ಆಲ್ ಕೇರಳ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಮತ್ತು ವೆಲ್‌ಫೇರ್ ಅಸೋಸಿಯೇಷನ್, ಅಗತ್ಯವಿರುವ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಸಹಾಯ ಮಾಡುತ್ತಿರುವ ಚಿತ್ರವನ್ನು ಇಂದು ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡು ಸಂತಸ ವ್ಯಕ್ತಪಡಿಸಿದ್ದಾರೆ.
ನ್ಯಾಷನಲ್ ಕ್ರಶ್, ಕೊಡಗಿನ ಬೆಡಗಿ, ಬಹುಭಾಷಾ ಚಿತ್ರರಂಗದ ಬಹು ಬೇಡಿಕೆ ನಟಿ ರಶ್ಮಿಕಾ ಮಂದಣ್ಣ ಅಪಾರ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಅವರ ಅಭಿಮಾನಿಗಳು ಕೇವಲ ಚಲನಚಿತ್ರಗಳನ್ನು ವೀಕ್ಷಿಸುವುದಲ್ಲದೇ, ನಟಿಯ ಹೆಸರಿನಲ್ಲಿ ಸಮಾಜ ಸೇವೆ ಕೂಡ ಮಾಡುತ್ತಾರೆ. ಕೇರಳದಲ್ಲಿ ರಶ್ಮಿಕಾ ಮಂದಣ್ಣ ಅಭಿಮಾನಿಗಳ ಸಂಘವು ಇತ್ತೀಚೆಗೆ ತಮ್ಮ ಸಮಾಜ ಸೇವೆ ಮೂಲಕ ನಟಿಯನ್ನು ಸಂತೋಷಪಡಿಸಿದೆ. ಅವರನ್ನು ಹೆಮ್ಮೆ ಪಡುವಂತೆ ಮಾಡಿದೆ.
ಆಲ್ ಕೇರಳ ರಶ್ಮಿಕಾ ಮಂದಣ್ಣ ಅಭಿಮಾನಿಗಳು ಮತ್ತು ವೆಲ್‌ಫೇರ್ ಅಸೋಸಿಯೇಷನ್, ಅಗತ್ಯವಿರುವ ವಿದ್ಯಾರ್ಥಿಗಳಿಗೆ ಪುಸ್ತಕಗಳನ್ನು ನೀಡಿ ಸಹಾಯ ಮಾಡುತ್ತಿರುವ ಚಿತ್ರವನ್ನು ಇಂದು ನಟಿ ರಶ್ಮಿಕಾ ಮಂದಣ್ಣ ತಮ್ಮ ಇನ್​ಸ್ಟಾಗ್ರಾಮ್​​ನಲ್ಲಿ ಹಂಚಿಕೊಂಡಿದ್ದಾರೆ.
ಚಿತ್ರವನ್ನು ಹಂಚಿಕೊಂಡಿರುವ ರಶ್ಮಿಕಾ, ‘ಇದು ನನ್ನ ಹೃದಯವನ್ನು ತುಂಬಾ ಸಂತೋಷಪಡಿಸಿದೆ’ ಎಂದು ಬರೆದು ಹೃದಯದ ಇಮೋಜಿಯನ್ನು ಹಾಕಿದ್ದಾರೆ. ಜೊತೆಗೆ ತಮ್ಮ ಅಭಿಮಾನಿಗಳ ಸಂಘ ಹಂಚಿಕೊಂಡ ಪೋಸ್ಟ್‌ಗೆ ಕಾಮೆಂಟ್ ಮಾಡಿರುವ ರಶ್ಮಿಕಾ ‘ನೀವು ಉತ್ತಮವಾದದ್ದಕ್ಕೆ ಮಾತ್ರ ಅರ್ಹರು’ ಎಂದಿದ್ದಾರೆ.
ರಾಣಿ ಎಲಿಜಬೆತ್​ ನಿಧನ, ಬ್ರಿಟನ್​ನಲ್ಲಿ 10 ದಿನ ರಾಷ್ಟ್ರೀಯ ಶೋಕ: ಪ್ರಧಾನಿ ಮೋದಿ ಸಂತಾಪ

ಕಲಾತ್ಮಕ ಸಹಿಯ ಶಾಂತಯ್ಯ ಇನ್ನಿಲ್ಲ: ಸಾವಲ್ಲೂ ಸಾರ್ಥಕತೆ ಮೆರೆದ ನಿವೃತ್ತ ಉಪನೋಂದಣಾಧಿಕಾರಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nineteen − 18 =
Remember me
