ನವದೆಹಲಿ:ರಾಷ್ಟ್ರೀಯ ಲೋಕ ದಳ (ಆರ್​ಎಲ್​ಡಿ) ಮತ್ತು ಮಾಜಿ ಕೇಂದ್ರ ಸಚಿವ ಚೌಧರಿ ಅಜಿತ್​ ಸಿಂಗ್ (82) ಅವರು ಕರೊನಾ ಸೋಂಕಿನಿಂದ ಗುರುವಾರ ಮೃತಪಟ್ಟಿದ್ದಾರೆ.​
ಅಜಿತ್​ ಸಿಂಗ್​ ಪಶ್ಚಿಮ ಉತ್ತರ ಪ್ರದೇಶದ ಓರ್ವ ಸಜ್ಜನ ರಾಜಕಾರಣಿ. ಏಪ್ರಿಲ್​ 20ರಂದು ಅವರಿಗೆ ಕರೊನಾ ಪಾಸಿಟಿವ್​ ಆಗಿತ್ತು. ಆದರೆ, ಆರೋಗ್ಯ ಪರಿಸ್ಥಿತಿ ತೀವ್ರ ಹದಗೆಟ್ಟ ಹಿನ್ನೆಲೆಯಲ್ಲಿ ಮಂಗಳವಾರ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೇ ಇಹಲೋಕ ತ್ಯಜಿಸಿದ್ದಾರೆ.
ಇಂದು ಅಜಿತ್​ ಸಿಂಗ್​​ ಮೃತಪಟ್ಟರೆಂದು ಭಾರವಾದ ಹೃದಯದಿಂದ ನಿಮಗೆ ತಿಳಿಸುತ್ತಿದ್ದೇನೆ. ಬೆಳಗ್ಗೆ 8.20ರ ಸುಮಾರಿಗೆ ಕೊನೆಯುಸಿರೆಳೆದರು. ಅವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಐಸಿಯು ಮತ್ತು ವೆಂಟಿಲೇಟರ್​ ಬೆಂಬಲದೊಂದಿಗೆ ಕಳೆದ ಕೆಲವು ದಿನಗಳಿಂದ ಚಿಕಿತ್ಸೆ ನೀಡಲಾಗುತ್ತಿತ್ತು ಎಂದು ಅಜಿತ್​ ಸಿಂಗ್​ ಅವರ ಪಿಎ ಮಾಹಿತಿ ನೀಡಿದರು.
ಈ ಬಗ್ಗೆ ಮಾಜಿ ಸಂಸದ ಜಯಂತ್​ ಚೌಧರಿ ಸಹ ಟ್ವೀಟ್​ ಮೂಲಕ ಖಚಿತಪಡಿಸಿದ್ದಾರೆ. ಹೀಗೆ ಅನೇಕರು ಅಜಿತ್​ ಸಿಂಗ್​ ಸಾವಿಗೆ ಕಂಬನಿ ಮಿಡಿದಿದ್ದಾರೆ. ಕಾಂಗ್ರೆಸ್​ ನಾಯಕ ರಾಹುಲ್​ ಗಾಂಧಿ ಸಹ ಸಂತಾಪ ಸೂಚಿಸಿದ್ದಾರೆ.
चौधरी साहब नहीं रहे!🙏🏽pic.twitter.com/7cnLkf0c6K
— Jayant Singh (@jayantrld)May 6, 2021

ಅಜಿತ್​ ಸಿಂಗ್​ ಅವರು ದೇಶದ ಮಾಜಿ ಪ್ರಧಾನಿ ಚೌಧರಿ ಚರಣ್​ ಸಿಂಗ್​ ಅವರ ಮಗ. ಇವರು 8 ಬಾರಿ ಸಂಸತ್ತಿನ ಸದಸ್ಯರಾಗಿ ಸೇವೆ ಸಲ್ಲಿಸಿದ್ದಾರೆ. ಒಂದು ಬಾರಿ ರಾಜ್ಯಸಭಾ ಸದಸ್ಯರು ಸಹ ಆಗಿದ್ದರು. ನಾಲ್ಕು ಬಾರಿ ಕೇಂದ್ರ ಸಚಿವರಾಗಿಯು ಸೇವೆ ಸಲ್ಲಿಸಿದ್ದಾರೆ.(ಏಜೆನ್ಸೀಸ್​)
ಸಿನಿ ರಂಗಕ್ಕೆ ಕರೊನಾಘಾತ! ಒಂದೇ ದಿನ ಸೋಂಕಿಗೆ ಬಲಿಯಾದ ಇಬ್ಬರು ತಾರೆಯರು

ಕರೊನಾಗೆ ಬಲಿಯಾದ ಕವಿರತ್ನ ಕಾಳಿದಾಸ, ಅಂಜದ ಗಂಡು ನಿರ್ದೇಶಕ ರೇಣುಕಾ ಶರ್ಮಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:fourteen + 5 =
Remember me
