ನವದೆಹಲಿ:ಬಹುಭಾಷಾ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಈ ಬಗ್ಗೆ ಸಿನಿಮಾ ಸೇರಿದಂತೆ ಹಲವು ಕ್ಷೇತ್ರದ ಗಣ್ಯರು ರಿಯಾಕ್ಟ್​ ಮಾಡಿದ್ದಾರೆ. ಇದೀಗ ಇದಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು FIR ದಾಖಲಿಸಿಕೊಂಡಿದ್ದಾರೆ.
ಎಐ ತಂತ್ರಜ್ಞಾನ ಬಳಸಿ ನಟಿ ರಶ್ಮಿಕಾ ಮಂದಣ್ಣ ಅವರ ಡೀಪ್​ಫೇಕ್​ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿತ್ತು ಮತ್ತು ವ್ಯಾಪಕ ಆಕ್ರೋಶಕ್ಕೆ ಗುರಿಯಾಗಿತ್ತು.
ಇದನ್ನೂ ಓದಿ:ರಾಜಸ್ಥಾನ ಚುನಾವಣೆ| ಜೈಪುರದ ಗಣಪತಿ ಪ್ಲಾಜಾ ಮೇಲೆ ಐಟಿ ದಾಳಿ; ಕೋಟ್ಯಂತರ ರೂಪಾಯಿ ಹಣ ವಶ
ಡೀಪ್​ಫೇಕ್​ ವಿಡಿಯೋ ಪ್ರಕರಣಕ್ಕೆ ಸಂಬಂಧಿಸಿದಂತೆ ಭಾರತ ದಂಡ ಸಂಹಿತೆ (IPC Section) 465, 469, ಮಾಹಿತಿ ತಂತ್ರಜ್ಞಾನ ಕಾಯಿದೆ, 2000 ರ ಸೆಕ್ಷನ್ 66C ಮತ್ತು 66E ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ ಮತ್ತು ತನಿಖೆ ಮಾಡಲಾಗುತ್ತಿದೆ ಎಂದು ಹಿರಿಯ ಪೊಲೀಸ್​ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಇದು ನಿಜವಾಗಿಗೂ ಆಘಾತಕಾರಿ ವಿಚಾರವಾಗಿದ್ದು, ಮನಸ್ಸಿಗೆ ತೀವ್ರ ನೋವುಂಟು ಮಾಡಿದೆ ಎಂದು ರಶ್ಮಿಕಾ ಮಂದಣ್ಣ ಹೇಳಿದ್ದರು. ಇದರ ಬೆನ್ನಲ್ಲೇ ಆದೇಶ ಹೊರಡಿಸಿದ ಕೇಂದ್ರ ಸರ್ಕಾರ ಡೀಪ್​ಫೇಕ್​ ವಿಡಿಯೋ ಮಾಡುವವರಿಗೆ 3ಲಕ್ಷ ರೂಪಾಯಿ ದಂಡ ಮತ್ತು 1 ವರ್ಷ ಜೈಲು ಶಿಕ್ಷೆ ವಿಧಿಸುವುದಾಗಿ ಎಚ್ಚರಿಸಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 3 =
Remember me
