿಡಿದ ಪೊಲೀಸರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fifteen + twelve =
Remember me
